ಮಂಗಳೂರು, : ಪುತ್ತೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ಬಿಸಿ ರೋಡ್ ಕಡೆಗೆ ಚಲಿಸುತ್ತಿದ್ದ ಕಾರು ಡಿಕ್ಕಿಯಾಗಿ, ಬಸ್ ಪಲ್ಟಿಯಾದ ಘಟನೆ ನಗರದ ಅಡ್ಯಾರ್ ನ ಬರಾಕ್ ಸ್ಕೂಲ್ ಬಳಿ ನಡೆದಿದೆ. ಘಟನೆಯಿಂದ ಕಾರು ಚಾಲಕ ಗಂಭೀರ ಗಾಯಗೊಂಡರೆ , ಬಸ್ ನಲ್ಲಿದ್ದ ಸುಮಾರು 16ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದೆ. ಇವರನ್ನು ನಗರ ಖಾಸಗಿ ಹಾಗೂ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ ನ ಚಕ್ರವು ಸ್ಫೋಟಗೊಂಡ ಕಾರಣದಿಂದ ನಿಯಂತ್ರಣ ತಪ್ಪಿದ ಬಸ್ ರಸ್ತೆ ವಿಭಜಕದ ಮೇಲೆ ಹತ್ತಿ ಪಕ್ಕದಲ್ಲಿ ಚಲಿಸುತ್ತಿದ್ದ ಕಾರ್ ಗೆ ಢಿಕ್ಕಿ ಹೊಡೆದಿದೆ. ಬಸ್ ನಲ್ಲಿದ್ದ 16 ಮಂದಿ ಹಾಗೂ ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಘಟನೆ ಬಳಿಕ ಸಂಚಾರ ದಟ್ಟಣೆಯುಂಟಾಗಿದ್ದು,ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಧಾವಿಸಿ ಬಂದು , ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದಾರೆ. ಕಂಕನಾಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…