ಮಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸೋಂಕಿನಿಂದಾಗಿ ಅರ್ಚಕರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಕಾರಣ ಸರ್ಕಾರದಿಂದ ತಸ್ತಿಕ್ ಭತ್ತೆ ನೀಡಲು ಆದೇಶಿಸಿದನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸುತ್ತದೆ. ಆದರೆ ಅದೇ ಆದೇಶದ ಪ್ರಕಾರ ತಸ್ತಿಕ್ ಹಣವನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ 41 ಮಸೀದಿ, ಮದರಸಾದ ಮೌಲ್ವಿಗಳಿಗೆ ನೀಡಲು ನಿರ್ಧರಿಸಿದ್ದನ್ನು ವಿಶ್ವ ಹಿಂದೂ ಪರಿಷದ್ ವಿರೋಧಿಸುತ್ತದೆ.
ದೈವಸ್ಥಾನ, ದೇವಸ್ಥಾನದ ಹಣವನ್ನು ಹಿಂದೂಗಳಿಗೆ ಮತ್ತು ದೇವಸ್ಥಾನದ ಕಾರ್ಯಗಳಿಗೆ ಮಾತ್ರ ಉಪಯೋಗಿಸಬೇಕು ವಿನಃ ಮಸೀದಿ, ಮದರಸಾಗಳಿಗೆ ಉಪಯೋಗಿಸುವುದನ್ನು ಖಂಡಿಸುವ ಮೂಲಕ ಈ ನಿರ್ಧಾರವನ್ನು ಹಿಂಪಡೆಯಬೇಕೆಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮನವಿ ಸಲ್ಲಿಸಲಾಯಿತು.
ಮನವಿಗೆ ಸ್ಪಂದಿಸಿದ ಸಚಿವರು ನಿರ್ಧಾರವನ್ನು ಹಿಂದೆ ಪಡೆಯುವುದಾಗಿ ಭರವಸೆ ಕೊಟ್ಟರು. ವಿಶ್ವ ಹಿಂದೂ ಪರಿಷದ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್, ಜಿಲ್ಲಾ ಅಧ್ಯಕ್ಷ ಗೋಪಾಲ್ ಕುತ್ತಾರ್, ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್, ಜಿಲ್ಲಾ ಉಪಾಧ್ಯಕ್ಷರು ಮನೋಹರ್ ಸುವರ್ಣ, ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…
ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…
ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ : ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…