Featured

ಮಂಗಳೂರು:  ದೈವದ ವೇಷ ಧರಿಸಿ RCB ಪಂದ್ಯ ವೀಕ್ಷಿಸಿದ ವ್ಯಕ್ತಿ – ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್ – Vishwanews24

ಮಂಗಳೂರು:  ದೈವದ ವೇಷ ಧರಿಸಿ RCB ಪಂದ್ಯ ವೀಕ್ಷಿಸಿದ ವ್ಯಕ್ತಿ – ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಮಂಗಳೂರು: ಕಾಂತಾರ ಸಿನೆಮಾ ವಿಶ್ವದಾದ್ಯಂತ ಮೆಚ್ಚುಗೆ ಗಳಿಸಿ ಕೋಟಿಗಟ್ಟಲೆ ಹಣ ಗಳಿಸಿದೆ. ಕರಾವಳಿಯ ದೈವಾರಾಧನೆಯನ್ನು ವಿಶ್ವಕ್ಕೆ ಪರಿಚಯಿಸಿದ ಕೀರ್ತಿಯೂ ಕಾಂತಾರ ಸಿನೆಮಾಗೆ ಸಲ್ಲುತ್ತದೆ. ಆದರೆ ಕಾಂತಾರಾ ಸಿನೆಮಾದ ಬಳಿ ದೈವಾರಾಧನೆಯನ್ನು ಅಣಕ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು, ಕಾಂತಾರದ ಪಂಜುರ್ಲಿ ದೈವ ಇದೀಗ ಎಲ್ಲಾ ರೀತಿಯ ಕಾರ್ಯಕ್ರಮಗಳಲ್ಲಿ ಕಾಣ ಸಿಗುವ ವೇಷ ರೀತಿ ಆಗಿದೆ.

ಇದೇ ರೀತಿ ನಿನ್ನೆ ನಡೆದ ಆರ್​ಸಿಬಿ ಪಂದ್ಯದಲ್ಲೂ ಕಾಂತಾರದಲ್ಲಿ ಬರುವ ಪಂಜುರ್ಲಿ ದೈವದ ವೇಷವನ್ನು ಧರಿಸಿ ಕ್ರಿಕೆಟ್​ ನೋಡುತ್ತಾ ಎಂಜಾಯ್​ ಮಾಡುತ್ತಿರುವ ವ್ಯಕ್ತಿಯೊಬ್ಬರು ಕ್ಯಾಮೆರಾ ಕಣ್ಣಿಗೆ ಸಿಕ್ಕಿದ್ದಾರೆ. ಸದ್ಯ ಅವರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಆರ್ ಸಿಬಿ ತನ್ನ ಖಾತೆಯಲ್ಲಿ ಪೋಟೋ ಹಂಚಿಕೊಂಡಿದೆ.

ಕಾಂತಾರದಲ್ಲಿ ಬರುವ ಪಂಜುರ್ಲಿ ದೈವವು ಕರಾವಳಿ ಮತ್ತು ತುಳು ನಾಡಿನ ಜನರ ನಂಬಿಕೆ. ಅನೇಕರು ಈ ದೈವವನ್ನು ಆರಾಧಿಸುತ್ತಾ ಬಂದಿದ್ದಾರೆ. ಇದೇ ವಿಚಾರವನ್ನು ಇಟ್ಟುಕೊಂಡು ಕಾಂತಾರ ಸಿನಿಮಾ ಮಾಡಲಾಗಿದೆ. ಅದು ಹಿಟ್​ ಕೂಡ ಆಗಿದೆ. ಅದರಂತೆಯೇ ನಿನ್ನೆ ನಡೆದ ಆರ್​ಸಿಬಿ ಫ್ಯಾನ್​ ಪಂಜುರ್ಲಿ ದೈವದ ವೇಷ-ಭೂಷಣ ಧರಿಸಿಕೊಂಡು ಪಂದ್ಯ ನೋಡುತ್ತಾ ಎಂಜಾಯ್​​ ಮಾಡಿದ್ದಾರೆ. ಈ ಫೋಟೋವನ್ನು ಆರ್​ಸಿಬಿ ಟ್ವಿಟ್ಟರ್​ ಖಾತೆಯೂ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.ಪಂಜುರ್ಲಿ ದೈವದ ರೀತಿ ವೇಷ ಧರಿಸಿರುವುದಕ್ಕೆ ಕರಾವಳಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ ಕಾಂತಾರದ ಸಿನೆಮಾದಿಂದಾಗಿ ಇತ್ತೀಚೆಗೆ ಕರಾವಳಿಯ ದೈವಾರಾಧನೆಯನ್ನು ಅಣಕಿಸುವವರು ಸಂಖ್ಯೆ ಹೆಚ್ಚಾಗಿದೆ.

 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

3 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

4 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

5 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

5 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

6 hours ago