Featured

ಮಂಗಳೂರು : ತುಳು ಸಿನೆಮಾ ‘ಪಿಂಗಾರ’ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಆಯ್ಕೆ -Vishwanews24

ಮಂಗಳೂರು : ತುಳು ಸಿನೆಮಾ ‘ಪಿಂಗಾರ’ಕ್ಕೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಆಯ್ಕೆ -Vishwanews24

ಮಂಗಳೂರು : ತುಳುನಾಡಿನ ದೈವಾರಾಧನೆ ಹಾಗೂ ತುಳು ಮಣ್ಣಿನ ಸಂಸ್ಕೃತಿಯ ಕಥೆಯಾಧಾರಿತ ತುಳು ಸಿನೆಮಾ ಪಿಂಗಾರ 2019 ನೇ ಸಾಲಿನ 67 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಆಯ್ಕೆಯಾಗಿದೆ.

”ತುಳು ಚಿತ್ರರಂಗಕ್ಕೆ 50 ವರ್ಷ ತುಂಬಿದ ಈ ಸುವರ್ಣ ಸಂಭ್ರಮದಲ್ಲಿ ತುಳು ಸಿನೆಮಾಕ್ಕೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿರುವುದು ಸಂತಸದ ವಿಚಾರ. ತುಳು ಚಿತ್ರರಂಗಕ್ಕೆ ಈ ಪ್ರಶಸ್ತಿಯ ಅರ್ಪಣೆ ಮಾಡುತ್ತೇನೆ” ಎಂದು ಹೇಳಿದ್ದಾರೆ ಪಿಂಗಾರ ಚಿತ್ರದ ನಿರ್ದೇಶಕ ಆರ್.ಪ್ರೀತಮ್ ಶೆಟ್ಟಿ.

ಇದನ್ನೂ ಓದಿ : ಪುತ್ತೂರು: ಹೃದಯಾಘಾತದಿಂದ ಪಿಯುಸಿ ವಿದ್ಯಾರ್ಥಿನಿ ಸಾವು -Vishwanews24

ಡಿಎಂಕೆ ಪ್ರೊಡಕ್ಷನ್ಸ್‌ ನಿರ್ಮಾಣದ ಈ ಚಿತ್ರಕ್ಕೆ ಮಂಗಳೂರಿನ ಅವಿನಾಶ್ ಯು. ಶೆಟ್ಟಿ ಮತ್ತು ಮಂಜುನಾಥ ರೆಡ್ಡಿ ಬಂಡವಾಳ ಹೂಡಿದ್ದಾರೆ. ಚಿತ್ರದ ತಾರಾಗಣದಲ್ಲಿ ನೀಮಾರೇ, ಶರಣ್ ಶೆಟ್ಟಿ, ಉಷಾ ಭಂಡಾರಿ, ಗುರು ಹೆಗ್ಡೆ, ಸಿಂಚನಾ ಚಂದ್ರಮೋಹನ್, ಸುನಿಲ್ ನೆಲ್ಲಿಗುಡ್ಡೆ ಹಾಗೂ ಪ್ರಶಾಂತ್ ಸಿ.ಕೆ. ಕಾಣಿಸಿಕೊಂಡಿದ್ದಾರೆ. ಶಶಿರಾಜ್ ಕಾವೂರು ಸಂಭಾಷಣೆ ಬರೆದಿದ್ದು, ಅಮೃತ್‌ ಸೋಮೇಶ್ವರ್ ಮತ್ತು ಶಶಿರಾಜ್‌ ಅವರು ಸಾಹಿತ್ಯ ಬರೆದಿದ್ದಾರೆ. ಮೈಮ್‌ ರಾಮ್‌ದಾಸ್‌, ಶೀನ ನಾಡೋ ಸಂಗೀತ ನಿರ್ದೇಶನ ಮಾಡಿದ್ದಾರೆ. ಛಾಯಾಗ್ರಹಣದಲ್ಲಿ ವಿ. ಪವನ್ ಕುಮಾರ್ ಸಹಕರಿಸಿದ್ದು, ಗಣೇಶ್ ನೀರ್ಚಾಲ್ ಮತ್ತು ಶೇಷಾಚಲ ಕುಲಕರ್ಣಿ ಅವರು ಸಿನೆಮಾದ ಸಂಕಲನ ಮಾಡಿದ್ದಾರೆ.

