Featured

ಮಂಗಳೂರು : ತಲೆಮರೆಸಿಕೊಂಡಿರುವ ಹಾಗೂ ಕೋಮುಗಲಭೆ ಆರೋಪಿಗಳ ಆಸ್ತಿ ಮುಟ್ಟುಗೋಲು: ADGP ಅಲೋಕ್‌ ಕುಮಾರ್ – Vishwanews24

ಮಂಗಳೂರು : ತಲೆಮರೆಸಿಕೊಂಡಿರುವ ಹಾಗೂ ಕೋಮುಗಲಭೆ ಆರೋಪಿಗಳ ಆಸ್ತಿ ಮುಟ್ಟುಗೋಲು: ADGP ಅಲೋಕ್‌ ಕುಮಾರ್

ಮಂಗಳೂರು : ಈವರೆಗೆ ತಲೆಮರೆಸಿಕೊಂಡಿರುವ ಆರೋಪಿಗಳು ಹಾಗೂ ಮತ್ತೆ ಗಲಭೆ ಕೃತ್ಯಕ್ಕೆ ಇಳಿದಿರುವ ಆರೋಪಿಗಳ ವಿರುದ್ಧ ಆಸ್ತಿಮುಟ್ಟುಗೋಲು ಸೇರಿದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ರಾಜ್ಯ ಕಾನೂನು, ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್‌ ಕುಮಾರ್ ಹೇಳಿದ್ದಾರೆ.

ಮಂಗಳೂರಿನ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಿನ್ನೆ ದ.ಕ, ಉಡುಪಿ ಹಾಗೂ ಮಂಗಳೂರು ಕಮಿಷನರೇಟ್‌ನ ಉನ್ನತ ಪೊಲೀಸ್‌ ಅಧಿಕಾರಿಗಳ ಸಭೆ ಬಳಿಕ ಅವರು ಸುದ್ದಿಗಾರರಲ್ಲಿ ಮಾತನಾಡಿದರು. ಆಗಾಗ ಕೋಮು ಸಂಘರ್ಷ ಉಟಾಗುವುದನ್ನು ತಪ್ಪಿಸುವುದಕ್ಕೆ ಇಂತಹ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಲಹೆ ನೀಡಲಾಗಿದೆ.

ಕೋಮು ಕೇಸಿಗೆ ಸಂಧಿಸಿದಂತೆ ಆರೋಪಿಗಳು ಎಲ್ಲಿದ್ದಾರೆ? ಹೇಗಿದ್ದಾರೆ? ಅವರ ಮೇಲೆ ಯಾವುದಾದರೂ ಪ್ರಿವೆಂಟಿವ್ ಆಗಿ ರೌಡಿ ಶೀಟ್ ತೆರೆಯುವ ಕೆಲಸ ಆಗಿದೆಯಾ? ಕೇಸಿನ ವಿಚಾರಣೆ ಹೇಗೆ. ನಡೆಯುತ್ತಿದೆ ಎಂಬಿತ್ಯಾದಿ ಆಯಾಮಗಳಲ್ಲಿ ಪರಿಶೀಲನೆ ಮಾಡಬೇಕು.

ಶರತ್‌ ಮಡಿವಾಳ ಹತ್ಯೆ, ದೀಪಕ್ ರಾವ್ ಹತ್ಯೆ, ಪಿಂಕಿ ನವಾಜ್ ಹತ್ಯೆ ಯತ್ನದಂತಹ ಅನೇಕ ಪ್ರಕರಣಗಳಲ್ಲಿ ವಿಚಾರಣೆ ಬಗ್ಗೆ ಪರಿಶೀಲನೆ ಮಾಡಬೇಕಾಗಿದೆ. ಕೆಲವೊಮ್ಮೆ ಆರೋಪಿಗಳು ಜಾಮೀನು ಪಡೆದು ಹೊರಬರುವುದು, ತನಿಖೆ ಸರಿಯಾಗಿ ನಡೆಯದ ಕೇಸ್ ಖುಲಾಸೆಯಾಗಿ ಹೊರಬಂದು ಆರೋಪಿಗಳು ಮತ್ತೆ ಅಂತಹ ಕೃತ್ಯ ಮುಂದುವರಿಸುವುದು ಆಗಬಾರದು, ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಕೋಮುಗಲಭೆಯಲ್ಲಿದ್ದ ಕೆಲವೊಂದು ಆರೋಪಿಗಳು ತಲೆಮರೆಸಿಕೊ೦ಡಿದ್ದರೆ ಆ ಬಗ್ಗೆ ಕ್ರಮ ಕೈಗೊಳ್ಳಬೇಕಾಗಿದೆ. ಪಿಂಕಿ ನವಾಜ್‌ ಹತ್ಯೆ ಯತ್ನ ಪ್ರಕರಣ ಆರೋಪಿ ನೌಷಾದ್ ಎಂಬಾತ ತಲೆಮರೆಸಿಕೊಂಡಿರುವುದು ಗೊತ್ತಾಗಿದೆ. ಇಂತಹ ಪ್ರಕರಣದಲ್ಲಿ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕುವ ಬಗ್ಗೆ ಕ್ರಮ ವಹಿಸಲಾಗುವುದು ಎಂದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

3 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

4 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

4 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

4 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

4 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago