Featured

ಮಂಗಳೂರು: ಡ್ರಗ್ಸ್ ಮಾರಾಟ ಪ್ರಕರಣ ; ಬೆಂಗಳೂರಿನಲ್ಲಿ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಬಂಧಿಸಿದ ಮಂಗಳೂರು ಪೊಲೀಸರು -Vishwanews24

ಮಂಗಳೂರು: ಡ್ರಗ್ಸ್ ಮಾರಾಟ ಪ್ರಕರಣ ; ಬೆಂಗಳೂರಿನಲ್ಲಿ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಬಂಧಿಸಿದ ಮಂಗಳೂರು ಪೊಲೀಸರು -Vishwanews24

ಮಂಗಳೂರು: ನಗರದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಬೆಂಗಳೂರಿನಲ್ಲಿ ನೈಜೀರಿಯಾ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.‌ಶಶಿಕುಮಾರ್ ತಿಳಿಸಿದ್ದಾರೆ.

ಬಂಧಿತ ನೈಜೀರಿಯಾ ಪ್ರಜೆಗಳನ್ನು ಪೌಲ್ ಒಹಮೋಬಿ ಮತ್ತು ಉಚೆಚುಕು ಮಲಾಕಿ ಎಲಕ್ವಾಚಿ ಎಂದು ಗುರುತಿಸಲಾಗಿದೆ. ಇವರಿಬ್ಬರನ್ನೂ ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

ಜೂ.3ರಂದು ಮನಾಫ್, ಮುಝಾಂಬಿಲ್, ಅಹಮ್ಮದ್ ಮಸೂಕ್ ಎಂಬವರನ್ನು ವಶಕ್ಕೆ ಪಡೆದು 170 ಗ್ರಾಂ ಎಂ.ಡಿ.ಎಂ.ಎಂ ಡ್ರಗ್ಸ್ ವಶಕ್ಕೆ ಪಡೆಯಲಾಗಿತ್ತು. ಜೂ.13ರಂದು ಉಪ್ಪಳ ನಿವಾಸಿಗಳಾಸ ಶಫೀಕ್ ಕೆ.ಎಸ್. ಮತ್ತು ಅಲ್ತಾಫ್ ರನ್ನು ವಶಕ್ಕೆ ಪಡೆದು 65 ಗ್ರಾಂ ಎಂ.ಡಿ.ಎಂ.ಎಂ ಡ್ರಗ್ಸ್ ವಶಕ್ಕೆ ಪಡೆಲಾಗಿತ್ತು. ವಿಚಾರಣೆ ಸಂದರ್ಭ ತಮಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಮೂಲದ ಸ್ಟ್ಯಾನ್ಲಿ ಚಿಮಾ ಮತ್ತು ಉಪ್ಪಳದ ರಮೀಜ್ ಬಗ್ಗೆ ಮಾಹಿತಿ ನೀಡಿದ್ದು ಅವರನ್ನು ಬಂಧಿಸಲಾಗಿತ್ತು.

ಸ್ಟ್ಯಾನ್ಲಿ ಮತ್ತು ರಮೀಜ್ ನನ್ನು ವಿಚಾರಣೆ ಮಾಡಿದಾಗ ಬೆಂಗಳೂರಿನಲ್ಲಿರುವ ನೈಜೀರಿಯಾ ಮೂಲದ ಪೌಲ್ ಒಹಮೋಬಿ ಮತ್ತು ಉಚೆಚುಕು ಮಲಾಕಿ ಎಲಕ್ವಾಚಿ ರಿಂದ ಡ್ರಗ್ಸ್ ಖರೀದಿಸಿದ್ದಾಗಿ ಹೇಳಿದ್ದಾರೆ. ಹೀಗಾಗಿ ಬೆಂಗಳೂರಿಗೆ ತೆರಳಿದ ನಗರ ಪೊಲೀಸರು ಬಿದರಹಳ್ಳಿಯಲ್ಲಿ ಈ ಇಬ್ಬರನ್ನು ಬಂಧಿಸಿದ್ದಾರೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

2 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

2 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

3 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

3 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

3 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

4 hours ago