Featured

ಮಂಗಳೂರು : ಡಿ.30 ರಂದು ಜಿಲ್ಲಾ ಮಟ್ಟದ ಮುಕ್ತ ಚೆಸ್, ಕೇರಂ ಕ್ರೀಡಾಕೂಟ ; ಅರ್ಜಿ ಆಹ್ವಾನ – Vishwanews24

ಮಂಗಳೂರು : ಡಿ.30 ರಂದು ಜಿಲ್ಲಾ ಮಟ್ಟದ ಮುಕ್ತ ಚೆಸ್, ಕೇರಂ ಕ್ರೀಡಾಕೂಟ ; ಅರ್ಜಿ ಆಹ್ವಾನ – Vishwanews24

ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ 2021-22ನೇ ಸಾಲಿಗೆ 18 ವರ್ಷ ಮೇಲ್ಪಟ್ಟ ಪುರುಷ ಮತ್ತು ಮಹಿಳೆಯರಿಂದ ಜಿಲ್ಲಾ ಮಟ್ಟದ ಮುಕ್ತ ಚೆಸ್ ಮತ್ತು ಕೇರಂ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಜಿ ಆಹ್ವಾನಿಸಲಾಗಿದೆ.

ಇದೇ ಡಿ.30ರ ಗುರುವಾರ ಬೆಳಿಗ್ಗೆ 8 ಗಂಟೆಗೆ ನಗರದ ಮಂಗಳಾ ಕ್ರೀಡಾಂಗಣ ಸಂಕೀರ್ಣದಲ್ಲಿರುವ ಯು.ಎಸ್. ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಆಯೋಜಿಸಲಾಗಿದೆ.

ಭಾಗವಹಿಸುವ ಕ್ರೀಡಾಪಟುಗಳು ಇದೇ ಡಿ.27ರ ಸೋಮವಾರ ಸಂಜೆ 5 ಗಂಟೆಯೊಳಗಾಗಿ ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಇವರಿಗೆ ಸಲ್ಲಿಸಬೇಕು.

ಭಾಗವಹಿಸುವ ಕ್ರೀಡಾಪಟುಗಳು ಸ್ಪರ್ಧೆ ನಡೆಯುವ ದಿನಾಂಕದಂದು ಬೆಳಿಗ್ಗೆ 8 ಗಂಟೆಯೊಳಗೆ ಯು.ಎಸ್. ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ಮಂಗಳೂರು, ದೂ.ಸಂಖ್ಯೆ:0824-2451264 ಹಾಗೂ ಕ್ರೀಡಾಕೂಟದ ನೋಡಲ್ ಅಧಿಕಾರಿ ವಿನೋದ್ ಕುಮಾರ್ ಮೊ.ಸಂಖ್ಯೆ: 9845026869 ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮಡ್‌ಗಾಂವ್‌ – ಮಂಗಳೂರು ‘ವಂದೇ ಭಾರತ್‌’ ರೈಲು ಬೆಂಗಳೂರಿಗೆ ವಿಸ್ತರಣೆ -vishwanews24

ಮಡ್‌ಗಾಂವ್‌ - ಮಂಗಳೂರು 'ವಂದೇ ಭಾರತ್‌' ರೈಲು ಬೆಂಗಳೂರಿಗೆ ವಿಸ್ತರಣೆ ಮಂಗಳೂರು/ಉಡುಪಿ: ಈ ಹಿಂದೆ ಮಂಗಳೂರು ಸೆಂಟ್ರಲ್‌-ಮಡ್‌ಗಾಂವ್‌ ನಡುವೆ ಓಡುತ್ತಿದ್ದ…

1 hour ago

ಅಕ್ಟೋಬರ್ 11ರಿಂದ 20ರ ವರೆಗೆ KSRTC ಯಿಂದ ವಿಶೇಷ ಪ್ಯಾಕೇಜ್ ಪ್ರವಾಸ -vishwanews24

ಅಕ್ಟೋಬರ್ 11ರಿಂದ 20ರ ವರೆಗೆ KSRTC ಯಿಂದ ವಿಶೇಷ ಪ್ಯಾಕೇಜ್ ಪ್ರವಾಸ ಉಡುಪಿ: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ…

1 hour ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 62 ರೂ. ಏರಿಕೆ -vishwanews24

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 62 ರೂ. ಏರಿಕೆ ನವದೆಹಲಿ: ಹಬ್ಬದ ಹೊಸ್ತಿಲಲ್ಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಗಣನೀಯ…

1 hour ago

ಮಂಗಳೂರು: ಎಂಆರ್ ಪಿಎಲ್ ದುರಂತ : ಕಂಪನಿ ಅಧಿಕಾರಿಗಳ ವಿರುದ್ಧ ಎಫ್ಐಆರ್ -vishwanews24

ಮಂಗಳೂರು: ಎಂಆರ್ ಪಿಎಲ್ ದುರಂತ : ಕಂಪನಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ಮಂಗಳೂರು : ಎಂಆರ್ ಪಿಎಲ್ ತೈಲ ಸ್ಥಾವರ…

2 hours ago

ಎಂಆರ್‌ಪಿಎಲ್‌ ದುರಂತ: ಸಮಗ್ರ ತನಿಖೆಗೆ ಐವನ್ ಡಿʼಸೋಜಾ ಆಗ್ರಹ -vishwanews24

ಎಂಆರ್‌ಪಿಎಲ್‌ ದುರಂತ: ಆಸ್ತಿ-ಪಾಸ್ತಿ ನಷ್ಟಕ್ಕೆ ಸೂಕ್ತ ಪರಿಹಾರ , ಸಮಗ್ರ ತನಿಖೆಗೆ ಐವನ್ ಡಿʼಸೋಜಾ ಆಗ್ರಹ ಮಂಗಳೂರು :ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ…

2 hours ago

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

15 hours ago