ಇದನ್ನೂ ಓದಿ : ಮಂಗಳೂರು : ಸೌದಿಯಲ್ಲಿ ಉಳ್ಳಾಲದ ವ್ಯಕ್ತಿ ನಿಗೂಢ ಸಾವು : ಮೃತದೇಹ ತವರೂರಿಗೆ ತರಲು ಸ್ಪಂದಿಸಿದ ಶಾಸಕ ಯು.ಟಿ ಖಾದರ್ -Vishwanews24

ಇನ್ನು ಈ ಸಿನೆಮಾ ಚೆನ್ನೈನಲ್ಲಿ ನಡೆಯಲಿರುವ 2021ನೇ ಸಾಲಿನ ಇಂಡಿಯನ್‌ ಪನೋರಮಾ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೂ ಆಯ್ಕೆಯಾಗಿದೆ. ಕಳೆದ ವರ್ಷ ಈ ಸಿನೆಮಾ ಬೆಂಗಳೂರಿನಲ್ಲಿ ನಡೆದ 12ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪಿಂಗಾರವು ನೆಟ್‌ವರ್ಕ್ ಫಾರ್ ಪ್ರಮೋಶನ್ ಆಫ್ ಏಷ್ಯನ್ ಮತ್ತು ಏಷ್ಯನ್ ಫೆಸಿಫಿಕ್ ವಿಭಾಗದಿಂದ ಬೆಸ್ಟ್ ಏಶಿಯನ್ ಚಲನಚಿತ್ರ ಎಂಬ ಬಿರುದನ್ನು ಮುಡಿಗೇರಿಸಿಕೊಂಡಿತ್ತು. ಈ ಪ್ರಶಸ್ತಿಯನ್ನು ಮೊದಲ ತುಳು ಚಿತ್ರ ಎಂಬ ಹೆಗ್ಗಳಿಕೆಯನ್ನೂ ಹೊಂದಿದೆ.

ಇನ್ನು ಈ ಹಿಂದೆ 5 ತುಳು ಸಿನೆಮಾಗಳಿಗೆ ರಾಷ್ಟ್ರೀಯ ಪ್ರಶಸ್ತಿ ಗೌರವ ದೊರೆತಿದೆ. 1993 ರಲ್ಲಿ ತಯಾರಾದ ರಿಚರ್ಡ್ ಕ್ಯಾಸ್ಟಲಿನೋ ಅವರ ‘ಬಂಗಾರ್‌ ಪಟ್ಲೇರ್’ ‌ಸಿನೆಮಾಕ್ಕೆ ಮೊದಲ ರಾಷ್ಟ್ರೀಯ ಪ್ರಶಸ್ತ್ರಿ ದೊರೆತಿದೆ. 2006 ರಲ್ಲಿ ಆರ್‌ ಧನರಾಜ್‌ ನಿರ್ಮಾಣ, ಆನಂದ್‌ ಪಿ ರಾಜು ನಿರ್ದೇಶನದ ‘ಕೋಟಿ-ಚೆನ್ನಯ’ ಸಿನೆಮಾಕ್ಕೆ ಎರಡನೇ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಬಳಿಕ 2008 ರಲ್ಲಿ ಗುರುದತ್ತ ಹಾಗೂ ಎಂ ದುರ್ಗಾನಂದ ನಿರ್ಮಾಣದ ಶಿವಧ್ವಜ್‌ ನಿರ್ದೇಶನದ ‘ಗಗ್ಗರ’ ಸಿನೆಮಾ ಮೂರನೇ ರಾಷ್ಟ್ರೀಯ ಪ್ರಶಸ್ತಿ ಪಡೆದುಕೊಂಡಿದೆ. ಬಳಿಕ ಸಂದೀಪ್‌ ಕುಮಾರ್‌ ನಂದಳಿಕೆ ನಿರ್ಮಾಣದ, ಚೇತನ್‌ ಮುಂಡಾಡಿ ನಿರ್ದೇಶನದ ‘ಮದಿಪು’ ರಾಷ್ಟ್ರೀಯ ಪ್ರಶಸ್ತಿ ಪಡೆದಿದೆ. ತದನಂತರ ಕಾರ್ಕಳದ ನಿತ್ಯಾನಂದ ಪೈ ನಿರ್ಮಾಣ ಹಾಗೂ ಅಭಯಸಿಂಹ ನಿರ್ದೇಶನದ ‘ಪಡ್ಡಾಯಿ’ ರಾಷ್ಟ್ರೀಯ ಪ್ರಶಸ್ತಿ ಪಡೆದಿದೆ.

ಇದನ್ನೂ ಓದಿ :ಉಡುಪಿ : ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ; ಇಬ್ಬರ ಬಂಧನ -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

13 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

22 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

22 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

22 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

22 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago