ಮಂಗಳೂರು: ದೇವಸ್ಥಾನದ ಒಳಗೆ ಜನರು ಶರ್ಟ್ ತೆಗೆದು ಹೋಗುವ ಪದ್ಧತಿಗೆ ವಿರೋಧ ಕೇಳಿಬಂದಿದೆ. ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಕಾರ್ಯದರ್ಶಿ ಶಶಿಧರ್ ಶೆಟ್ಟಿ ಅವರು ಈ ಬಗ್ಗೆ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
“ಶರ್ಟ್, ಬನಿಯನ್ ತೆಗೆದು ದೇವಸ್ಥಾನದ ಒಳಗೆ ಹೋಗಬೇಕು ಎನ್ನುವುದು ಅವೈಜ್ಞಾನಿಕ ಪದ್ಧತಿ ಆಗಿದೆ. ಈ ಕುರಿತು ಹಿಂದೂ ಧರ್ಮದಲ್ಲಿ ಯಾವುದೇ ಉಲ್ಲೇಖಗಳಿಲ್ಲ. ಅವಾಸ್ತವಿಕ ಮತ್ತು ಅನಗತ್ಯ ಪದ್ಧತಿಯನ್ನು ಭಕ್ತರ ಮೇಲೆ ಹೇರಲಾಗುತ್ತಿದೆ. ಶರ್ಟ್ ತೆಗೆದು ಒಳಗೆ ಹೋಗುದರಿಂದ ಒಬ್ಬರ ಮೈ ಇನ್ನೊಬ್ಬರಿಗೆ ತಾಗಿ ಚರ್ಮ ರೋಗ ಬರುತ್ತದೆ. ಅಂಗವಿಕಲರಿಗೆ ಈ ಪದ್ಧತಿಯಿಂದ ಮುಜುಗರವಾಗುತ್ತದೆ. ದೇವಸ್ಥಾನಗಳಲ್ಲಿ ಈ ಕುರಿತು ಹಾಕಿರುವ ಬೋರ್ಡ್ ತೆರವು ಮಾಡಬೇಕು,” ಎಂದು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಕಾರ್ಯದರ್ಶಿ ಶಶಿಧರ್ ಶೆಟ್ಟಿ ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಸಮಸ್ಯೆ ಗಳಿಗೆ ಶೀಘ್ರ ಪರಿಹಾರ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಸುಬ್ರಹ್ಮಣ್ಯ, ಕೊಲ್ಲೂರು ಸೇರಿದಂತೆ ಧರ್ಮಾದಾಯ ದತ್ತಿ ಇಲಾಖೆ ವ್ಯಾಪ್ತಿಯಡಿ ಬರುವ ಕೆಲವೊಂದು ದೇವಸ್ಥಾನಗಳಲ್ಲಿ ಭಕ್ತರು ಶರ್ಟ್, ಬನಿಯನ್ ತೆಗೆದು ಒಳಗೆ ಬಿಡುತ್ತಿದ್ದಾರೆ. ಹೀಗೆ ಅವೈಜ್ಞಾನಿಕ ಪದ್ಧತಿ ಅನುಸರಿಸಲಾಗುತ್ತಿದ್ದು,ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ ಇದಕ್ಕೆಲ್ಲ ತಡೆ ಹಾಕಬೇಕು ಎಂದು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ ಆಗ್ರಹಿಸಿದೆ.
“ಅನಗತ್ಯ ಪದ್ಧತಿಯಿಂದ ಗೊಂದಲ ಸೃಷ್ಟಿ”
ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದ ಒಕ್ಕೂಟ, ಹಿಂದೂ ಧರ್ಮ ಗ್ರಂಥಗಳಲ್ಲಿ ಈ ಕುರಿತು ಉಲ್ಲೇಖಗಳಿಲ್ಲ. ಇಲಾಖೆಯೂ ಈ ರೀತಿಯ ಆದೇಶ ಹೊರಡಿಸಿಲ್ಲ. ಅವಾಸ್ತವಿಕ ಮತ್ತು ಅನಗತ್ಯ ಪದ್ಧತಿ ಭಕ್ತರಲ್ಲಿ ಗೊಂದಲ ಸೃಷ್ಟಿಸುತ್ತಿದೆ. ಶರ್ಟ್, ಬನಿಯನ್ ತೆಗೆದು ಒಳಗೆ ಪ್ರವೇಶಿಸುವುದರಿಂದ ಒಬ್ಬರ ಮೈಗೆ ಇನ್ನೊಬ್ಬರಿಗೆ ತಾಗುವ ಸಾಧ್ಯತೆ ಇದೆ. ವೈದ್ಯರ ಪ್ರಕಾರ ಒಬ್ಬರ ಮೈ ಇನ್ನೊಬ್ಬರಿಗೆ ಸ್ಪರ್ಶ ಆಗುವುದರಿಂದ ಚರ್ಮ ರೋಗಗಳು ಹರಡುವ ಸಾಧ್ಯತೆಗಳಿವೆ. ಅಂಗವಿಕಲರು ಅರೆನಗ್ನ ಸ್ಥಿತಿಯಲ್ಲಿ ಹೋಗಿ ಮುಜುಗರಕ್ಕೆ ಒಳಗಾಗಬೇಕಾಗುತ್ತಿದೆ. ಆದ್ದರಿಂದ ಈ ನಿಯಮಬಾಹಿರ ಆಚರಣೆಗೆ ಅಂತ್ಯ ಹಾಡಬೇಕು. ದೇವಾಲಯಗಳಲ್ಲಿ ಈ ಬಗ್ಗೆ ಅಳವಡಿಸಲಾಗಿರುವ ಬೋರ್ಡ್‌ಗಳನ್ನು ತೆರವು ಮಾಡಬೇಕು ಎಂದು ಪರಿಸರ ಸಂರಕ್ಷಣಾ ಸಮಿತಿ ಆಗ್ರಹಿಸಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…