Featured

ಮಂಗಳೂರು: ತಳಕು ಬಳಕು ಲಲನೆಯರ ಹೈಫೈ ಭಿಕ್ಷಾಟನೆ

ಮಂಗಳೂರು: ಅಚ್ಚುಕಟ್ಟಾದ ಬಟ್ಟೆ ಧರಿಸಿ, ಟೈ ಕಟ್ಟಿ ಕೂದಲಿಗೆ ಬಣ್ಣ ಹಚ್ಚಿಕೊಂಡು ಹಣ ಕೇಳಲು ಬರುವ ಹುಡುಗಿಯರ ಮೇಲೆ ಕರುಣೆ ತೋರಿ ಹಣ ಕೊಟ್ಟಿರಾ ಜೋಕೆ! ಯಾಕಂದ್ರೆ ಇಂತಹ ಯುವತಿಯರ ಗುಂಪು ಮಂಗಳೂರಿನಲ್ಲಿ ಈಗ ಭಿಕ್ಷಾಟನೆಯಲ್ಲಿ ತೊಡಗಿದೆ.

ಜೀನ್ಸ್ ಪ್ಯಾಂಟ್, ಶರ್ಟ್, ಕೊರಳಿಗೊಪ್ಪುವ ಟೈ, ಬಣ್ಣ ಹಚ್ಚಿ ಮಾಡಿದ ಕೆಂಬಣ್ಣದ ಕೂದಲು, ತಳಕು ಬಳಕು ಮೈಮಾಟ…ಪಕ್ಕನೆ ನೋಡಿದರೆ ಇವರು ಲುಕ್ ನಲ್ಲಿ ತೀರಾ ಹೈಫೈ..ಆದರೆ ಕೆಲಸ ಮಾತ್ರ ಭಿಕ್ಷಾಟನೆ.. ಒಂಥರಾ ಹೈಟೆಕ್ ನಂತಹ ಭಿಕ್ಷಾಟನೆ ಅಂದರೂ ತಪ್ಪಿಲ್ಲ..ಮಾತಿನಲ್ಲೇ ಮೋಡಿ ಮಾಡಿ ಸಾರ್ವಜನಿಕರಿಂದ ಸಾವಿರಾರು ರೂ. ವಸೂಲಿ ಮಾಡುವ ಮೂಲಕ ಹೈಟೆಕ್ ಭಿಕ್ಷಾಟನೆಯಲ್ಲಿ ತೊಡಗಿದ್ದ ೮ ಮಂದಿ ಲಲನೆಯರು ಇದೀಗ ಪೊಲೀಸರ ಅತಿಥಿಗಳಾದ ಘಟನೆ ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ರಾಜಸ್ಥಾನದ ರಾಣಿಪುರದವರು ಎಂದು ಹೇಳಿಕೊಳ್ಳುವ ಈ ತಂಡ, ಭಿಕ್ಷಾಟನೆಯಲ್ಲಿ ಸಕ್ರಿಯವಾಗಿದೆ. ತಮ್ಮ ಊರಿನಲ್ಲಿ ನೆರೆ ಬಂದಿದ್ದು, ಆಸ್ತಿ ಪಾಸ್ತಿ ಕಳೆದುಕೊಂಡಿದ್ದೇವೆ. ಆಹಾರ ಬಟ್ಟೆ ಬರೆ ಇಲ್ಲದೆ ಸಂತ್ರಸ್ತರಾಗಿರುವ ನಮಗೆ ಧನ ಸಹಾಯ ನೀಡಿ ಎಂದು ಪಾಂಪ್ಲೆಟ್ಸ್‌ ಹಂಚುತ್ತಿದ್ದಾರೆ. ಕಳೆದ 8 ತಿಂಗಳಿನಿಂದ ನಗರದಲ್ಲಿ ಭಿಕ್ಷಾಟನೆ ಮಾಡುತ್ತಿದ್ದಾರೆ. ಸದ್ಯ ಮಹಿಳೆಯರ ಗುಂಪನ್ನು ಮಂಗಳೂರಿನ ಸಾಮಾಜಿಕ ಹೋರಾಟಗಾರ ಸೌರಜ್, ಕದ್ರಿ ಠಾಣಾ ಪೊಲೀಸರಿಗೆ ಹಿಡಿದುಕೊಟ್ಟಿದ್ದಾರೆ. ಈ ಸಂಬಂಧ ಯುವತಿಯರ ಮೇಲೆ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

15 minutes ago

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

4 days ago