Featured

ಮಂಗಳೂರು: ದೇರೆಬೈಲು ಉತ್ತರ 17ನೇ ವಾರ್ಡ್ ಹಕ್ಕುಪತ್ರ ವಿತರಿಸಿದ ಶಾಸಕ ಡಾ.ವೈ.ಭರತ್ ಶೆಟ್ಟಿ-Vishwanews24

ಮಂಗಳೂರು: ದೇರೆಬೈಲು ಉತ್ತರ 17ನೇ ವಾರ್ಡ್ ಹಕ್ಕುಪತ್ರ ವಿತರಿಸಿದ ಶಾಸಕ ಡಾ.ವೈ.ಭರತ್ ಶೆಟ್ಟಿ-Vishwanews24

ಮಂಗಳೂರು :ಮಂಗಳೂರು ಉತ್ತರ ದೇರೆಬೈಲು ಉತ್ತರ 17ನೇ ವಾರ್ಡ್ ಕಳೆದ 35 ವರ್ಷಗಳಿಂದ ಹಕ್ಕುಪತ್ರ ಇಲ್ಲದ 32 ಬಡ ಕುಟುಂಬಗಳಿಗೆ 94cc ಹಕ್ಕು ಪತ್ರವನ್ನು ಶಾಸಕ ಡಾ.ವೈ.ಭರತ್ ಶೆಟ್ಟಿ ವಿತರಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಹಲವು ವರ್ಷಗಳಿಂದ ಹಕ್ಕು ಪತ್ರಕ್ಕಾಗಿ ಕಾದು ಕುಳಿತವರಿಗೆ ಅವರ ಮನೆ ಹಕ್ಕನ್ನು ನೀಡಲಾಗಿದೆ.
ಸರಕಾರ ಆಶ್ರಯ ಕಾಲೊನಿಗಳಲ್ಲಿ ವಸತಿ ಸಮುಚ್ಚಯ ನಿರ್ಮಿಸಿ ಬಡ ವರ್ಗಕ್ಕೆ ಮನೆ ಕೊಡುವ ಯೋಜನೆ ರೂಪಿಸಿದೆ. ಮಂಗಳೂರು ಉತ್ತರ ವಿಧಾನಸಭೆ ಕ್ಷೇತ್ರದ ಸುರತ್ಕಲ್ ನಲ್ಲಿ ಶೀಘ್ರ ವಸತಿ ಸಮುಚ್ಚಯ ನಿರ್ಮಾಣವಾಗಲಿದೆ ಎಂದರು.

ಮಂಗಳೂರು ಉತ್ತರ ಕ್ಷೇತ್ರದಲ್ಲಿ ಅಮೃತ್ ಯೋಜನೆಯಡಿ ಒಳಚರಂಡಿ, ಜಲಸಿರಿ ಭಾಗ್ಯದಡಿ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರು ಮತ್ತಿತರ ಅಭಿವೃದ್ಧಿ ಕೆಲಸ ನಡೆಯುತ್ತಿದೆ ಎಂದರು.

ದೇರೆಬೈಲ್ ವಾರ್ಡ್ ನಲ್ಲಿ ಮನಪಾ ಸದಸ್ಯ ಮನೋಜ್ ಅವರ ಬೇಡಿಕೆಯಂತೆ ರಸ್ತೆ ಕಾಂಕ್ರಿಟೀಕರಣ, ಕುಡಿಯುವ ನೀರಿಗೆ ಟ್ಯಾಂಕ್ ನಿರ್ಮಾಣ ಮತ್ತಿತರ ಯೋಜನೆ ಹಂತ ಹಂತವಾಗಿ ನಡೆಯಲಿದೆ ಎಂದರು.

ಕಾರ್ಪೊರೇಟರ್ ಮನೋಜ್ ಕುಮಾರ್, ಗ್ರಾಮ ಲೆಕ್ಕಿಗ ಚರಣ್,ಕಂದಾಯ ಅಧಿಕಾರಿ ಸ್ಟೀಫನ್,ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ ಮತ್ತು ಮಾಹಿತಿ ತಂತ್ರಜ್ಞಾನ ಪ್ರಕೋಷ್ಠದ ಸಹ ಸಂಚಾಲಕ ಕಿಶೋರ್ ಬಾಬು,ರಾಮ್ ದಾಸ್ ನಾಯಕ್,ಎಪಿಎಂಸಿ ಸದಸ್ಯ ರಾಘವ ಶೆಟ್ಟಿ,ಭರತ್ ಕೋಡಿಕಲ್,ಜಗದೀಶ್,ಮಂಡಲ ಸದಸ್ಯೆ ಜಯಲಕ್ಷ್ಮಿ,ನಿರ್ಮಲಾ ಟೀಚರ್ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

1 hour ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

1 hour ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

1 hour ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

2 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

2 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

2 hours ago