Featured

ಮಂಗಳೂರು: ಟ್ರಾಯ್‌ನಿಂದ ಕರೆ ಮಾಡಿರುವುದಾಗಿ ತಿಳಿಸಿ 1.71 ಕೋ.ರೂ ವಂಚನೆ; ಪ್ರಕರಣ ದಾಖಲು – vishwanews24

ಮಂಗಳೂರು: ಟ್ರಾಯ್‌ನಿಂದ ಕರೆ ಮಾಡಿರುವುದಾಗಿ ತಿಳಿಸಿ, 1.71 ಕೋ.ರೂ ವಂಚನೆ; ಪ್ರಕರಣ ದಾಖಲು

ಮಂಗಳೂರು: ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ನಿಂದ ಕರೆ ಮಾಡಿರುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿ ಮಾಡಿ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಆರೋಪಿಸಿ 1.71 ಕೋ.ರೂ. ವಂಚಿಸಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ. 11ರಂದು ದೂರುದಾರರಿಗೆ ಅಪರಿಚಿತ ವ್ಯಕ್ತಿಯೋರ್ವ ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ. ಮುಂಬೈನ ಅಂಧೇರಿ (ಪೂ)ದಲ್ಲಿ ಅದರ ಮೂಲಕ ಹಲವು ಕಾನೂನು ಬಾಹಿರ ಚಟುವಟಿಕೆ ನಡೆದಿವೆ. ಮಾರ್ಕೆಟಿಂಗ್ ನೆಪದಲ್ಲಿ ಆ ಮೊಬೈಲ್ ನಂಬರ್‌ನಿಂದ ಕರೆ ಮಾಡಿ ಕಿರುಕುಳ ನೀಡುತ್ತಿರುವ ಬಗ್ಗೆ ಎಫ್‌ಐಆರ್ ದಾಖಲಾಗಿದೆ. ಕೂಡಲೇ ಅಂಧೇರಿ ಪೂರ್ವ ಠಾಣೆಯನ್ನು ಸಂಪರ್ಕಿಸಬೇಕು. ಇಲ್ಲವಾದಲ್ಲಿ ನಿಮ್ಮ ಮೊಬೈಲ್ ಸೇವೆಯನ್ನು 2 ಗಂಟೆಗಳಲ್ಲಿ ಕೊನೆಗೊಳಿಸಲಾಗುವುದು ಎಂದು ಎಚ್ಚರಿಸಿದ್ದ.

ಬಳಿಕ ದೂರುದಾರರು ಅಪರಿಚತ ವ್ಯಕ್ತಿ ಪ್ರದೀಪ್ ಸಾವಂತ್ ಎಂಬಾತನಲ್ಲಿ ಮಾತನಾಡಿದ್ದು, ನರೇಶ್ ಗೋಯೆಲ್ ವಂಚನೆ ಪ್ರಕರಣವನ್ನು ಒಳಗೊಂಡಿರುವ ಮನಿ ಲ್ಯಾಂಡರಿಂಗ್ ಯೋಜನೆಯಲ್ಲಿ ಭಾಗಿಯಾಗಿರುವುದರಿಂದ ಇನ್ನೊಂದು ಎಫ್‌ಐಆರ್ ದಾಖಲಾಗಿದೆ. ಅಂಧೇರಿಯ ಬ್ಯಾಂಕ್‌ನ ಹೆಸರಿನಲ್ಲಿ ಖಾತೆ ತೆರೆದು ವಂಚನೆಗೆ ಬಳಸಲಾಗಿದ್ದು, ಅದಕ್ಕೆ ಐಡೆಂಟಿಟಿ ಬಳಸಿ ಸಿಮ್ ಖರೀದಿಸಲಾಗಿದೆ. ಹೀಗಾಗಿ ನಿಮ್ಮನ್ನು ಬಂಧಿಸಲಾಗುತ್ತದೆ ಎಂದು ಹೇಳಿದ್ದ.

ಬಳಿಕ ರಾಹುಲ್ ಕುಮಾರ್ ಎಂಬಾತ ಪೊಲೀಸ್ ಅಧಿಕಾರಿ ಮತ್ತು ಆಕಾಂಕ್ಷ ಎಂಬ ಮಹಿಳೆ ಸಿಬಿಐ ಅಧಿಕಾರಿಯೆಂದು ಹೇಳಿಕೊಂಡು ವಾಟ್ಸಾಪ್ ನಲ್ಲಿ ವೀಡಿಯೋ ಕರೆ ಮಾಡಿದ್ದಾರೆ. ಆಕಾಂಕ್ಷ ಎಂಬಾಕೆ ಸಿಬಿಐ ಕಚೇರಿಯ ನಕಲಿ ದಾಖಲೆ ಸೃಷ್ಟಿಸಿ ದೂರುದಾರರ ವಾಟ್ಸಾಪ್ ನಂಬರ್‌ಗೆ ಕಳುಹಿಸಿದ್ದಳು. ಈ ಪ್ರಕರಣದಿಂದ ಹೊರಬರಬೇಕಾದರೆ ಹಣ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಳು. ಅದರಂತೆ ದೂರುದಾರರು ನ. 13ರಿಂದ 19ರ ನಡುವೆ 53 ಲಕ್ಷ ರೂ., 74 ಲಕ್ಷ ರೂ., 44 ಲಕ್ಷ ರೂ. ಹೀಗೆ ಒಟ್ಟು 1.71 ಕೋ.ರೂ. ವರ್ಗಾಯಿಸಿದ್ದರು. ಇನ್ನು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ದೂರುದಾರರು ಮೂಲತಃ ಮುಂಬೈಯವರಾಗಿದ್ದು, ಈ ಮೊದಲು ಅಮೇರಿಕದ ಐಟಿ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದರು. ಅಲ್ಲಿಂದ ಮರಳಿದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿಸಿ ವಾಸವಾಗಿದ್ದರು. ಅವಿವಾಹಿತರಾಗಿರುವ ಅವರು ಒಬ್ಬರೇ ಇದ್ದರು. ಅಮೇರಿಕಾದಲ್ಲಿ ಉದ್ಯೋಗ ಮಾಡಿ ಉಳಿತಾಯ ಮಾಡಿದ ಹಣವನ್ನು ಈ ಮೂಲಕ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.

Vishwa News 24

Recent Posts

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

1 minute ago

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

16 minutes ago

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

23 minutes ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

27 minutes ago

ಪುತ್ತೂರು: ನಾಪತ್ತೆಯಾಗಿದ್ದ ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ – vishwanews24

ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…

33 minutes ago

ಕಾಂಗ್ರೆಸ್ ಪಕ್ಷ ತನ್ನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು , ಶೀಘ್ರದಲ್ಲೇ ಹೊಸ ಜಿಲ್ಲಾಅಧ್ಯಕ್ಷರ ನೇಮಕಾತಿ :ಬಿ.ಕೆ. ಹರಿಪ್ರಸಾದ್ – vishwanews24

ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ :  ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…

44 minutes ago