Featured

ಮಂಗಳೂರು: ಡಿ.25ರಂದು ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ ; 2750 ಕುಟುಂಬಗಳಿಗೆ 6 ಕೋಟಿ ರೂ. ಅಧಿಕ ಆರ್ಥಿಕ ನೆರವು – vishwanews24

ಮಂಗಳೂರು: ಡಿ.25ರಂದು ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ ; 2750 ಕುಟುಂಬಗಳಿಗೆ 6 ಕೋಟಿ ರೂ. ಅಧಿಕ ಆರ್ಥಿಕ ನೆರವು

ಮಂಗಳೂರು: ನಾವು ಪ್ರತೀ ವರ್ಷ ಆಯೋಜಿಸಿಕೊಂಡು ಬಂದಿರುವ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಪ್ರದಾನ ಕಾರ್ಯಕ್ರಮ ಡಿ. 25 ರಂದು ಮಧ್ಯಾಹ್ನ ಗಂಟೆ 3.30ಕ್ಕೆ ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದೆ.

ಈ ವರ್ಷ ಒಟ್ಟು 2750 ಕುಟುಂಬಗಳಿಗೆ 6 (ಆರು) ಕೋಟಿ ರೂಪಾಯಿಗೂ ಮಿಕ್ಕಿ ನೆರವನ್ನು ವಿತರಿಸಲಾಗುತ್ತಿದೆ. ಇದರಿಂದ ಸುಮಾರು ಹದಿನೈದು ಸಾವಿರ ಮಂದಿಗೆ ಪ್ರಯೋಜನವಾಗಲಿದೆ ಎಂದು ಎಂಜಿಆರ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಪ್ರಕಾಶ್ ಶೆಟ್ಟಿ ತಿಳಿಸಿದ್ದಾರೆ.

ನಗರದ ಗೋಲ್ಡ್ ಪಿಂಚ್ ಹೊಟೇಲ್ ಸಭಾಂಗಣದಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಎಲ್ಲಾ ಮತ, ಧರ್ಮದ ಮಾನಸಿಕ ವಿಕಲತೆ, ಹುಟ್ಟಿನಿಂದ ಬರುವ ದೀರ್ಘಕಾಲೀನ ಚಿಕಿತ್ಸೆ ಅವಶ್ಯವಿರುವ ಖಾಯಿಲೆ ಪೀಡಿತರಿಗೆ, ಅಂಗವೈಕಲ್ಯ, ಕ್ಯಾನ್ಸರ್ ಮುಂತಾದ ಖಾಯಿಲೆಗಳಿಂದ ಬಾಧಿತರಾಗಿರುವವರಿಗೆ ಚಿಕಿತ್ಸೆಗಾಗಿ ಆದ್ಯತೆಯ ಮೇಲೆ ನೆರವು ನೀಡುವುದನ್ನು ಪರಿಗಣಿಸಲಾಗಿದೆ. ಶಿಕ್ಷಣ ಮುಂದುವರಿಸಲು ಕಷ್ಟ ಪಡುತ್ತಿರುವವರಿಗೆ, ಕ್ರೀಡಾ ಕ್ಷೇತ್ರದ ಸಾಧಕರಿಗೆ, ಉತ್ತಮ ಶೈಕ್ಷಣಿಕ ಸಾಧನೆ ಮಾಡಿದವರಿಗೆ ಪ್ರೋತ್ಸಾಹ ನೀಡುವುದಕ್ಕಾಗಿ ಅವರಿಗೆ “ನೆರವು” ನೀಡಲು ಆಯ್ಕೆಮಾಡಲಾಗಿದೆ.

