Featured

ಮಂಗಳೂರು: ದೀಪಕ್ ರಾವ್ ಸ್ಮರಣಾರ್ಥ ಬಸ್ ನಿಲ್ದಾಣಕ್ಕೆ ವಿರೋಧ ,ಕೊಲೆ ಬೆದರಿಕೆ : ಐವರ ಬಂಧನ – Vishwanews24

ಮಂಗಳೂರು: ದೀಪಕ್ ರಾವ್ ಸ್ಮರಣಾರ್ಥ ಬಸ್ ನಿಲ್ದಾಣಕ್ಕೆ ವಿರೋಧ ,ಕೊಲೆ ಬೆದರಿಕೆ : ಐವರ ಬಂಧನ – Vishwanews24

ಮಂಗಳೂರು: ದೀಪಕ್ ರಾವ್ ಸ್ಮರಣಾರ್ಥವಾಗಿ ಬಸ್ ನಿಲ್ದಾಣದ ನಾಮಕರಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅತಿಥಿಗಳನ್ನು ಕೊಲೆ ಮಾಡುವುದಾಗಿ ವಾಯ್ಸ್ ಮೆಸೇಜ್‌ನಲ್ಲಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಐವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಸುರತ್ಕಲ್ ಕಾಟಿಪಳ್ಳದ 2ನೇ ಬ್ಲಾಕ್ ನಿವಾಸಿ ಮುಹಮ್ಮದ್ ನವಾಝ್ ಯಾನೆ ಪಿಂಕಿ ನವಾಝ್ (25), ಜೋಕಟ್ಟೆಯ ಮುಹಮ್ಮದ್ ಫೈಝಲ್ (21), ಕಾಟಿಪಳ್ಳ 2ನೇ ಬ್ಲಾಕ್ ನಿವಾಸಿ ಮುಹಮ್ಮದ್ ಸಫ್ವಾನ್ (23), ಕಾಟಿಪಳ್ಳ 6ನೇ ಬ್ಲಾಕ್ ನಿವಾಸಿ ಮುಹಮ್ಮದ್ ನಿಯಾಝ್ (20), ಚೊಕ್ಕಬೆಟ್ಟು ನಿವಾಸಿ ಮುಹಮ್ಮದ್ ಮುಸ್ತಫಾ (22) ಎಂದು ಗುರುತಿಸಲಾಗಿದೆ.

2018 ರಲ್ಲಿ ಕೊಲೆಯಾದ ದೀಪಕ್ ರಾವ್ ನೆನಪಿಗಾಗಿ ಕಾಟಿಪಳ್ಳದ 3ನೇ ಬ್ಲಾಕ್ ದ್ವಾರದ ಸಮೀಪದಲ್ಲಿ ಹೊಸದಾಗಿ ನಿರ್ಮಾಣಗೊಂಡ ಬಸ್ ನಿಲ್ದಾಣಕ್ಕೆ ದೀಪಕ್ ಹೆಸರು ನಾಮಕರಣಕ್ಕೆ ತೀರ್ಮಾನಿಸಿದ್ದರು. ಅದರಂತೆ, ಬಸ್ ನಿಲ್ದಾಣವನ್ನು ಅಕ್ಟೋಬರ್ 2ರಂದು ಬೆಳಗ್ಗೆ 9:30ಕ್ಕೆ ಶಾಸಕ ಭರತ್ ಶೆಟ್ಟಿ ಉದ್ಘಾಟಿಸಿದ್ದರು. ಇದಾದ ಬಳಿಕ ‘ಲೋಕಂದವಾಲಾ’ ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ದೀಪಕ್ ರಾವ್ ಕೊಲೆ ಪ್ರಕರಣದ ಆರೋಪಿ ಪಿಂಕಿ ನವಾಝ್ ಹಾಗೂ ಜುನ್ನಿ ಎಂಬಾತನ ನಡುವಿನ ಸಂಭಾಷಣೆಯದ್ದು ಎನ್ನಲಾದ ಆಡಿಯೊ ತುಣುಕನ್ನು ಹಂಚಿಕೊಳ್ಳಲಾಗಿತ್ತು. ‘ಕಾರ್ಯಕ್ರಮದಲ್ಲಿ ಭಾಗವಹಿಸಿದ ಅತಿಥಿಗಳನ್ನು ಕೊಲೆ ಮಾಡುತ್ತೇವೆ’ ಎನ್ನುವುದು ಆಡಿಯೊದಲ್ಲಿತ್ತು. ಇದು ಸಾಮಾಜಿಕ ಜಾಲತಾಣದಲ್ಲೂ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಕಾಟಿಪಳ್ಳದ ಲೋಕೇಶ್ ಎಂಬವರು ನೀಡಿದ ದೂರಿನಂತೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಐವರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ ತಲವಾರು, ನಾಲ್ಕು ಮೊಬೈಲ್‌ಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ಜುನ್ನಿ ಸೇರಿದಂತೆ ಇನ್ನು ಹಲವರ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿದೆ.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

17 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

17 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

17 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

17 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

17 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

19 hours ago