Featured

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು

ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ 169ರ ಸೂರಲ್ಪಾಡಿ ಸಮೀಪ ನಿರ್ಮಾಣ ಹಂತದಲ್ಲಿರುವ ಟೋಲ್ ಪ್ಲಾಜಾ ಬಳಿ ರಸ್ತೆ ಬದಿಯ ಸಿಮೆಂಟ್ ತಡೆಗೋಡೆಗೆ ಡಿಕ್ಕಿ ಹೊಡೆದಿದ್ದು, 35 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರ್ಕಳದಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ಈ ಬಸ್, ಸೂರಲ್ಪಾಡಿ ಬಳಿ ಏಕಾಏಕಿ ಎಡಭಾಗಕ್ಕೆ ತಿರುಗಿದ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಬಸ್ ಅನ್ನು ಬಲಭಾಗಕ್ಕೆ ತಿರುಗಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಸಿಮೆಂಟ್ ತಡೆಗೋಡೆಗೆ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಬಸ್ ಚಾಲಕ ಹಾಗೂ ಒಬ್ಬರು ಅಥವಾ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಬಜ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಅಪಘಾತ ಸಂಭವಿಸಿದ ವೇಳೆ ಬಸ್‌ನಲ್ಲಿ ಒಟ್ಟು 35 ಮಂದಿ ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ.

Vishwa News 24

Recent Posts

ಹೊಸದಿಲ್ಲಿ: ಚಲಿಸುತ್ತಿದ್ದ ಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ; ಹೊತ್ತಿ ಉರಿದ ನಾಲ್ಕು ಬೋಗಿಗಳು ; ತಪ್ಪಿದ ಭಾರೀ ಅನಾಹುತ – vishwanews24

ಹೊಸದಿಲ್ಲಿ: ಚಲಿಸುತ್ತಿದ್ದ ಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ; ಹೊತ್ತಿ ಉರಿದ ನಾಲ್ಕು ಬೋಗಿಗಳು ; ತಪ್ಪಿದ ಭಾರೀ ಅನಾಹುತ…

1 day ago

ಉಡುಪಿ: ನ.29ರಂದು ಸೋದೆ ಪರ್ಯಾಯದ ಬಾಳೆ ಮುಹೂರ್ತ – vishwanews24

ಉಡುಪಿ: ನ.29ರಂದು ಸೋದೆ ಪರ್ಯಾಯದ ಬಾಳೆ ಮುಹೂರ್ತ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ದ್ವೈವಾರ್ಷಿಕ ಪರ್ಯಾಯ ದಲ್ಲಿ 2028-30ರ ಅವಧಿಯಲ್ಲಿ…

1 day ago

7 ಮಂದಿಯ ಭೀಕರ ಹತ್ಯೆ  : ಸಿಲಿಕಾನ್ ಸಿಟಿಯನ್ನೇ ಬೆಚ್ಚಿಬೀಳಿಸಿದ ಮರ್ಡರ್‌ ಕೇಸ್‌ ಬಗ್ಗೆ ಪೊಲೀಸ್‌ ಆಯುಕ್ತರ ಹೇಳಿಕೆ – vishwanews24

 7 ಮಂದಿಯ ಭೀಕರ ಹತ್ಯೆ  : ಸಿಲಿಕಾನ್ ಸಿಟಿಯನ್ನೇ ಬೆಚ್ಚಿಬೀಳಿಸಿದ ಮರ್ಡರ್‌ ಕೇಸ್‌ ಬಗ್ಗೆ ಪೊಲೀಸ್‌ ಆಯುಕ್ತರ ಹೇಳಿಕೆ ಬೆಂಗಳೂರು:…

1 day ago

ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಮಾನತು – vishwanews24

ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಮಾನತು ಉಡುಪಿ: ಹಿರಿಯಡ್ಕದ ಪ್ರದೀಪ್…

1 day ago

ಗಂಗೊಳ್ಳಿ:  ಟೈರ್ ಸ್ಫೋಟಗೊಂಡು ಮೀನು ಸಾಗಾಟದ ವಾಹನ ಪಲ್ಟಿ ; ಚಾಲಕ ಪ್ರಾಣಾಪಾಯದಿಂದ ಪಾರು – vishwanews24

ಗಂಗೊಳ್ಳಿ:  ಟೈರ್ ಸ್ಫೋಟಗೊಂಡು ಮೀನು ಸಾಗಾಟದ ವಾಹನ ಪಲ್ಟಿ ; ಚಾಲಕ ಪ್ರಾಣಾಪಾಯದಿಂದ ಪಾರು ಗಂಗೊಳ್ಳಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

2 days ago

ಸಿಲಿಕಾನ್ ಸಿಟಿಯಲ್ಲಿ ಬೆಚ್ಚಿ ಬೀಳಿಸುವ ಮರ್ಡರ್‌ : ಹೆಂಡತಿ ಮೇಲಿನ ಸಿಟ್ಟಿಗೆ ಪತಿಯಿಂದ ಏಳು ಜನರ ಕೊಲೆ – vishwanews24 https://wp.me/p9KQap-vaX

ಸಿಲಿಕಾನ್ ಸಿಟಿಯಲ್ಲಿ ಬೆಚ್ಚಿ ಬೀಳಿಸುವ ಮರ್ಡರ್‌ – ಹೆಂಡತಿ ಮೇಲಿನ ಸಿಟ್ಟಿಗೆ ಪತಿ ಏಳು ಜನರ ಕೊಲೆ ನಂದಿಬೆಟ್ಟದ ಕಾಡಿನಲ್ಲಿ…

2 days ago