Featured

ಮಂಗಳೂರು : ದೇವಸ್ಥಾನದ ಹುಂಡಿ ಕಳ್ಳತನ, ಭಗವಧ್ವಜ ಅಪವಿತ್ರಗೊಳಿಸಿದ್ದ ಪ್ರಕರಣ : ಇಬ್ಬರು ಆರೋಪಿಗಳ ಬಂಧನ -Vishwanews24

ಮಂಗಳೂರು: ದೇವಸ್ಥಾನದ ಹುಂಡಿ ಕಳ್ಳತನ, ಭಗವಧ್ವಜ ಅಪವಿತ್ರಗೊಳಿಸಿದ್ದ ಪ್ರಕರಣ : ಇಬ್ಬರು ಆರೋಪಿಗಳ ಬಂಧನ -Vishwanews24

ಮಂಗಳೂರು: ನಗರದ ಹೊರವಲಯದ ಕೊಣಾಜೆಯಲ್ಲಿ ಆತಂಕ ಮೂಡಿಸಿದ್ದ ಹಲವು ದೇವಾಸ್ಥಾನಗಳ ಕಾಣಿಕೆ ಹುಂಡಿ ಕಳವು ಮತ್ತು ಭಗವಧ್ವಜ ಅಪವಿತ್ರಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ”ತಲಪಾಡಿ ನಿವಾಸಿಗಳಾದ ಮಹಮ್ಮದ್ ಸುಹೈಲ್‌ (19) ಮತ್ತು ನಿಜಾಮುದ್ದೀನ್ (21) ಬಂಧಿತ ಆರೋಪಿಗಳು. ಆರು ಜನರ ತಂಡ ಈ ಕೃತ್ಯವನ್ನು ಎಸಗಿದ್ದು ಇನ್ನೂ ನಾಲ್ವರನ್ನು ಬಂಧನವಾಗಬೇಕಿದೆ” ಎಂದು ಮಾಹಿತಿ ನೀಡಿದರು.

”ವಿಚಾರಣೆಯ ಬಳಿಕ ಆರೋಪಿಗಳು, 2020 ನೇ ನವೆಂಬರ್‌ನಲ್ಲಿ ಕೊಣಾಜೆ ಮುಲಾರದ ಅರಸು ಮುಂಡಿತ್ತಾಯ ದೈವಸ್ಥಾನದ ಕಾಣಿಕೆ ಡಬ್ಬಿ ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಹಾಗೆಯೇ ಜನವರಿ 15 ರಂದು ಮಾಡೂರಿನಲ್ಲಿ ರಸ್ತೆ ಬದಿಯಲ್ಲಿದ್ದ ಕಾಣಿಕೆ ಡಬ್ಬಿಯನ್ನು ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಇನ್ನು ದೇರಳಕಟ್ಟೆಯ ಅಯ್ಯಪ್ಪ ಸ್ಥಾಮಿ ದೇವಸ್ಥಾನದ ಸೇವಾ ಕೌಂಟರ್‌ಗೆ ನುಗ್ಗಿ ಕಳವು ಮಾಡಿದ ಬಗ್ಗೆ, ಪೆರಂಡೆಯಲ್ಲಿರುವ ಗೋಪಾಲಕೃಷ್ಣ ಮಂದಿರಕ್ಕೆ ಹೋಗಿ ಕೇಸರಿ ಧ್ವಜ ಕಲುಷಿತಗೊಳಿಸಿದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ. ಕುತ್ತಾರು ಆದಿಸ್ಥಳದ ಕೊರಗಜ್ಜ ದೈವಸ್ಥಾನಕ್ಕೆ ಹೋಗಿ ಕಳ್ಳತನಕ್ಕೆ ಯತ್ನಿಸಿದ ಬಗ್ಗೆಯೂ ತಪ್ಪೊಪ್ಪಿಕೊಂಡುದ್ದಾರೆ” ಎಂದು ಆಯುಕ್ತರು ತಿಳಿಸಿದರು.

ಮುಂದಿನ 10 ವರ್ಷಗಳಲ್ಲಿ ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಈ ಬಜೆಟ್ ಪೂರಕವಾಗಲಿದೆ : ನಳಿನ್‍ಕುಮಾರ್ ಕಟೀಲ್ -Vishwanews24

”ಆರೋಪಿಗಳ ವಿರುದ್ದ ಪುಂಜಲಕಟ್ಟೆ, ಬಂಟ್ವಾಳ, ಮಂಗಳೂರು ಗ್ರಾಮಾಂತರ, ಕಂಕನಾಡಿ, ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಒಟ್ಟು 9 ಪ್ರಕರಣಗಳು ದಾಖಲಾಗಿವೆ. 9 ಪ್ರಕರಣಗಳಲ್ಲಿ ಐದು ದೇವಾಲಯದ ಕಳ್ಳತನ ಪ್ರಕರಣವಾಗಿದ್ದು ಇತರ ಪ್ರಕರಣದಲ್ಲಿ ಪೆಟ್ರೋಲ್ ಪಂಪ್ ಕಳ್ಳತನ ಪ್ರಕರಣವೂ ಸೇರಿದೆ. ಅಪರಾಧ ಮಾಡಲು ಬಳಸಿದ ಸ್ಕೂಟರ್, ದೇವಾಲಯಗಳ ಹುಂಡಿ ಪೆಟ್ಟಿಗೆಗಳು, ಚಾಕು ಮತ್ತು ಸ್ಪ್ಯಾನರ್ ಅನ್ನು ನಾವು ವಶಪಡಿಸಿಕೊಂಡಿದ್ದೇವೆ. ವಶಪಡಿಸಿಕೊಂಡ ಎಲ್ಲಾ ವಸ್ತುಗಳ ಒಟ್ಟು ಮೌಲ್ಯ 35,000 ರೂ. ಆಗಿದೆ” ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಹರಿರಾಂ ಶಂಕರ್ ಹಾಗೂ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ವಿನಯ್ ಗಾಂವ್ಕರ್ ಉಪಸ್ಥಿತರಿದ್ದರು.

 

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

16 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

19 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

20 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

20 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

20 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

20 hours ago