ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ – vishwanews24
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ದುರಂತದಲ್ಲಿ ಮೃತಪಟ್ಟ ಕುಟುಂಬದ ಸದಸ್ಯರಿಗೆ ತಲಾ ಐದು ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ವಿತರಿಸಿದರು.
ಈ ಸಂದರ್ಭ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಜಿಪಂ ಸಿಇಒ ವಿನಾಯಕ ನರ್ವಾಡೆ ಕಾರ್ಬಾರಿ, ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಎಸ್ಪಿ ಡಾ. ಅರುಣ್, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್ ಮತ್ತಿತರರು ಉಪಸ್ಥಿತರಿದ್ದರು. ದುರಂತದಲ್ಲಿ ಗಾಯಗೊಂಡವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ಸಚಿವ ಖಾದರ್ ತಿಳಿಸಿದ್ದಾರೆ.
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24
