Featured

ಮಂಗಳೂರು : ದೇಶದಲ್ಲಿ ಮತ್ತೆ ಭಯೋತ್ಪಾದಕ ಚಟುವಟಿಕೆ ಶುರುವಾಗಿದೆ  : ಕಟೀಲ್ – Vishwanews24

ಉತ್ತರ ಪ್ರದೇಶದ ಯೋಗಿ ಮಾದರಿ ನಿರ್ಧಾರಗಳ ಅವಶ್ಯಕತೆ ಇದೆ..

ಕ್ರೂರಿ ಮಾನಸಿಕತೆಗಳಿಗೆ ಭಯ ಸೃಷ್ಟಿಸುವ ಕಠಿಣ ಕಾನೂನನ್ನು ನಮ್ಮ ಸರ್ಕಾರ ಜಾರಿಗೆ ತರಲಿದೆ ..

ಮಂಗಳೂರು: ಇದೊಂದು ವ್ಯವಸ್ಥಿತ ಸಂಚು, ದೇಶದಲ್ಲಿ ಮತ್ತೆ ಭಯೋತ್ಪಾದಕ ಚಟುವಟಿಕೆ ಶುರುವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆತಂಕ ವ್ಯಕ್ತಪಡಿಸಿದರು.

ರಾಜಸ್ಥಾನದಲ್ಲಿ ನೂಪುರ್ ಶರ್ಮಾ ಬೆಂಬಲಿಗನ ಹತ್ಯೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಸ್ಥಾನದಲ್ಲಿ ನಡೆದ ಹಿಂದೂ ಟೈಲರ್ ಹತ್ಯೆ ನಾಚಿಗೆಗೇಡು. ಇದೊಂದು ವ್ಯವಸ್ಥಿತ ಸಂಚು, ದೇಶದಲ್ಲಿ ಮತ್ತೆ ಭಯೋತ್ಪಾದಕ ಚಟುವಟಿಕೆ ಶುರುವಾಗಿದೆ. ಇದೇ ಮಾದರಿಯಲ್ಲಿ ಶಿವಮೊಗ್ಗದಲ್ಲೂ ಹರ್ಷನ ಹತ್ಯೆ ನಡೆದಿತ್ತು. ಹರ್ಷನ ಕತ್ತು ಸಿಗಿದು ಹತ್ಯೆ ಮಾಡಿ, ವೀಡಿಯೋವನ್ನು ಹರ್ಷನ ತಂಗಿಗೆ ಕಳುಹಿಸಲಾಗಿತ್ತು ಎಂದು ಅಸಮಾಧಾನಗೊಂಡರು.

ರಾಜಸ್ಥಾನ ಘಟನೆ ಮತ್ತು ಗಲಭೆಯ ಹಿಂದೆ ವಿದೇಶಿ ಕೈವಾಡವಿದೆ. ಅಲ್ಲಿನ ಸರ್ಕಾರದ ಪುಷ್ಟೀಕರಣ ನೀತಿಯ ಕಾರಣದಿಂದ ಈ ಘಟನೆ ಆಗಿದೆ. ಕಾಂಗ್ರೆಸ್ ಈಗ ಮೌನವಾಗಿರೋದ್ರ ಹಿನ್ನೆಲೆ ಏನು? ಇಂಥಹ ದುಷ್ಕೃತ್ಯ ನಡೆದಾಗ ಕಾಂಗ್ರೆಸ್ ಯಾರ ಪರವಾಗಿರುತ್ತೆ ಅನ್ನೋದು ಮುಖ್ಯ. ಈ ಘಟನೆ ದೇಶದಲ್ಲಿ ನಡೆಯಲು ಕಾರಣ ತುಷ್ಟೀಕರಣದ ರಾಜನೀತಿಯಾಗಿದೆ. ಇಂಥಹ ಘಟನೆ ಖಂಡಿಸ್ತೇನೆ, ಇದರ ವಿರುದ್ಧ ಕಠಿಣ ಕ್ರಮ ಆಗಬೇಕು ಎಂದು ಆಗ್ರಹಿಸಿದರು.

ಉತ್ತರ ಪ್ರದೇಶದ ಯೋಗಿ ಮಾದರಿ ನಿರ್ಧಾರಗಳ ಅವಶ್ಯಕತೆ ಇದೆ. ತಕ್ಷಣ ಕಠಿಣ ಕ್ರಮ ಅಗಬೇಕು, ಕೇಂದ್ರ ಸರ್ಕಾರ ಎನ್‍ಐಎ ಕಳುಹಿಸಿದೆ. ಇದೊಂದು ಮಾನವೀಯತೆಗೆ ಸವಾಲಾಗಿರುವ ಪ್ರಕರಣ. ನಿರಂತರ ಗಲಭೆ ಸೃಷ್ಟಿಸಲು ಹತ್ಯೆ ಮಾಡಿ ಸಮಾಜ ಒಡೆಯಲಾಗ್ತಿದೆ. ಜಿಹಾದಿ ಹೆಸರಿನಲ್ಲಿ ಇದನ್ನು ಮಾಡಲಾಗ್ತಿದ್ದು, ವಿಶ್ವಾಸ ಕಡಿಮೆ ಮಾಡಲಾಗ್ತಿದೆ. ಕಾಶ್ಮೀರದಲ್ಲಿ ಹಿಂದೆ ನಡೆದ ಘಟನೆಗಳು ಹೊರಗಡೆ ಬರ್ತಿದೆ ಎಂದು ತಿಳಿಸಿದರು.

ದೇಶದಲ್ಲಿ ಅತಂತ್ರ ಸ್ಥಿತಿ ತರಬೇಕು, ಜಿಹಾದಿ ಮಾನಸಿಕತೆ ಬೆಳೆಸಲು ಯತ್ನ ನಡೀತಾ ಇದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಇದನ್ನ ಸಹಿಸಲ್ಲ, ತಡೆ ಹಾಕುತ್ತೆ. ಈ ರೀತಿಯ ಘಟನೆಗಳನ್ನು ಅಲ್ಲಲ್ಲೇ ನಿಯಂತ್ರಿಸುವ ಕೆಲಸ ಆಗಬೇಕು. ಕ್ರೂರಿ ಮಾನಸಿಕತೆಗಳಿಗೆ ಭಯದ ವಾತಾವರಣ ಸೃಷ್ಟಿಸಬೇಕು. ಅಂಥಹ ವಾತಾವರಣವನ್ನು ನಮ್ಮ ಸರ್ಕಾರವೂ ಮಾಡಲಿದೆ ಎಂದು ಭರವಸೆ ಕೊಟ್ಟರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

16 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

17 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

17 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

17 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

18 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

19 hours ago