ಮಂಗಳೂರು: ತಾನು ಕೆಲಸ ಮಾಡಿಕೊಂಡಿದ್ದ ಬ್ಯಾಂಕ್ ನಲ್ಲೇ ನಿವೃತ್ತ ಉದ್ಯೋಗಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಕೊಡಿಯಾಲಬೈಲಿನಲ್ಲಿ ಗುರುವಾರ(ಜೂ.26) ಬೆಳಕಿಗೆ ಬಂದಿದೆ.
ಅಳಕೆ ನಿವಾಸಿ ಗಿರಿಧರ್ ಯಾದವ್ (61)ಆತ್ಮಹತ್ಯೆ ಮಾಡಿಕೊಂಡವರು.
ಗಿರಿಧರ್ ಅವರು ಕೊಡಿಯಾಲಬೈಲಿನ ಬ್ಯಾಂಕ್ ಒಂದರಲ್ಲಿ ಅಟೆಂಡರ್ ಕೆಲಸ ನಿರ್ವಹಿಸುತ್ತಿದ್ದು ಇತ್ತೀಚಿಗೆ ನಿವೃತ್ತರಾಗಿದ್ದರು, ಆದರೆ ಆ ಬಳಿಕವೂ ಬ್ಯಾಂಕ್‌ಗೆ ಬಂದು ಹೋಗುತ್ತಿದ್ದರು ಅದರಂತೆ ಬುಧವಾರವೂ ಬಂದಿದ್ದ ಅವರು ಮನೆಗೆ ಹೋಗದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಪತ್ನಿ ಬಂದರು ಠಾಣೆಗೆ ದೂರು ನೀಡಿದ್ದರು.
ಗುರುವಾರ ಬೆಳಗ್ಗೆ ಬ್ಯಾಂಕಿನ ಸಿಬ್ಬಂದಿ ಸ್ಟೋರ್ ರೂಂ ತೆರೆದಾಗ ಅಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಗಿರಿಧರ್ ದೇಹ ಪತ್ತೆಯಾಗಿದೆ.
ಪವರ್ ಲಿಫ್ಟರ್ ಆಗಿದ್ದ ಯಾದವ್ ಹಲವು ಪದಕಗಳನ್ನು ಪಡೆದಿದ್ದರು ಎಂದು ಹೇಳಲಾಗಿದ್ದು ಇತ್ತೀಚಿಗೆ ಹಲವು ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಘಟನೆ ಸಂಬಂಧ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…