Featured

ಮಂಗಳೂರು : ದೇಶಕ್ಕೆ ಕಾಂಗ್ರೆಸ್ ಪಕ್ಷದ ಅಗತ್ಯವಿದೆ : ಡಿ ಕೆ ಶಿ – Vishwanews24

ಮಂಗಳೂರು : ದೇಶಕ್ಕೆ ಕಾಂಗ್ರೆಸ್ ಪಕ್ಷದ ಅಗತ್ಯವಿದೆ : ಡಿ ಕೆ ಶಿ – Vishwanews24

ಮಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದ್ದು, ದೇಶ ಈಗ ಅತ್ಯಂತ ಸಂಕಷ್ಟದ ಪರಿಸ್ಥಿತಿಗೆ ಸಿಲುಕಿದೆ. ದೇಶವನ್ನು ಮರುನಿರ್ಮಾಣ ಮಾಡಬೇಕಾಗಿದೆ. ದೇಶಕ್ಕೆ ಕಾಂಗ್ರೆಸ್ ಪಕ್ಷದ ಅಗತ್ಯವಿದೆ. ಹೀಗಾಗಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಸದಸ್ಯತ್ವ ಅಭಿಯಾನ ಆರಂಭಿಸಿದ್ದಾರೆ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಬ್ಲಾಕ್, ಜಿಲ್ಲಾ ಪದಾಧಿಕಾರಿಗಳ ಚುನಾವಣೆ ನಿಗದಿಯಾಗಿದ್ದು, ಈಗ ಸದಸ್ಯತ್ವ ನೋಂದಣಿ ಮಾಡಿಕೊಂಡರೆ ಮತದಾನದ ಹಕ್ಕು ನೀಡಲಾಗುವುದು. ಇದಕ್ಕಾಗಿ 40 ಬೂತ್‌ಗಳಿಗೆ ಒಬ್ಬ ಮುಖ್ಯ ನೋಂದಣಿದಾರರನ್ನು ನೇಮಕ ಮಾಡಿದ್ದೇವೆ. ಮುಂದಿನ ಚುನಾವಣೆ ಸಂದರ್ಭ ಟಿಕೆಟ್ ನೀಡುವ ವಿಚಾರದಲ್ಲಿ ಪಕ್ಷದ ಸದಸ್ಯರ ಅಭಿಪ್ರಾಯ ಕೇಳಲು ಅನುಕೂಲವಾಗಲಿದೆ. ಕಾಂಗ್ರೆಸ್ ಕಾರ್ಯಕರ್ತರ ಭಾವನೆ ಪಕ್ಷದ ರಾಜ್ಯಾಧ್ಯಕ್ಷರ ಭಾವನೆಯಾಗಬೇಕು. ಯಾರು ನಮ್ಮ ನಾಯಕರಾಗಬೇಕು ಎಂಬುದರ ಬಗ್ಗೆ ಕಾರ್ಯಕರ್ತರ ಅಭಿಪ್ರಾಯವನ್ನು ಆನ್ಲೈನ್ ಮೂಲಕ ಸಂಗ್ರಹಿಸಲು ಅನುಕೂಲವಾಗುವಂತೆ ಡಿಜಿಟಲ್ ಸದಸ್ಯತ್ವ ನೋಂದಣಿ ಪ್ರಾರಂಭಿಸಿದ್ದೇವೆ ಎಂದರು.

ಇನ್ನು ಕಾಂಗ್ರೆಸ್ ಪಕ್ಷದ ಸಿದ್ಧಾಂತ, ನಾಯಕತ್ವದಲ್ಲಿ ನಂಬಿಕೆ ಇರುವವರು 5 ರೂ. ಕೊಟ್ಟು ಸದಸ್ಯರಾಗಬಹುದು. ಗುರುತಿನ ಚೀಟಿ ಪಡೆಯಲು ಇಚ್ಛಿಸುವವರು ಜಿಲ್ಲಾ ಕಾಂಗ್ರೆಸ್ ನಲ್ಲಿ 10 ರೂ. ನೀಡಿ ಪಡೆಯಬಹುದು. ಸದಸ್ಯತ್ವ ವಿಚಾರದಲ್ಲಿ ಮುಖ್ಯ ನೋಂದಣಿದಾರರನ್ನು ಭೇಟಿ ಮಾಡಿ, ಪ್ರತಿಯೊಬ್ಬರಿಗೂ ಬೂತ್‌ಗಳನ್ನು ಹಂಚಲು, ಅವರೊಂದಿಗೆ ಚರ್ಚೆ ಮಾಡಲು ಮಂಗಳೂರು ಹಾಗೂ ಉಡುಪಿಗೆ ಭೇಟಿ ನೀಡುತ್ತಿದ್ದೇನೆ ಎಂದಿದ್ದಾರೆ.

 

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

11 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

13 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

13 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

13 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

13 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago