ಮಂಗಳೂರು : ಡಿಸಿಪಿ ಕಾರಿನ ಮೇಲೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿ ಹತ್ತಿಸಲು ಪ್ರಯತ್ನಿಸಿರುವ ಘಟನೆ ಪರಂಗಿಪೇಟೆ ಔಟ್ಪೋಸ್ಟ್ನಲ್ಲಿ ನಡೆದಿದ್ದು, ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.
ಡ್ಯಾರು ಬಳಿ ಅಕ್ರಮ ಮರಳು ಸಾಗಣೆ ನಡೆಯುತ್ತಿರುವ ಕುರಿತು ಸಾರ್ವಜನಿಕರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಮಧ್ಯರಾತ್ರಿ ವೇಳೆ ದಾಳಿ ನಡೆಸಿದ್ದ ಡಿಸಿಪಿ ಹರಿರಾಮ್ ಶಂಕರ್ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿ ಬೆನ್ನಟ್ಟಿ, ಪರಂಗಿಪೇಟೆ ಔಟ್ ಪೋಸ್ಟ್ ಬಳಿ ಲಾರಿ ಅಡ್ಡಗಟ್ಟಿದ್ದರು. ಈ ವೇಳೆ ಡಿಸಿಪಿ ಕಾರಿನ ಮೇಲೆ ಲಾರಿ ಹತ್ತಿಸಲು ಚಾಲಕ ಪ್ರಯತ್ನಿಸಿದ್ದ. ಬಳಿಕ ಔಟ್ಪೋಸ್ಟ್ನ ಬ್ಯಾರಿಕೇಡ್ಗೆ ಡಿಕ್ಕಿ ಹೊಡೆಸಿ ಪರಾರಿಯಾಗಿದ್ದ.
ಮತ್ತೆ ಮರಳು ಸಾಗಣೆ ಲಾರಿ ಹಿಂಬಾಲಿಸಿದ್ದ ಡಿಸಿಪಿ ಹರಿರಾಮ್ ಸೂಚನೆಯಂತೆ ಪೊಲೀಸರು ಬಂಟ್ವಾಳದಲ್ಲಿ ಮರಳು ಲಾರಿ ವಶಕ್ಕೆ ಪಡೆದರು. ಲಾರಿ ಚಾಲಕ ಮತ್ತು ಲಾರಿಯನ್ನು ಹಿಂಬಾಲಿಸುತ್ತಿದ್ದ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದರು.
ಆರೋಪಿಗಳ ವಿರುದ್ಧ ಮರಳು ಕಳವು, ನಿರ್ಲಕ್ಷ್ಯದ ಚಾಲನೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…