Featured

ಮಂಗಳೂರು : ತುಳುಲಿಪಿಗೆ ಕೇಂದ್ರ ಹಾಗೂ ರಾಜ್ಯ ಸರಕಾರದ ಮಾನ್ಯತೆ ಯಿಂದ ಗೌರವ ಹೆಚ್ಚಾಗಿದೆ : ದಯಾನಂದ ಜಿ. ಕತ್ತಲ್‌ಸಾರ್ -Vishwanews24

ಮಂಗಳೂರು : ತುಳುಲಿಪಿಗೆ ಕೇಂದ್ರ ಹಾಗೂ ರಾಜ್ಯ ಸರಕಾರದ ಮಾನ್ಯತೆ ಯಿಂದ ಗೌರವ ಹೆಚ್ಚಾಗಿದೆ : ದಯಾನಂದ ಜಿ. ಕತ್ತಲ್‌ಸಾರ್ -Vishwanews24

ಮಂಗಳೂರು: ಕರ್ನಾಟಕ ಸರಕಾರದ ಅಧೀನದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ಕಾರ‍್ಯ ನಿರ್ವಹಿಸುತ್ತಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಇದರ ಮೂಲಕ ತುಳು ಭಾಷೆ-ಸಂಸ್ಕೃತಿ-ಸಾಹಿತ್ಯ ಚಟುವಟಿಕೆಯನ್ನು ನಡೆಸುತ್ತಿದ್ದು ಇದಕ್ಕೆ ಪೂರಕವಾಗಿ ಪ್ರಾಚೀನ ಭಾಷೆಯ ನೆಲೆಯಲ್ಲಿ “ತುಳು ಲಿಪಿ”ಯನ್ನು ಅಧಿಕೃತವಾಗಿ ಅಕಾಡೆಮಿಯ ಮೂಲಕ ಹಲವು ತಜ್ಞರ ಅಭಿಪ್ರಾಯದಂತೆ ಕ್ರೋಢೀಕರಿಸಿಕೊಂಡು ಯೂನಿಕೋಡ್‌ನಲ್ಲಿ ಅಳವಡಿಸುವ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರಕಾರದ ಅನುಮತಿಯನ್ನು ಕೇಳಿಕೊಳ್ಳುವ ಪ್ರಯತ್ನವು ಈ ಬಾರಿ ಯಶಸ್ವಿಯಾಗಿದೆ ಕೇಂದ್ರ ಸರಕಾರದ ಭಾರತೀಯ ಭಾಷಾ ಸಂಸ್ಥಾನ ಸಿಐಐಎಲ್ ಮೈಸೂರು ಇವರಿಂದ ಮಾನ್ಯತಾ ಪತ್ರ ಲಭ್ಯವಾಗಿದೆ ಎಂದು ಹೇಳಲು ಸಂತಸವಾಗಿದೆ. ಇದು ತುಳುನಾಡಿಗೆ ಕೇಂದ್ರ ಮತ್ತು ರಾಜ್ಯ ಸರಕಾರದ ದೊಡ್ಡ ಐತಿಹಾಸಿಕ ಕೊಡುಗೆಯಾಗಿದೆ ಎಂದು ತುಳು ಅಕಾಡೆಮಿ ಅಧ್ಯಕ್ಷರಾದ ದಯಾನಂದ ಜಿ ಕತ್ತಲ್‌ ಸಾರ್‌ ಹೇಳಿದ್ದಾರೆ.

ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ 2014ರಲ್ಲಿ ತುಳು ಲಿಪಿಯ ಬಗ್ಗೆ ಅಕಾಡೆಮಿಯಲ್ಲಿ ಸಭೆಯನ್ನು ಅಯೋಜಿಸಿಕೊಂಡು, 2016ರಲ್ಲಿ ಮತ್ತೆ ಸಭೆಯನ್ನು ನಡೆಸಿ ನಡಾವಳಿಯ ಮೂಲಕ ಚರ್ಚೆ ನಡೆಸಿ, 2017ರಲ್ಲಿ ತಜ್ಞರ ಮೂಲಕ ಚರ್ಚೆ ನಡೆಸಿ, ಇದಕ್ಕೆ ಪೂರಕವಾಗಿ ದ್ರಾವಿಡಿಯನ್ ಯೂನಿವರ್ಸಿಟಿ ಕುಪ್ಪಂ, ಯೂನಿವರ್ಸಿಟಿ ಆಫ್ ಮುಂಬೈ, ಮಂಗಳೂರು ಯೂನಿವರ್ಸಿಟಿ, ಕೇರಳ ತುಳು ಅಕಾಡೆಮಿಯ ಸಹಿತ ಹಲವು ಪ್ರಾಚೀನವಾದ ಶಿಲಾ ಶಾಸನಗಳು, ತುಳು ನಾಡಿನ ಇತಿಹಾಸಗಳು, ಐತಿಹ್ಯದ ಮಾಹಿತಿ ಹಾಗೂ ಈ ಬಗ್ಗೆ ಅನೇಕ ಹಿರಿಯ ಸಾಹಿತಿ, ಸಂಶೋಧಕರ ನಡುವೆ ಸಂವಹನ ನಡೆಸಿಕೊಂಡು ತುಳು ಲಿಪಿಯನ್ನು ಯೂನಿಕೋಡ್ ಕನ್ಸೋಟಿಯಮ್ ಗಾಗಿ ರಾಜ್ಯ ಸರಕಾರದ ಅಧಿಕೃತ ಒಪ್ಪಿಗೆಗಾಗಿ ಮನವಿ ಮಾಡಿಕೊಂಡಿದ್ದೆವು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ರಾಜ್ಯ ಸರಕಾರವು ಇದಕ್ಕೆ ಪೂರಕವಾಗಿ ಮಾಹಿತಿಯನ್ನು ಪಡೆದುಕೊಂಡು ಪ್ರಸ್ತುತ ರಾಜ್ಯ ಸರಕಾರದ ಮುಖ್ಯಮಂತ್ರಿಗಳ ಮಾಹಿತಿ ತಂತ್ರಾಂಶದ ಆಪ್ತ ಸಲಹೆಗಾರರಾದ ಶ್ರೀ ಬೇಳೂರು ಸುದರ್ಶನ ಅವರ ವಿಶೇಷ ಸಹಕಾರದ ಮಾರ್ಗದರ್ಶನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶ್ರೀ ಅರವಿಂದ ಲಿಂಬಾವಳಿ ಅವರ ವಿಶೇಷ ಆಸಕ್ತಿಂದ ಹಾಗೂ ತುಳು ಭಾಷಾಭಿಮಾನದಿಂದ ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ಮೂಲಕ ಸಿಐಐಎಲ್ ಮೈಸೂರು ಅಧಿಕೃತವಾಗಿ ಮಾನ್ಯತೆ ನೀಡಿರುವುದು ತುಳುನಾಡಿನ ಪ್ರಗತಿಗೆ ಕಾರಣವಾಗಿದೆ.

