ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಉಳ್ಳಾಲ ತಾಲೂಕಿನ ಹರೇಕಳದಲ್ಲಿ ಡಿವೈಎಫ್‍ಐ ಸಂಘಟನೆ ತನ್ನ ರಾಜ್ಯ ಸಮ್ಮೇಳನ ಪ್ರಚಾರಕ್ಕಾಗಿ ಹಾಕಿರುವ ಟಿಪ್ಪುಸುಲ್ತಾನ್ನ ಕಟೌಟ್ ತೆರವು ಮಾಡಲು ಪೊಲೀಸ್ ಇಲಾಖೆ ನೋಟೀಸ್ ನೀಡಿದೆ.
ಫೆ.25 ರಿಂದ 27 ರವರೆಗೆ ಮಂಗಳೂರಿನ ತೊಕ್ಕೊಟ್ಟುನಲ್ಲಿ ಡಿವೈಎಫ್‍ಐ ನ ರಾಜ್ಯ ಸಮ್ಮೇಳನ ನಡೆಯಲಿದೆ. ಇದರ ಪ್ರಚಾರಾರ್ಥವಾಗಿ ಹರೇಕಳ ಡಿವೈಎಫ್‍ಐ ಸಮಿತಿ ಬ್ಯಾನರ್ ಬಂಟಿಗ್ಸ್ ಹಾಕಿ 6 ಅಡಿ ಎತ್ತರದ ಟಿಪ್ಪುಸುಲ್ತಾನ್ ನ ಕಟೌಟ್ ಹಾಕಿದ್ದಾರೆ. ಆದರೆ ಈ ಬಗ್ಗೆ ಯಾವುದೇ ಪರವಾನಗಿ ಪಡೆಯದೆ ಹಾಕಿರುವ ಕಟೌಟ್ ಆಗಿರೋದ್ರಿಂದ ತಕ್ಷಣ ತೆರವು ಮಾಡಬೇಕೆಂದು ಕೊಣಾಜೆ ಪೊಲೀಸರು ನೋಟೀಸ್ ನೀಡಿದ್ದಾರೆ.
ಹರೇಕಳ ಡಿವೈಎಫ್‍ಐ ಸಮಿತಿ ಅಧ್ಯಕ್ಷರಿಗೆ ಈ ನೋಟಿಸ್ ನೀಡಲಾಗಿದೆ. ನಾವು ಎಲ್ಲಾ ಧರ್ಮದ ದಾರ್ಶನಿಕರ ಫೋಟೋ, ಕಟೌಟ್ ಗಳನ್ನು ಹಾಕಿದ್ದು ಯಾವುದಕ್ಕೂ ಪ್ರತ್ಯೇಕ ಪರವಾಗಿ ಪಡೆದಿಲ್ಲ. ಹೀಗಾಗಿ ಟಿಪ್ಪು ಕಟೌಟನ್ನು ತೆರವುಗೊಳಿಸುವುದಿಲ್ಲ ಎಂದು ಡಿವೈಎಫ್‍ಐ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…