ಮಂಗಳೂರು: ತುಳುನಾಡಿನ ಸಂಸ್ಕೃತಿ ಬಿಂಬಿಸುವ ಹಾಡು ಹಾಡಿ ಕರಾವಳಿ ಜನರ ಮನ ಗೆದ್ದ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ತುಳುನಾಡಿನ ಸಂಸ್ಕೃತಿ ಬಿಂಬಿಸುವ ಹಾಡು ಹಾಡಿ ಕರಾವಳಿ ಜನರ ಮನ ಗೆದ್ದ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಮಂಗಳೂರು: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ತುಳುನಾಡಿನ ಸಂಸ್ಕೃತಿ ಬಿಂಬಿಸುವ ಹಾಡೊಂದನ್ನು ಹಾಡುವ ಮೂಲಕ ಕರಾವಳಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಮಂಗಳೂರು ನಗರದ ಕಮಿಷನರ್ ಕಚೇರಿ ಸಭಾಂಗಣದಲ್ಲಿ ದ.ಕ. ಜಿಲ್ಲಾ ಪೊಲೀಸ್ ಹಾಗೂ ಮಂಗಳೂರು ಕಮಿಷನರೆಟ್ ಘಟಕದ ವತಿಯಿಂದ ಆಯೋಜಿಸಿದ್ದ ಸ್ನೇಹ ಸೌಹಾರ್ದ ಸಮ್ಮಿಲನದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಹಾಡು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಮೂಲಕ ಮುಲ್ಲೈ ಮುಗಿಲನ್ ಅವರು ಜನರ ಮನಸ್ಸನ್ನ ಗೆದ್ದಿದ್ದಾರೆ.

ಬಾಣಂತಿಯರ ಸರಣಿ ಸಾವು ಪ್ರಕರಣ : ಬಳ್ಳಾರಿ ಜಿಲ್ಲಾಸ್ಪತ್ರೆಗೆ  ಲೋಕಾಯುಕ್ತ ಅಧಿಕಾರಿಗಳು ದಾಳಿ – vishwanews24

ಮೂಲತಃ ತಮಿಳುನಾಡಿನವರಾದ ಜಿಲ್ಲಾಧಿಕಾರಿಯವರು ಮಂಗಳೂರಿನಲ್ಲಿ ತಮ್ಮ ಸೇವೆ ಸಲ್ಲಿಸುತ್ತಿದ್ದು, ತುಳು ಸಂಪ್ರದಾಯ, ಆಚಾರ ವಿಚಾರಗಳ ಬಗ್ಗೆ ಅರಿತುಕೊಂಡಿರುವ ಅವರು ತುಳುನಾಡಿನ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ. ಇನ್ನು ಜಿಲ್ಲಾಧಿಕಾರಿಗಳು ಕಳೆದ ಲೋಕಸಭೆ ಚುನಾವಣೆ ವೇಳೆ ತುಳು ಭಾಷೆಯಲ್ಲೇ ಮತದಾನ ಜಾಗೃತಿ ಮಾಡಿದ್ದರು.

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ : vishwanews24

Leave a Reply