ಮಂಗಳೂರು: ತುಳುವೆರ್ ಕುಡ್ಲ (ರಿ) ಮಂಗಳೂರು, ತುಳುನಾಡು ವಾರ್ತೆ ವಾರಪತ್ರಿಕೆ ಮತ್ತು ‘ನಮ್ಮ ಟಿ.ವಿ’ ಸಂಯುಕ್ತ ಆಯೋಜನೆಯಲ್ಲಿ ‘ನಮ್ಮ ಪ್ರಧಾನಿಗೆ ತುಳುವೆರೆ ಪೋಸ್ಟ್ ಕಾರ್ಡ್’ ಎಂಬ ಅಭಿಯಾನವನ್ನು ಪ್ರಾರಂಭಿಸಲು ಯೋಜನೆ ರೂಪಿಸಲಾಗಿದೆ.
ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ವಿಷಯ ತಿಳಿಸಿದ ಸಂಘಟಕ ನವೀನ್ ಶೆಟ್ಟಿ ಎಡ್ಮೆಮಾರ್, ‘ಸೆ 1ರಂದು ಬೆಳಗ್ಗೆ 10:30ಕ್ಕೆ ಬಂಜಾರ್ ಮಲೆ ಗ್ರಾಮದಿಂದ ಈ ಅಭಿಯಾನ ಆರಂಭಗೊಳ್ಳಲಿದೆ. ಕಳೆದ ಒಂದು ವರ್ಷದಿಂದ ತುಳು ಭಾಷೆಗೆ ಮಾನ್ಯತೆ ನೀಡುವ ವಿಚಾರವಾಗಿ ಅದೆಷ್ಟೇ ಹೋರಾಟ ನಡೆಸಿದರೂ ಯಾವುದೇ ಫಲಪ್ರದವಾಗಲಿಲ್ಲ.
ಸಂಘ ಸಂಸ್ಥೆಗಳು ತಮ್ಮ ಧ್ವನಿಯನ್ನು ಎತ್ತಿದರೂ ಈವರೆಗೆ ಯಾವುದೇ ಫಲ ಲಭಿಸಿಲ್ಲ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತುಳುವರಿಂದ ಪೋಸ್ಟ್ ಕಾರ್ಡ್ ಮೂಲಕ ತುಳುಬಾಷೆಗೆ ಅಧಿಕೃತ ಮಾನ್ಯತೆಯನ್ನು ಒದಗಿಸಬೇಕಾಗಿ ಈ ವಿಭಿನ್ನ ರೀತಿಯಲ್ಲಿ ಅಭಿಯಾನವನ್ನು ಆಯೋಜಿಸಲಾಗಿದೆ. ಹುಬ್ಬಳ್ಳಿ : ಈದ್ಗಾ ಮೈದಾನದಲ್ಲಿ ಮೂರು ದಿನಗಳ ಕಾಲ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ – Vishwanews24
ಈ ಅಭಿಯಾನವು 1,00,000ಕ್ಕೂ ಅಧಿಕ ಪೋಸ್ಟ್ ಕಾರ್ಡ್‌ನ್ನು ತುಳುವರಿಂದ ಅಂಚೆಯ ಮೂಲಕ ಪ್ರಧಾನಿಯವರಿಗೆ ಕಳುಹಿಸುವ ಗುರಿಯನ್ನು ಹೊಂದಿದೆ ಎಂದು ತಿಳಿಸಿದರು. ಇನ್ನು ಈ ಬಗ್ಗೆ ತುಳುವೆರ್ ಕುಡ್ಲದ ಅಧ್ಯಕ್ಷ ಪ್ರತೀಕ್ ಪೂಜಾರಿ ಮಾತನಾಡಿ ‘ಈ ಅಭಿಯಾನವು ಯಾವುದೇ ರಾಜಕೀಯ/ವೈಯಕ್ತಿಕ ಉದ್ದೇಶವನ್ನು ಹೊಂದಿಲ್ಲ.
ಅಭಿಯಾನವು ಚಾಲನೆಯಾದ ಬಳಿಕ ಎಲ್ಲಾ ತುಳುಪರ ಸಂಘಟನೆಗಳು, ರಾಜಕೀಯ ಪಕ್ಷ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ಇತರ ಎಲ್ಲಾ ಸಂಘ ಸಂಸ್ಥೆಗಳು ಅಭಿಯಾನದಲ್ಲಿ ನಮ್ಮೊಂದಿಗೆ ಕೈಜೋಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಹಿಳಾ ವಿಭಾಗದ ಅಧ್ಯಕ್ಷೆ ಪೂಜಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯರಾಂ, ತುಳುನಾಡ ವಾರ್ತೆಯ ಪುನೀತ್ ಉಪಸ್ಥಿತರಿದ್ದರು. ದೇಶದ ಅಗ್ರಗಣ್ಯ ತಜ್ಞರಲ್ಲಿ ಒಬ್ಬರಾಗಿದ್ದ ಖ್ಯಾತ ಅರ್ಥಶಾಸ್ತ್ರಜ್ಞ ಅಭಿಜಿತ್ ಸೇನ್ ನಿಧನ – Vishwanews24
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…