ಮಂಗಳೂರು : ದೇಶದಲ್ಲಿ ಮತ್ತೆ ಭಯೋತ್ಪಾದಕ ಚಟುವಟಿಕೆ ಶುರುವಾಗಿದೆ : ಕಟೀಲ್ – Vishwanews24
ಉತ್ತರ ಪ್ರದೇಶದ ಯೋಗಿ ಮಾದರಿ ನಿರ್ಧಾರಗಳ ಅವಶ್ಯಕತೆ ಇದೆ..
ಕ್ರೂರಿ ಮಾನಸಿಕತೆಗಳಿಗೆ ಭಯ ಸೃಷ್ಟಿಸುವ ಕಠಿಣ ಕಾನೂನನ್ನು ನಮ್ಮ ಸರ್ಕಾರ ಜಾರಿಗೆ ತರಲಿದೆ ..
ಮಂಗಳೂರು: ಇದೊಂದು ವ್ಯವಸ್ಥಿತ ಸಂಚು, ದೇಶದಲ್ಲಿ ಮತ್ತೆ ಭಯೋತ್ಪಾದಕ ಚಟುವಟಿಕೆ ಶುರುವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆತಂಕ ವ್ಯಕ್ತಪಡಿಸಿದರು.
ರಾಜಸ್ಥಾನದಲ್ಲಿ ನೂಪುರ್ ಶರ್ಮಾ ಬೆಂಬಲಿಗನ ಹತ್ಯೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಸ್ಥಾನದಲ್ಲಿ ನಡೆದ ಹಿಂದೂ ಟೈಲರ್ ಹತ್ಯೆ ನಾಚಿಗೆಗೇಡು. ಇದೊಂದು ವ್ಯವಸ್ಥಿತ ಸಂಚು, ದೇಶದಲ್ಲಿ ಮತ್ತೆ ಭಯೋತ್ಪಾದಕ ಚಟುವಟಿಕೆ ಶುರುವಾಗಿದೆ. ಇದೇ ಮಾದರಿಯಲ್ಲಿ ಶಿವಮೊಗ್ಗದಲ್ಲೂ ಹರ್ಷನ ಹತ್ಯೆ ನಡೆದಿತ್ತು. ಹರ್ಷನ ಕತ್ತು ಸಿಗಿದು ಹತ್ಯೆ ಮಾಡಿ, ವೀಡಿಯೋವನ್ನು ಹರ್ಷನ ತಂಗಿಗೆ ಕಳುಹಿಸಲಾಗಿತ್ತು ಎಂದು ಅಸಮಾಧಾನಗೊಂಡರು.
ರಾಜಸ್ಥಾನ ಘಟನೆ ಮತ್ತು ಗಲಭೆಯ ಹಿಂದೆ ವಿದೇಶಿ ಕೈವಾಡವಿದೆ. ಅಲ್ಲಿನ ಸರ್ಕಾರದ ಪುಷ್ಟೀಕರಣ ನೀತಿಯ ಕಾರಣದಿಂದ ಈ ಘಟನೆ ಆಗಿದೆ. ಕಾಂಗ್ರೆಸ್ ಈಗ ಮೌನವಾಗಿರೋದ್ರ ಹಿನ್ನೆಲೆ ಏನು? ಇಂಥಹ ದುಷ್ಕೃತ್ಯ ನಡೆದಾಗ ಕಾಂಗ್ರೆಸ್ ಯಾರ ಪರವಾಗಿರುತ್ತೆ ಅನ್ನೋದು ಮುಖ್ಯ. ಈ ಘಟನೆ ದೇಶದಲ್ಲಿ ನಡೆಯಲು ಕಾರಣ ತುಷ್ಟೀಕರಣದ ರಾಜನೀತಿಯಾಗಿದೆ. ಇಂಥಹ ಘಟನೆ ಖಂಡಿಸ್ತೇನೆ, ಇದರ ವಿರುದ್ಧ ಕಠಿಣ ಕ್ರಮ ಆಗಬೇಕು ಎಂದು ಆಗ್ರಹಿಸಿದರು.
ಉತ್ತರ ಪ್ರದೇಶದ ಯೋಗಿ ಮಾದರಿ ನಿರ್ಧಾರಗಳ ಅವಶ್ಯಕತೆ ಇದೆ. ತಕ್ಷಣ ಕಠಿಣ ಕ್ರಮ ಅಗಬೇಕು, ಕೇಂದ್ರ ಸರ್ಕಾರ ಎನ್‍ಐಎ ಕಳುಹಿಸಿದೆ. ಇದೊಂದು ಮಾನವೀಯತೆಗೆ ಸವಾಲಾಗಿರುವ ಪ್ರಕರಣ. ನಿರಂತರ ಗಲಭೆ ಸೃಷ್ಟಿಸಲು ಹತ್ಯೆ ಮಾಡಿ ಸಮಾಜ ಒಡೆಯಲಾಗ್ತಿದೆ. ಜಿಹಾದಿ ಹೆಸರಿನಲ್ಲಿ ಇದನ್ನು ಮಾಡಲಾಗ್ತಿದ್ದು, ವಿಶ್ವಾಸ ಕಡಿಮೆ ಮಾಡಲಾಗ್ತಿದೆ. ಕಾಶ್ಮೀರದಲ್ಲಿ ಹಿಂದೆ ನಡೆದ ಘಟನೆಗಳು ಹೊರಗಡೆ ಬರ್ತಿದೆ ಎಂದು ತಿಳಿಸಿದರು.
ದೇಶದಲ್ಲಿ ಅತಂತ್ರ ಸ್ಥಿತಿ ತರಬೇಕು, ಜಿಹಾದಿ ಮಾನಸಿಕತೆ ಬೆಳೆಸಲು ಯತ್ನ ನಡೀತಾ ಇದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಇದನ್ನ ಸಹಿಸಲ್ಲ, ತಡೆ ಹಾಕುತ್ತೆ. ಈ ರೀತಿಯ ಘಟನೆಗಳನ್ನು ಅಲ್ಲಲ್ಲೇ ನಿಯಂತ್ರಿಸುವ ಕೆಲಸ ಆಗಬೇಕು. ಕ್ರೂರಿ ಮಾನಸಿಕತೆಗಳಿಗೆ ಭಯದ ವಾತಾವರಣ ಸೃಷ್ಟಿಸಬೇಕು. ಅಂಥಹ ವಾತಾವರಣವನ್ನು ನಮ್ಮ ಸರ್ಕಾರವೂ ಮಾಡಲಿದೆ ಎಂದು ಭರವಸೆ ಕೊಟ್ಟರು.
ಸದ್ಯಕ್ಕೆ ವಿದ್ಯುತ್ ದರ ಹೆಚ್ಚಳ ಇಲ್ಲ :ಇಂಧನ ಸಚಿವರ ಸ್ಪಷ್ಟನೆ – Vishwanews24
