Featured

ಮಂಗಳೂರು: ತಾಪಮಾನ ಹೆಚ್ಚಳ – ವಿದ್ಯಾರ್ಥಿಗಳ ಆರೋಗ್ಯ ರಕ್ಷಣೆಗೆ ಡಿಸಿ ವಿಶೇಷ ಸೂಚನೆ – Vishwanews24

ಮಂಗಳೂರು: ತಾಪಮಾನ ಹೆಚ್ಚಳ – ವಿದ್ಯಾರ್ಥಿಗಳ ಆರೋಗ್ಯ ರಕ್ಷಣೆಗೆ ಡಿಸಿ ಸೂಚನೆ

ಮಂಗಳೂರು: ಜಿಲ್ಲೆಯಲ್ಲಿ ತಾಪಮಾನ ಹೆಚ್ಚುತ್ತಿದ್ದುಎಲ್ಲಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ತಮ್ಮ ಅಧೀನಕ್ಕೊಳಪಟ್ಟ ವಿದ್ಯಾರ್ಥಿ ನಿಲಯಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳ ಆರೋಗ್ಯದ ಹಿನ್ನೆಲೆಯಲ್ಲಿ ಸೂಕ್ತ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ವಿಶೇಷ ಸೂಚನೆ ನೀಡಿದ್ದಾರೆ.

ಎಲ್ಲಾ ವಿದ್ಯಾರ್ಥಿಗಳಿಗೂ ಶುದ್ಧ ಕುಡಿಯುವ ನೀರನ್ನು ಕೊಡಬೇಕು. ಆದಷ್ಟು ಕುದಿಸಿ ಆರಿಸಿದ ನೀರನ್ನು ಕುಡಿಯುವಂತೆ ತಿಳಿಸಬೇಕು.ವಿದ್ಯಾರ್ಥಿ ನಿಲಯಗಳ ಅಡುಗೆ ಕೋಣೆಯನ್ನು ಮತ್ತು ಅಡುಗೆಗೆ ಬಳಸುವ ಪಾತ್ರೆ, ಪರಿಕರಗಳನ್ನು ಸ್ವಚ್ಛವಾಗಿಟ್ಟುಕೊಂಡಿರಬೇಕು. ಅಡುಗೆ ತಯಾರಿಸುವವರು ಮತ್ತು ಆಹಾರ ಬಡಿಸುವವರು ಕೈಗಳ ಶುಚಿತ್ವ ಸೇರಿದಂತೆ ವೈಯಕ್ತಿಕ ಶುಚಿತ್ವ ಕಾಪಾಡಿಕೊಳ್ಳುವಂತೆ ನೋಡಿಕೊಳ್ಳಬೇಕು. ಪ್ರತಿ 6 ತಿಂಗಳಿಗೊಮ್ಮೆ ಅಡುಗೆ ಕೋಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರ ಮತ್ತು ಆಹಾರ ತಯಾರಕರ ಆರೋಗ್ಯ ತಪಾಸಣೆಯನ್ನು ನಡೆಸುವುದು ಸೇರಿದಂತೆ
ವಿದ್ಯಾರ್ಥಿ ನಿಲಯಗಳಿಗೆ ವಿವಿಧ ಮೂಲಗಳಿಂದ ಸರಬರಾಜು ಆಗುವ ನೀರಿನ ಮಾದರಿಯನ್ನು ಪ್ರತೀ ತಿಂಗಳು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿ, ಕುಡಿಯಲು ಮತ್ತು ಅಡುಗೆ ತಯಾರಿಕೆಗೆ ಸುರಕ್ಷಿತ ನೀರನ್ನು ಒದಗಿಸಲು ಅಗತ್ಯ ವಿದ್ಯಾರ್ಥಿ ನಿಲಯಗಳ ಶೌಚಾಲಯ, ಸ್ನಾನದ ಕೋಣೆಯನ್ನು ಸ್ವಚ್ಚವಾಗಿಡಬೇಕು

