Featured

ಮಂಗಳೂರು: ದೀಪಕ್ ರಾವ್ ಮತ್ತು ಪ್ರಶಾಂತ್ ಪೂಜಾರಿ ಹತ್ಯೆ ಪ್ರಕರಣ: ವಿಶೇಷ ಕೋರ್ಟ್ ಸ್ಥಾಪಿಸಲು ಪೋಷಕರ ಮನವಿ – vishwanews24

ಮಂಗಳೂರು: ದೀಪಕ್ ರಾವ್ ಮತ್ತು ಪ್ರಶಾಂತ್ ಪೂಜಾರಿ ಹತ್ಯೆ ಪ್ರಕರಣ: ವಿಶೇಷ ಕೋರ್ಟ್ ಸ್ಥಾಪಿಸಲು ಪೋಷಕರ ಮನವಿ

ಮಂಗಳೂರು : ದೀಪಕ್ ರಾವ್ ಮತ್ತು ಪ್ರಶಾಂತ್ ಪೂಜಾರಿ ಹತ್ಯೆ ಪ್ರಕರಣವನ್ನು ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸುವಂತೆ ಪ್ರಶಾಂತ್ ಪೂಜಾರಿ ಯವರ ತಾಯಿ ಯಶೋದಾ ಪೂಜಾರ್ತಿ ಹಾಗೂ ದೀಪಕ್ ರಾವ್ ಅವರ ತಾಯಿ ಪ್ರೇಮ ರಾವ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.

2019 ರ ಜನವರಿಯಲ್ಲಿ ನನ್ನ ಮಗ ದೀಪಕ್ ರಾವ್ ಹತ್ಯೆಯಾಗಿ 6 ​​ವರ್ಷಗಳು ಕಳೆದಿವೆ. ತನಿಖೆ ತ್ವರಿತವಾಗಿ ನಡೆದು ಅಪರಾಧಿಗಳಿಗೆ ಶಿಕ್ಷೆಯಾಗುವುದು ಎಂಬ ನಿರೀಕ್ಷೆಯಲ್ಲಿದ್ದೆವು. ಆದರೆ ನ್ಯಾಯಾಲಯದಲ್ಲಿ ತನಿಖೆಯು ನಿರೀಕ್ಷೆಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿವೆ ಎಂದು ದೀಪಕ್ ರಾವ್ ಅವರ ತಾಯಿ ಪ್ರೇಮಾ ರಾವ್ ತಿಳಿಸಿದ್ದಾರೆ.

2015ರಲ್ಲಿ ನನ್ನ ಮಗ ಪ್ರಶಾಂತ್ ಪೂಜಾರಿ ಹತ್ಯೆಯಾಗಿದ್ದು, ಇದೀಗ ಆತನ ತಾಯಿ ಯಶೋದಾ ಅವರು ವಿಶೇಷ ನ್ಯಾಯಾಲಯದಲ್ಲಿ ತ್ವರಿತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮನವಿ ಮಾಡಿದ್ದಾರೆ.

ಗೌರಿ ಲಂಕೇಶ್ ಮತ್ತು ಕಲಬುರ್ಗಿ ಹತ್ಯೆ ಪ್ರಕರಣವನ್ನು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಿ ಶೀಘ್ರಗತಿಯಲ್ಲಿ ಅಪರಾಧಿಗಳಿಗೆ ಶಿಕ್ಷೆಯಾಗುವಂತೆ ಮಾಡುವುದಾಗಿ ಭರವಸೆ ನೀಡಿದೆ. ಹಾಗೆಯೇ ದೀಪಕ್ ರಾವ್ ಮತ್ತು ಪ್ರಶಾಂತ್ ಪೂಜಾರಿ ಪ್ರಕರಣವನ್ನು ವಿಶೇಷ ನ್ಯಾಯಾಲಯದ ಮೂಲಕ ತನಿಖೆ ನಡೆಸಿ ಅಪರಾಧಿಗಳನ್ನು ಶೀಘ್ರವಾಗಿ ಶಿಕ್ಷೆಗೆ ಒಳಪಡಿಸಿ ನ್ಯಾಯ ಒದಗಿಸಿ ಕೊಡಬೇಕೆಂದು ಮನವಿಯಲ್ಲಿ ವಿನಂತಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago