Featured

ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ನಿವೃತ್ತ ಉದ್ಯೋಗಿ – vishwanews24

ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ನಿವೃತ್ತ ಉದ್ಯೋಗಿ

ಮಂಗಳೂರು: ತಾನು ಕೆಲಸ ಮಾಡಿಕೊಂಡಿದ್ದ ಬ್ಯಾಂಕ್ ನಲ್ಲೇ ನಿವೃತ್ತ ಉದ್ಯೋಗಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಕೊಡಿಯಾಲಬೈಲಿನಲ್ಲಿ ಗುರುವಾರ(ಜೂ.26) ಬೆಳಕಿಗೆ ಬಂದಿದೆ.

ಅಳಕೆ ನಿವಾಸಿ ಗಿರಿಧರ್ ಯಾದವ್ (61)ಆತ್ಮಹತ್ಯೆ ಮಾಡಿಕೊಂಡವರು.

ಗಿರಿಧರ್ ಅವರು ಕೊಡಿಯಾಲಬೈಲಿನ ಬ್ಯಾಂಕ್ ಒಂದರಲ್ಲಿ ಅಟೆಂಡರ್ ಕೆಲಸ ನಿರ್ವಹಿಸುತ್ತಿದ್ದು ಇತ್ತೀಚಿಗೆ ನಿವೃತ್ತರಾಗಿದ್ದರು, ಆದರೆ ಆ ಬಳಿಕವೂ ಬ್ಯಾಂಕ್‌ಗೆ ಬಂದು ಹೋಗುತ್ತಿದ್ದರು ಅದರಂತೆ ಬುಧವಾರವೂ ಬಂದಿದ್ದ ಅವರು ಮನೆಗೆ ಹೋಗದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಪತ್ನಿ ಬಂದರು ಠಾಣೆಗೆ ದೂರು ನೀಡಿದ್ದರು.

ಗುರುವಾರ ಬೆಳಗ್ಗೆ ಬ್ಯಾಂಕಿನ ಸಿಬ್ಬಂದಿ ಸ್ಟೋರ್ ರೂಂ ತೆರೆದಾಗ ಅಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಗಿರಿಧರ್ ದೇಹ ಪತ್ತೆಯಾಗಿದೆ.

ಪವರ್ ಲಿಫ್ಟರ್ ಆಗಿದ್ದ ಯಾದವ್ ಹಲವು ಪದಕಗಳನ್ನು ಪಡೆದಿದ್ದರು ಎಂದು ಹೇಳಲಾಗಿದ್ದು ಇತ್ತೀಚಿಗೆ ಹಲವು ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಘಟನೆ ಸಂಬಂಧ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

4 minutes ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

13 minutes ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

20 minutes ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

40 minutes ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

50 minutes ago

ಪುತ್ತೂರು ಅತ್ಯಾಚಾರ ಪ್ರಕರಣ: ರಾಜಿ ಸಂಧಾನದ ಮೂಲಕ ವಿವಾದ ಇತ್ಯರ್ಥಕ್ಕೆ ಹೈಕೋರ್ಟ್ ಸೂಚನೆ – vishwanews24

ಪುತ್ತೂರು ಅತ್ಯಾಚಾರ ಪ್ರಕರಣ: ರಾಜಿ ಸಂಧಾನದ ಮೂಲಕ ವಿವಾದ ಇತ್ಯರ್ಥಕ್ಕೆ ಹೈಕೋರ್ಟ್ ಸೂಚನೆ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ…

56 minutes ago