ಈ ವರ್ಷದ “ನೆರವು” ಕಾರ್ಯಕ್ರಮದಲ್ಲಿ ಬೆಂಗಳೂರಿನ ಅದಮ್ಯ ಚೇತನ ಫೌಂಡೇಶನ್ನಿನ ಅಧ್ಯಕ್ಷರು ಹಾಗು ಸಹ- ಸಂಸ್ಥಾಪಕರೂ ಆಗಿರುವ ಡಾ. ತೇಜಸ್ವಿನಿ ಅನಂತಕುಮಾ‌ರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ. ಮೋಹನ ಆಳ್ವ, ಕಾಪು ವಿಧನಾಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಎಂ.ಆರ್.ಜಿ.ಗ್ರೂಪ್ ನ ಆಡಳಿತ ನಿರ್ದೇಶಕರಾದ ಗೌರವ್ ಪಿ. ಶೆಟ್ಟಿ ಮತ್ತು ಎಂ.ಆರ್.ಜಿ.ಗ್ರೂಪ್ ಚೇರ್ಮನ್ ಡಾ. ಕೆ.ಪ್ರಕಾಶ್ ಶೆಟ್ಟಿ ಉಪಸ್ಥಿತರಿರುತ್ತಾರೆ. (ಒಂದು ಕುಟುಂಬದಲ್ಲಿ ಸರಾಸರಿ ಐದು ಮಂದಿ ಇರುವರೆಂಬ ಲೆಕ್ಕಾಚಾರದಲ್ಲಿ ) ಫಲಾನುಭವಿಗಳ ಆಯ್ಕೆಯಲ್ಲಿ ಒಂದು ನಿಗದಿತ ಮಾನದಂಡವನ್ನು ಅನುಸರಿಸ ಲಾಗಿದೆ. ಅರ್ಜಿಗಳನ್ನು ಪರಿಶೀಲಿಸಿ, ಅವಶ್ಯ ಹಿಮ್ಮಾಹಿತಿಗಳನ್ನು ಪಡೆದು ಫಲಾನುಭವಿಗಳ ಆಯ್ಕೆ ಮಾಡಲಾಗಿದೆ. ಸಮಾಜದಲ್ಲಿ ಪರಿವರ್ತನೆ ತರಬಲ್ಲಂತಹ, ಸಾಮೂಹಿಕ ಹಿತದ ಕಾರ್ಯಕ್ರಮಗಳನ್ನು ಕೈಗೊಂಡ ಸಂಘ ಸಂಸ್ಥೆಗಳನ್ನು ಗುರುತಿಸಿ ಆಯ್ಕೆ ಮಾಡಲಾಗಿದೆ.

ಪ್ರತೀ ವರ್ಷದಂತೆ ಫಲಾನುಭವಿಗಳನ್ನು ಕರೆತರಲು ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ ಸ್ವಯಂಸೇವಕರ ತಂಡಗಳಿವೆ. ನೆರವು ವಿತರಣೆ ನಡೆಯುವ ಸ್ಥಳದಲಿ 10 ಕೌಂಟರ್ ಗಳನ್ನು ತೆರೆಯಲಾಗುತ್ತದೆ. ಈಗಾಗಲೇ ವಿತರಣೆ ಮಾಡಿರುವ ಟೋಕನ್ ಗಳನ್ನು ತೋರಿಸಿ ಕೌಂಟರ್ ಗಳಲ್ಲಿ ನೆರವಿನ ಚೆಕ್ ಪಡೆಯಬಹುದು. ಎಲ್ಲಿಯೂ ಅವ್ಯವಸ್ಥೆಗಳಿಗೆ ಆಸ್ಪದ ಇಲ್ಲದಂತೆ ನೋಡಿಕೊಳ್ಳಲಾಗುತ್ತದೆ.

ಹಿಂದಿನ ವರ್ಷಗಳಲ್ಲಿ ಸಮುದಾಯ ಭಾಗವಹಿಸುವಿಕೆಯನ್ನು ಪ್ರೋತ್ಸಾಹಿಸಲು ಸಂಘ ಸಂಸ್ಥೆಗಳಿಗೆ ನೀಡಲಾದ ನೆರವು ಆಯಾ ಪರಿಸರದಲ್ಲಿ ಧನಾತ್ಮಕ ಪರಿಣಾಮ ಬೀರಿದೆ. ಸಾರ್ವಜನಿಕ ಅಸ್ತಿಗಳ ನಿರ್ಮಾಣ ಆಗಿದೆ. ಅವಕಾಶವಂಚಿತರು ‘ನೆರವು’ ಪಡೆದುಕೊಂಡು ಸ್ವಾವಲಂಬಿಯಾದ ಉದಾಹರಣೆಗಳಿವೆ. ಸಾಮಾಜಿಕ ಜವಾಬ್ದಾರಿಯ ನೆಲೆಯಲ್ಲಿ ನಾವು ಕೈಗೊಂಡ ಈ ಸೇವಾ ರೂಪದ ಕಾರ್ಯಕ್ರಮ ಸಾರ್ವಜನಿಕ ಮನ್ನಣೆ ಪಡೆದಿರುವುದು ಆಯೋಜಕರಾದ ನಮಗೆ ಸಮಾಧಾನ ತಂದಿದೆ. ಸಾರ್ಥಕ್ಷ್ಯ ಭಾವನೆಯನ್ನು ಮೂಡಿಸಿದೆ. ಅನುಭೂತಿ ಮತ್ತು ಬದ್ಧತೆಯಿಂದ ಕೈಗೊಂಡ “ನೆರವು” ಕಾರ್ಯಕ್ರಮ ಅನುಷ್ಠಾನದಲ್ಲಿ ನಮ್ಮ ತಂಡ ಅತ್ಯಂತ ಜವಾಬ್ದಾರಿಯಿಂದ ಕೆಲಸ ಮಾಡಿದೆ. ಶಿಕ್ಷಣ ಉಪಕ್ರಮದಡಿ ನೆರವು ಪಡೆದವರಲ್ಲಿ ಕೆಲವರು ಈಗ ಉದ್ಯೋಗಸ್ಥರಾಗಿ, ತಾವು ಇತರರಿಗೆ ಸಹಾಯ ಮಾಡುವ ಸ್ಥಿತಿಗೆ ತಲುಪಿರುವುದು ಈ ಯೋಜನೆ ತಂದ ಮಾನವೀಯ ಬದಲಾವಣೆ ಎಂದು ನಾವು ವಿನಯದಿಂದ ಹೇಳಬಯಸುತ್ತೇವೆ.