ಈ ಸಂದರ್ಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರ ನೆಲೆಯಲ್ಲಿ ಸರ್ವ ಸದಸ್ಯರ ಪರವಾಗಿ ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್.ಯಡಿಯೂರಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸನ್ಮಾನ್ಯ ಶ್ರೀ ಅರವಿಂದ ಲಿಂಬಾವಳಿ ಅವರಿಗೆ ವಿಶೇಷವಾಗಿ ಕೃತಜ್ಞತೆಯನ್ನು ಸಲ್ಲಿಸುತ್ತಿದ್ದೇವೆ. ಈ ಸಂದರ್ಭದಲ್ಲಿ ಆರಂಭದಿಂದಲೂ ನಮಗೆ ಮಾರ್ಗದರ್ಶನ ನೀಡಿ ತಾಂತ್ರಿಕತೆಯ ಮೂಲಕ ಸಹಕಾರ ನೀಡಿರುವ ಶ್ರೀ ಬೇಳೂರು ಸುದರ್ಶನ ಹಾಗೂ ಇಲಾಖೆಯ ಎಲ್ಲಾ ಅಧಿಕಾರಿ ವರ್ಗದವರಿಗೂ ವಿಶೇಷವಾಗಿ ಅಭಾರಿಯಾಗಿದ್ದೇವೆ ಈ ಬಗ್ಗೆ ಸ್ಪಂದಿಸಿದ ಪ್ರತ್ಯಕ್ಷ ಹಾಗೂ ಪರೋಕ್ಷ ತುಳುನಾಡಿನ ಗೌರವಾನ್ವಿತರನ್ನು ಕೃತಜ್ಞತಾ ಭಾವನೆಯಲ್ಲಿ ಕಾಣುತ್ತಾ ಮುಂದಿನ ದಿನದಲ್ಲಿ ತುಳುವಿಗೆ ಅಧಿಕೃತ ರಾಜ್ಯ ಭಾಷೆ ಮಾನ್ಯತೆ ಹಾಗೂ ಕೇಂದ್ರದಿಂದ ತುಳು ಪ್ರಾದೇಶಿಕ ಭಾಷೆಯನ್ನು 8ನೇ ಪರಿಚ್ಚೇದಕ್ಕೆ ಸೇರ್ಪಡೆಗೊಳ್ಳಲು ಪೂರಕವಾಗಿ ಹಾಗೂ “ತುಳುಲಿಪಿ”ಯ ಬೆಳವಣಿಗೆಗೆ ಸಹಕಾರಿ ಆಗಲಿದೆ ಎಂದು ತಿಳಿಸಲು ಹರ್ಷ ವ್ಯಕ್ತಪಡಿಸುತ್ತೇನೆ. ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಜಿ. ಕತ್ತಲ್‌ಸಾರ್ ತಿಳಿಸಿದರು.

ಅಕಾಡೆಮಿಯ ಸದಸ್ಯರಾದ ಡಾ.ಆಕಾಶ್‌ರಾಜ್ ಜೈನ್, ನಿಟ್ಟೆ ಶಶಿಧರ ಶೆಟ್ಟಿ, ನಾಗೇಶ್ ಕುಲಾಲ್ ಕುಳಾಯಿ, ನರೇಂದ್ರ ಕೆರೆಕಾಡು, ಚೇತಕ್ ಪೂಜಾರಿ, ಅಕಾಡೆಮಿಯ ರಿಜಿಸ್ಟ್ರಾರ್ ಕವಿತಾ ಪ್ರಶಾಂತ್ ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

9 minutes ago

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

24 minutes ago

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

30 minutes ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

35 minutes ago

ಪುತ್ತೂರು: ನಾಪತ್ತೆಯಾಗಿದ್ದ ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ – vishwanews24

ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…

40 minutes ago

ಕಾಂಗ್ರೆಸ್ ಪಕ್ಷ ತನ್ನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು , ಶೀಘ್ರದಲ್ಲೇ ಹೊಸ ಜಿಲ್ಲಾಅಧ್ಯಕ್ಷರ ನೇಮಕಾತಿ :ಬಿ.ಕೆ. ಹರಿಪ್ರಸಾದ್ – vishwanews24

ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ :  ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…

52 minutes ago