ಮಂಗಳೂರು: ದೇವಸ್ಥಾನ ಹೋಲುವ ಜಾಗ ಮತ್ತು ಕಟ್ಟಡದಲ್ಲಿ ಯಾವುದೇ ಕಾಮಗಾರಿ ,ಕಟ್ಟಡಕ್ಕೆ ಹಾನಿಯಾಗದಂತೆ ತಡೆಯಾಜ್ಞೆ ಹಾಗೂ ದೇವಸ್ಥಾನ ಹೋಲುವ ಕಟ್ಟಡದ ಒಳಗಡೆ ಪ್ರವೇಶ ನಿಷೇಧಗೊಳಿಸಿದ ಕೋರ್ಟ್ ಆದೇಶವನ್ನು ವಿಶ್ವ ಹಿಂದೂ ಪರಿಷದ್ ಸ್ವಾಗತಿಸಿದೆ
ಮಂಗಳೂರು ತಾಲೂಕಿನ ಗುರುಪುರ ಹೋಬಳಿಯ ತೆಂಕ ಉಳಿಪಾಡಿ ಗ್ರಾಮ, ಗಂಜಿಮಠ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸರ್ವೇ ನಂ 1/10 ನಲ್ಲಿ ಅಸ್ಸಾಯಿದ್ ಅಬ್ದುಲ್ಲಾಹಿಲ್ ಮದನಿ ಜುಮಾ ಮಸೀದಿ ಕಟ್ಟಡ ನವೀಕರಣ ಸಂಧರ್ಭದಲ್ಲಿ ಮಸೀದಿ ಅರ್ಧ ಕಟ್ಟಡ ಕೆಡವಿದಾಗ ಪುರಾತನ ದೇವಸ್ಥಾನ ಪತ್ತೆಯಾಗಿದೆ, ಗಂಜಿಮಠ ನಿವಾಸಿಯಾದ ಧನಂಜಯರವರು ಮಂಗಳೂರಿನ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದು ಇದನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಾಲಯವು ಸದ್ರಿ ಜಾಗದಲ್ಲಿ ದೇವಸ್ಥಾನವನ್ನು ಹೋಲುವ ಕಟ್ಟಡವಿದೆಯೆಂದು ಮನಗಂಡು ಸದ್ರಿ ಕಟ್ಟಡದಲ್ಲಿ ಯಾವುದೇ ಕಾಮಗಾರಿ ನಡೆಸದಂತೆ ಮತ್ತು ದೇವಸ್ಥಾನ ಹೋಲುವ ಕಟ್ಟಡಕ್ಕೆ ಯಾವುದೇ ಹಾನಿಯಾಗದಂತೆ ತಡೆಯಾಜ್ಞೆ ಕೊಟ್ಟಿದೆ ಹಾಗೂ ಆ ಕಟ್ಟಡದ ಒಳಗಡೆ ಮಸೀದಿ ಕಮಿಟಿಯವರಾಗಲಿ ಮತ್ತು ಅನುಯಾಯಿಗಳಾಗಲಿ ಪ್ರವೇಶವನ್ನು ನಿಷೇಧಿಸಿ ಆದೇಶಿಸಿದ್ದನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ಹಾಗೂ ಜಿಲ್ಲಾಧ್ಯಕ್ಷರು ಗೋಪಾಲ್ ಕುತ್ತಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…