ಮಂಗಳೂರು: ದೇಶಾದ್ಯಂತ ಕಾಶ್ಮೀರ್ ಫೈಲ್ಸ್ ಚಿತ್ರ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಿದೆ. ಆದರೆ ಇದನ್ನೇ ಬಂಡವಾಳವನ್ನಾಗಿಸಿದ ಸೈಬರ್ ವಂಚಕರು ಜನರನ್ನು ಲೂಟಿ ಮಾಡಲು ಹೊರಟಿರುವುದು ಬೆಳಕಿಗೆ ಬಂದಿದೆ. ಚಿತ್ರವನ್ನು ಉಚಿತವಾಗಿ ತೋರಿಸುವ ನೆಪದಲ್ಲಿ ಮೊಬೈಲ್‌ಗೆ ಲಿಂಕ್ ಕಳುಹಿಸಿ ವಂಚನೆ ಮಾಡುತ್ತಿರುವ ಬಗ್ಗೆ ಸೈಬರ್ ತಜ್ಞರು ಎಚ್ಚರಿಸಿದ್ದಾರೆ.
ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಉಚಿತವಾಗಿ ಡೌನ್‌ಲೋಡ್ ಮಾಡಬಹುದೆಂದು ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಲಿಂಕ್ ಹರಿದಾಡುತ್ತಿದೆ. ಒಂದು ವೇಳೆ ಸುಲಭ, ಉಚಿತವಾಗಿ ಸಿನಿಮಾ ನೋಡುವ ಆಸೆಯಿಂದ ಅದನ್ನು ಕ್ಲಿಕ್ ಮಾಡಿದರೆ ಮೊಬೈಲ್, ಕಂಪ್ಯೂಟರ್ ವೈರಸ್ ದಾಳಿಗೆ ತುತ್ತಾಗುವುದು ಖಚಿತ
ಗೂಗಲ್ ಸರ್ಚ್‌ನಲ್ಲಿ ಪ್ರಸ್ತುತ ಕಾಶ್ಮೀರ್ ಫೈಲ್ಸ್ ಕೀವರ್ಡ್ ಟಾಪ್ ಲೀಸ್ಟ್‌ನಲ್ಲಿದೆ. ಈ ಅವಕಾಶವನ್ನು ಬಳಸಿಕೊಳ್ಳುವ ಸೈಬರ್ ಖದೀಮರು, ಬಳಕೆದಾರರನ್ನು ಸುಲಭವಾಗಿ ವಂಚನಾ ಜಾಲಕ್ಕೆ ಬೀಳಿಸುತ್ತಿದ್ದಾರೆ. ಈ ಬಗ್ಗೆ ಬಳಕೆದಾರರು ಎಚ್ಚರಿಕೆಯಿಂದ ಇರುವಂತೆ ಮಂಗಳೂರಿನ ಸೈಬರ್ ತಜ್ಞ ಡಾ. ಅನಂತ ಪ್ರಭು.ಜಿ ಎಚ್ಚರಿಸಿದ್ದಾರೆ.
ವಂಚಕರು ಕಳುಹಿಸುವ ಲಿಂಕ್ ಕ್ಲಿಕ್ ಮಾಡಿದ ಬಳಿಕ ನಮ್ಮ ಅರಿವಿಗೆ ಬಾರದಂತೆ ಕೀ ಲಾಗರ್ ಎಂಬ ಆಪ್ ಡ್ರೈ ಬೈ ಡೌನ್‌ಲೋಡ್ ಟೆಕ್ನಿಕ್ ಮೂಲಕ ಡೌನ್‌ಲೋಡ್ ಆಗಿ ಇನ್‌ಸ್ಟಾಲ್ ಆಗುತ್ತದೆ. ಆ ಬಳಿಕ ನಾವು ಮೊಬೈಲ್, ಕಂಪ್ಯೂಟರ್‌ನಲ್ಲಿ ಏನೇ ಮಾಡಿದರೂ ಅದರ ಒಂದು ಕಾಪಿ, ಹ್ಯಾಕರ್ಸ್ ಕೈ ಸೇರುತ್ತದೆ. ಇದರ ಜೊತೆ ಹ್ಯಾಕರ್‌ಗಳು ಮೊಬೈಲ್, ಕಂಪ್ಯೂಟರ್‌ನಲ್ಲಿರುವ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಮಾಹಿತಿ, ಪಾನ್ ಕಾರ್ಡ್ ಸೇರಿದಂತೆ ಇತರ ಖಾಸಗಿ ಮಾಹಿತಿಗಳನ್ನು ಗೌಪ್ಯವಾಗಿ ಪಡೆಯುತ್ತಾರೆ.
ಒಂದು ವೇಳೆ ಈ ಲಿಂಕ್ ಮೂಲಕ ಶಾರ್ಕ್ ಬೋಟ್ ಎಂಬ ಆಪ್ ಡೌನ್‌ಲೋಡ್ ಆದರೆ ಖಾತೆದಾರರಿಗೆ ಗೊತ್ತಾಗದಂತೆ ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ವರ್ಗಾವಣೆ ಮಾಡುತ್ತದೆ. ಈ ಆಪ್ ಯಾಂತ್ರಿಕವಾಗಿ ಬ್ಯಾಂಕ್ ಸರ್ವರ್‌ನೊಂದಿಗೆ ನೆಟ್‌ವರ್ಕ್, ಒಟಿಪಿ ನಮೂದಿಸುವ ಕಾರ್ಯ, ವರ್ಗಾವಣೆ ಸೇರಿದಂತೆ ಎಲ್ಲಾ ಕೆಲಸವನ್ನು ಈ ಸಿಸ್ಟಂ ಮಾಡುತ್ತದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…