Featured

ಮಂಗಳೂರು: ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಫ್ರೀ ಲಿಂಕ್ ಡೌನ್‌ಲೋಡ್ ಬಗ್ಗೆ ಇರಲಿ ಎಚ್ಚರ – Vishwanews24

ಮಂಗಳೂರು: ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಫ್ರೀ ಲಿಂಕ್ ಡೌನ್‌ಲೋಡ್ ಬಗ್ಗೆ ಇರಲಿ ಎಚ್ಚರ – Vishwanews24

ಮಂಗಳೂರು: ದೇಶಾದ್ಯಂತ ಕಾಶ್ಮೀರ್ ಫೈಲ್ಸ್ ಚಿತ್ರ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಿದೆ. ಆದರೆ ಇದನ್ನೇ ಬಂಡವಾಳವನ್ನಾಗಿಸಿದ ಸೈಬರ್ ವಂಚಕರು ಜನರನ್ನು ಲೂಟಿ ಮಾಡಲು ಹೊರಟಿರುವುದು ಬೆಳಕಿಗೆ ಬಂದಿದೆ. ಚಿತ್ರವನ್ನು ಉಚಿತವಾಗಿ ತೋರಿಸುವ ನೆಪದಲ್ಲಿ ಮೊಬೈಲ್‌ಗೆ ಲಿಂಕ್ ಕಳುಹಿಸಿ ವಂಚನೆ ಮಾಡುತ್ತಿರುವ ಬಗ್ಗೆ ಸೈಬರ್ ತಜ್ಞರು ಎಚ್ಚರಿಸಿದ್ದಾರೆ.

ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಉಚಿತವಾಗಿ ಡೌನ್‌ಲೋಡ್ ಮಾಡಬಹುದೆಂದು ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಲಿಂಕ್ ಹರಿದಾಡುತ್ತಿದೆ. ಒಂದು ವೇಳೆ ಸುಲಭ, ಉಚಿತವಾಗಿ ಸಿನಿಮಾ ನೋಡುವ ಆಸೆಯಿಂದ ಅದನ್ನು ಕ್ಲಿಕ್ ಮಾಡಿದರೆ ಮೊಬೈಲ್, ಕಂಪ್ಯೂಟರ್ ವೈರಸ್ ದಾಳಿಗೆ ತುತ್ತಾಗುವುದು ಖಚಿತ

ಗೂಗಲ್ ಸರ್ಚ್‌ನಲ್ಲಿ ಪ್ರಸ್ತುತ ಕಾಶ್ಮೀರ್ ಫೈಲ್ಸ್ ಕೀವರ್ಡ್ ಟಾಪ್ ಲೀಸ್ಟ್‌ನಲ್ಲಿದೆ. ಈ ಅವಕಾಶವನ್ನು ಬಳಸಿಕೊಳ್ಳುವ ಸೈಬರ್ ಖದೀಮರು, ಬಳಕೆದಾರರನ್ನು ಸುಲಭವಾಗಿ ವಂಚನಾ ಜಾಲಕ್ಕೆ ಬೀಳಿಸುತ್ತಿದ್ದಾರೆ. ಈ ಬಗ್ಗೆ ಬಳಕೆದಾರರು ಎಚ್ಚರಿಕೆಯಿಂದ ಇರುವಂತೆ ಮಂಗಳೂರಿನ ಸೈಬರ್ ತಜ್ಞ ಡಾ. ಅನಂತ ಪ್ರಭು.ಜಿ ಎಚ್ಚರಿಸಿದ್ದಾರೆ.

ವಂಚಕರು ಕಳುಹಿಸುವ ಲಿಂಕ್ ಕ್ಲಿಕ್ ಮಾಡಿದ ಬಳಿಕ ನಮ್ಮ ಅರಿವಿಗೆ ಬಾರದಂತೆ ಕೀ ಲಾಗರ್ ಎಂಬ ಆಪ್ ಡ್ರೈ ಬೈ ಡೌನ್‌ಲೋಡ್ ಟೆಕ್ನಿಕ್ ಮೂಲಕ ಡೌನ್‌ಲೋಡ್ ಆಗಿ ಇನ್‌ಸ್ಟಾಲ್ ಆಗುತ್ತದೆ. ಆ ಬಳಿಕ ನಾವು ಮೊಬೈಲ್, ಕಂಪ್ಯೂಟರ್‌ನಲ್ಲಿ ಏನೇ ಮಾಡಿದರೂ ಅದರ ಒಂದು ಕಾಪಿ, ಹ್ಯಾಕರ್ಸ್ ಕೈ ಸೇರುತ್ತದೆ. ಇದರ ಜೊತೆ ಹ್ಯಾಕರ್‌ಗಳು ಮೊಬೈಲ್, ಕಂಪ್ಯೂಟರ್‌ನಲ್ಲಿರುವ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಮಾಹಿತಿ, ಪಾನ್ ಕಾರ್ಡ್ ಸೇರಿದಂತೆ ಇತರ ಖಾಸಗಿ ಮಾಹಿತಿಗಳನ್ನು ಗೌಪ್ಯವಾಗಿ ಪಡೆಯುತ್ತಾರೆ.

ಒಂದು ವೇಳೆ ಈ ಲಿಂಕ್ ಮೂಲಕ ಶಾರ್ಕ್ ಬೋಟ್ ಎಂಬ ಆಪ್ ಡೌನ್‌ಲೋಡ್ ಆದರೆ ಖಾತೆದಾರರಿಗೆ ಗೊತ್ತಾಗದಂತೆ ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ವರ್ಗಾವಣೆ ಮಾಡುತ್ತದೆ. ಈ ಆಪ್ ಯಾಂತ್ರಿಕವಾಗಿ ಬ್ಯಾಂಕ್ ಸರ್ವರ್‌ನೊಂದಿಗೆ ನೆಟ್‌ವರ್ಕ್, ಒಟಿಪಿ ನಮೂದಿಸುವ ಕಾರ್ಯ, ವರ್ಗಾವಣೆ ಸೇರಿದಂತೆ ಎಲ್ಲಾ ಕೆಲಸವನ್ನು ಈ ಸಿಸ್ಟಂ ಮಾಡುತ್ತದೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

20 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

20 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

21 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

21 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

21 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

4 days ago