ಬೇಸಿಗೆ ಸಂದರ್ಭ ಆಹಾರ ಪದಾರ್ಥಗಳು ಬೇಗನೆ ಕೆಡುವ ಸಾಧ್ಯತೆ ಇರುವುದರಿಂದ, ಈ ಬಗ್ಗೆ ಗಮನಹರಿಸಿ, ಎಲ್ಲಾ ವಿದ್ಯಾರ್ಥಿಗಳಿಗೂ ಬಿಸಿಯಾದ ಸುರಕ್ಷಿತ ಆಹಾರವನ್ನು ನೀಡಲು ಕ್ರಮ ಕೈಗೊಳ್ಳಬೇಕು.ವಿದ್ಯಾರ್ಥಿ ನಿಲಯಗಳ ಶೌಚಾಲಯ, ಸ್ನಾನದ ಕೋಣೆಯನ್ನು ಸ್ವಚ್ಛವಾಗಿಡಬೇಕು.ಬೇಸಿಗೆ ಸಂದರ್ಭದಲ್ಲಿ ನಿರ್ಜಲೀಕರಣ ಆಗುವ ಸಾಧ್ಯತೆ ಇರುವುದರಿಂದ, ಬಗ್ಗೆ ಎಲ್ಲಾ ವಿದ್ಯಾರ್ಥಿಗಳಿಗೂ ಮಾಹಿತಿ ನೀಡಿ ಎಲ್ಲರೂ ಶುದ್ಧ ನೀರು, ದ್ರವ ಆಹಾರವನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವಂತೆ ಜಾಗೃತಿ ವಹಿಸಬೇಕು.ಅಡುಗೆ ಕೋಣೆಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಪ್ರತಿದಿನ ಸೂಕ್ತ ರೀತಿಯಲ್ಲಿ ವಿಲೇವಾರಿ ನಡೆಸಬೇಕು.

ಯಾವುದಾದರೂ ವಿದ್ಯಾರ್ಥಿಗೆ ಅನಾರೋಗ್ಯ ಕಂಡುಬಂದಲ್ಲಿ ಕೂಡಲೇ ವೈದ್ಯಾಧಿಕಾರಿ, ಆರೋಗ್ಯ ಇಲಾಖೆಯನ್ನು ಸಂಪರ್ಕಿಸಿ, ಸೂಕ್ತ ಚಿಕಿತ್ಸೆಯನ್ನು ನೀಡಬೇಕು.ಈ ಎಲ್ಲಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಯಾವುದೇ ದುಷ್ಪರಿಣಾಮ ಆಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ.

Vishwa News 24

Recent Posts

ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ – vishwanews24

ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ಬೆಂಗಳೂರು: ಚಿಕನ್ ಪ್ರಿಯರೇ ಎಚ್ಚರವಾಗೀರಿ. ರಾಜ್ಯಕ್ಕೆ H5N1 ವೈರಸ್…

58 minutes ago

ಕಾಪು : ಕಾರು-ಲಾರಿ ಮಧ್ಯೆ ಭೀಕರ ಅಪಘಾತ  – ಓರ್ವ ಸಾವು, ಇಬ್ಬರು ಗಂಭೀರ – vishwanews24

ಕಾಪು : ಕಾರು-ಲಾರಿ ಮಧ್ಯೆ ಭೀಕರ ಸ್ತೆ  ಅಪಘಾತ  - ಓರ್ವ ಸಾವು, ಇಬ್ಬರು ಗಂಭೀರ ಕಾಪು: ಮಂಗಳೂರು-ಉಡುಪಿ ರಾಷ್ಟ್ರೀಯ…

1 hour ago

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ – vishwanews24

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ…

21 hours ago

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ – vishwanews24

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…

21 hours ago

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ – vishwanews24

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್‌ನ ಐಎಎಸ್…

22 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ – vishwanews24

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…

23 hours ago