ಮಂಗಳೂರು (Vishwanews24): ಪ್ರಕರಣವೊಂದರ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಗೆ ಬೆದರಿಕೆ ಹಾಗೂ ಅವಾಚ್ಯ ಸಂದೇಶದ ಕಳುಹಿಸಿ ಮಾನಸಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾವೂರು ಠಾಣೆಯ ಹೆಡ್ ಕಾನ್‌ಸ್ಟೇಬಲ್ ಸಂತೋಷ್ ಎಂಬಾತನನ್ನು ಅಮಾನತುಗೊಳಿಸಿ ಪೊಲೀಸ್ ಕಮಿಷನರ್ ಆದೇಶಿಸಿದ್ದಾರೆ.
ಮಹಿಳೆಯು ಪ್ರಕರಣವೊಂದಕ್ಕೆ ಸಂಬಂಧಿಸಿ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದರು. ಈ ವೇಳೆ ಆ ಮಹಿಳೆಯ ಮೊಬೈಲ್ ನಂಬರ್ ಪಡೆದಿದ್ದ ಹೆಡ್ ಕಾನ್‌ಸ್ಟೇಬಲ್ ಸಂತೋಷ್ ಆಕೆಗೆ ಅಸಭ್ಯ ರೀತಿಯಲ್ಲಿ ಸಂದೇಶ ಕಳುಹಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಯಾರಲ್ಲಾದರೂ ದೂರು ನೀಡಿದರೆ ಜೀವನ ಪರ್ಯಂತ ಕೊರಗುವಂತೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ. ಇದರಿಂದ ಆಘಾತಗೊಂಡ ಮಹಿಳೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರಿಗೆ ದೂರು ನೀಡಿದ್ದರು.
ದೂರನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಕಮಿಷನರ್ ಹೆಡ್ ಕಾನ್‌ಸ್ಟೇಬಲ್ ಸಂತೋಷ್‌ನನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಅಲ್ಲದೆ ತನಿಖೆ ನಡೆಸಿ ವರದಿ ನೀಡುವಂತೆ ಮಂಗಳೂರು ಉತ್ತರ ವಿಭಾಗದ ಎಸಿಪಿಗೆ ಸೂಚಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…