ಮೊದಲ ವರ್ಷ ವಿತರಣೆ ಮಾಡಲಾದ ಮೊತ್ತ 1.25 ಕೋಟಿ ರೂಪಾಯಿ.ವರ್ಷದಿಂದ ಈ ಮೊತ್ತ ಏರುತ್ತಾ ಹೋಗಿದೆ.ಈ ಯೋಜನೆಯ ವ್ಯಾಪ್ತಿ ದಕ್ಷಿಣ ಕನ್ನಡ, ಉಡುಪಿ ಮತ್ತು ಗಡಿನಾಡು . ಕಾಸರಗೋಡು ಜಿಲ್ಲೆಗಳು. (ಕೆಲವು ವಿಶೇಷ ಪ್ರಕರಣಗಳಲ್ಲಿ ಮಾನವೀಯತೆಯ ಹಿನ್ನೆಲೆಯಲ್ಲಿ ಈ ಗಡಿಯನ್ನು ದಾಟಿಯೂ ನೆರವು ನೀಡಲಾಗಿದೆ)ಪ್ರತೀ ವ್ಯಕ್ತಿಗೆ ಅವರವರ ಅವಶ್ಯಕತೆಯನ್ನು ಪರಿಗಣಿಸಿ ಕನಿಷ್ಠ 10,000 ರೂ.ಗಳಿಂದ ಗರಿಷ್ಠ 1,00,000 ರೂ.ಗಳವರೆಗೆ ನೀಡಲಾಗಿದೆ, ಆರೋಗ್ಯ ರಕ್ಷಣೆ, ಚಿಕಿತ್ಸೆಗೆ ಮೊದಲಾದ್ಯತೆ ನೀಡಲಾಗಿದೆ. ಸಂಘ ಸಂಸ್ಥೆಗಳಾದರೆ ಕನಿಷ್ಠ 1,00,000 ರೂ.ಗಳಿಂದ ಗರಿಷ್ಠ 10,00,000 ರೂ.ಗಳವರೆಗೆ ನೆರವು ನೀಡಲಾಗಿದೆ.

ವೈದ್ಯಕೀಯ ಪ್ರಕರಣಗಳಲ್ಲಿ ಅವಶ್ಯ ದಾಖಲೆಗಳನ್ನು ಪಡೆದು, ಪರಿಶೀಲಿಸಿ, ಹಿಮ್ಮಾಹಿತಿ ಪಡೆದು ನೆರವು ನೀಡಲಾಗಿದೆ. ನಮ್ಮಪರಂಪರೆ ಮತ್ತು ಧಾರ್ಮಿಕ ಶ್ರದ್ಧಾಕೇಂದ್ರಗಳ ಪುನರುತ್ಥಾನದ ಮಹತ್ವವನ್ನು ಪರಿಗಣಿಸಿ ನೆರವು ನೀಡಲಾಗಿದೆ. ಸಂಘ ಸಂಸ್ಥೆಗಳ ಸಂದರ್ಭದಲ್ಲಿ ಅವುಗಳ ಚಟುವಟಿಕೆ ಸ್ವಚ್ಚತೆ ಕಾಪಾಡುವಿಕೆ, ಮಹಿಳಾ ಸಶಕ್ತಿಕರಣ, ಯುವಜನರ ಸಬಲೀಕರಣ, ಸಹಿತ ಸಾಮಾಜಿಕ ಪರಿವರ್ತನೆಗೆ ಅವುಗಳ ಕೊಡುಗೆಯನ್ನು ಗಮನಕ್ಕೆ ತೆಗೆದು ಕೊಳ್ಳಲಾಗಿದೆ ಎಂದು ಡಾ.ಪ್ರಕಾಶ್ ಶೆಟ್ಟಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago