ಮಂಗಳೂರು: ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಹಣವನ್ನು ಉಪಾಯದಿಂದ ವಂಚಕನೊಬ್ಬ ತನ್ನ ಖಾತೆಗೆ ವರ್ಗಾಯಿಸಿರುವುದಾಗಿ ವರದಿಯಾಗಿದ್ದು, ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ವ್ಯಕ್ತಿಯೊಬ್ಬರು ಯಾತ್ರಾ ಡಾಟ್ ಕಾಮ್ ಎನ್ನುವ ವೆಬ್‌ಸೈಟ್‌ನಲ್ಲಿ ಜ. 8ರಂದು 6,380 ರೂ. ಪಾವತಿ ಟಿಕೆಟ್ ಬುಕ್ ಮಾಡಿದ್ದರು. ಆದರೆ ಬಳಿಕ 99,860ರೂ. ಕಳೆದುಕೊಂಡಿದ್ದಾರೆ. ಟಿಕೆಟ್ ಬುಕ್ ಮಾಡಿದರೂ, ಟಿಕೆಟ್ ಬಾರದ ಹಿನ್ನೆಲೆಯಲ್ಲಿ ಸಂಸ್ಥೆಯವರಿಗೆ ಕರೆ ಮಾಡಿ ಹಣ ಹಿಂದಿರುಗಿರುವಂತೆ ಆಗ್ರಹಿಸಿದ್ದಾರೆ. ಕರೆ ಸ್ವೀಕರಿಸಿದ ವ್ಯಕ್ತಿ ಅಕೌಂಟ್ ನಂಬರ್‌ನ ಕೊನೆಯ 6 ಸಂಖ್ಯೆಗಳನ್ನು ಕೇಳಿ ಪಡೆದು, ಎರಡು ದಿನದಲ್ಲಿ ಜಮೆಯಾಗುತ್ತದೆ ಎಂದು ತಿಳಿಸಿದ್ದಾನೆ.
ಆದರೆ ಜ.11ರಂದು ಅವರ ಮೊಬೈಲ್‌ಗೆ ಖಾತೆಯಿಂದ ಬೇರೆ ಬ್ಯಾಂಕ್ ಖಾತೆಗೆ 99,860 ರೂ. ವರ್ಗಾವಣೆಯಾಗಿರುವ ಕುರಿತು ಬ್ಯಾಂಕ್‌ನಿಂದ ಮೆಸೇಜ್‌ಬಂದಿದೆ. ಅದರಂತೆ ಬ್ಯಾಂಕ್‌ನಲ್ಲಿ ದೂರು ದಾಖಲಿಸಿ, ಬಳಿಕ ಸೆನ್ ಠಾಣೆಯಲ್ಲೂ ಆನ್‌ಲೈನ್‌ಲ್ಲಿ ಹಣ ವರ್ಗಾವಣೆ ಮಾಡಿ ವಂಚಿಸಿರುವ ಕುರಿತಂತೆ ದೂರು ದಾಖಲಿಸಿದ್ದಾರೆ.
Join our Whatsapp group by clicking the below link 👇👇
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…