Featured

ಮಂಗಳೂರು: ಡಿಸಿಪಿ ನೇತೃತ್ವದಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ : ಇಬ್ಬರ ಬಂಧನ – Vishwanews24

ಮಂಗಳೂರು: ಡಿಸಿಪಿ ನೇತೃತ್ವದಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ : ಇಬ್ಬರ ಬಂಧನ – Vishwanews24

ಮಂಗಳೂರು: ಉಚ್ಚಿಲ ಪೆರಿಂಬೈಲ್‌ ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ಡಿಸಿಪಿ ಹರಿರಾಂ ಶಂಕರ್‌ ನೇತೃತ್ವದ ಪೊಲೀಸ್‌‌ ತಂಡ ದಾಳಿ ನಡೆಸಿದ್ದು, 2 ಲಾರಿ, 3 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿದ್ದಾರೆ.

ಕಲ್ಲಾಪು ನಿವಾಸಿ ಮಯ್ಯದ್ದಿ, ತಲಪಾಡಿ ನಿವಾಸಿ ಒಸ್ವಾಲ್ ಡಿಸೋಜ ಬಂಧಿತರು. ಈ ಪ್ರದೇಶದಲ್ಲಿ ತಡರಾತ್ರಿ ವೇಳೆ ಅಕ್ರಮ ಮರಳು ಸಾಗಾಟ ವ್ಯಾಪಕಗೊಂಡ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ವತಃ ಡಿಸಿಪಿ ಅವರೇ ಸ್ಥಳೀಯ ಪೊಲೀಸರ ನೆರವಿನಲ್ಲಿ ಅಕ್ರಮ ಮರಳು ಅಡ್ಡೆಗೆ ಮಂಗಳವಾರ ತಡರಾತ್ರಿ 12.30ರ ಸುಮಾರಿಗೆ ದಾಳಿ ನಡೆಸಿದ್ದಾರೆ.ದಾಳಿಯ ವೇಳೆ 2 ಲಾರಿ, 3 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಈ ವೇಳೆ ಸ್ಥಳದಲ್ಲಿದ್ದ ಎಂಟು ಮಂದಿ ಪರಾರಿಯಾಗಿದ್ದಾರೆ.

ಈ ಕುರಿತು ಉಳ್ಳಾಲ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

 

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

17 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

21 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

22 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

22 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

23 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

23 hours ago