Featured

ಮಂಗಳೂರು : ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಅಪಚಾರ ಪ್ರಕರಣ : ಇಬ್ಬರ ಬಂಧನ -Vishwanews24

ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಅಪಚಾರ ಪ್ರಕರಣ : ತಪ್ಪು ಕಾಣಿಕೆ ಹಾಕಿ ಶರಣಾದ ಆರೋಪಿಗಳು -Vishwanews24

ಮಂಗಳೂರು: ನಗರದ ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಅಪಚಾರ ಮಾಡಿದ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಈ ಮಾಹಿತಿ ನೀಡಿದರು. ಮಂಗಳೂರಿನ ಜೋಕಟ್ಟೆ ನಿವಾಸಿಗಳಾದ ಅಬ್ದುಲ್ ರಹೀಂ, ಅಬ್ದುಲ್ ತೌಫೀಕ್ ಬಂಧಿತ ಆರೋಪಿಗಳು.

ಮೂರು ತಿಂಗಳಲ್ಲಿ ಕಾಣಿಕೆ ಹುಂಡಿಗಳಿಗೆ ಕಾಂಡೋಮ್, ಅಶ್ಲೀಲ ಬರಹಗಳ ಚೀಟಿ ಹಾಕಿ‌ ದುಷ್ಕೃತ್ಯ ಎಸಗುತ್ತಿದ್ದ ನಾಲ್ಕೈದು ಪ್ರಕರಣ ಬೆಳಕಿಗೆ ಬಂದಿತ್ತು. ಪಾಂಡೇಶ್ವರ, ಕದ್ರಿ, ಉಳ್ಳಾಲ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಹಲವು ತನಿಖೆ ನಡೆಸಿದ್ದರೂ ಆರೋಪಿಗಳ ಸುಳಿವು ಸಿಕ್ಕಿರಲಿಲ್ಲ. ಆದರೆ ಬುಧವಾರ ಎಮ್ಮೆಕೆರೆ ಕೊರಗಜ್ಜ ದೈವಸ್ಥಾನಕ್ಕೆ ಇಬ್ಬರು ಆರೋಪಿಗಳು ಬಂದಿದ್ದರು. ಈ ಸಂಬಂಧ ಮಾಹಿತಿ ಪಡೆದು ಇಬ್ಬರನ್ನು ಬಂಧಿಸಿದ್ದೇವೆ ಎಂದು ಮಾಹಿತಿ ನೀಡಿದರು.

ಮಂಗಳೂರು: ಕಾರಣಿಕ ಮೆರೆದ ಕೊರಗಜ್ಜ ; ತನ್ನ ಕ್ಷೇತ್ರ ಮಾಲಿನ್ಯ ಮಾಡಿದ ಓರ್ವನ ಸಾವು ,ಇಬ್ಬರಿಂದ ತಪ್ಪು ಕಾಣಿಕೆ -Vishwanews24

ಅಬ್ದುಲ್ ರಹೀಂ ಮತ್ತು ಅಬ್ದುಲ್ ತೌಫೀಕ್ ರ ಸ್ನೇಹಿತ ನವಾಝ್ ಎಂಬಾತ ದೈವಸ್ಥಾನಕ್ಕೆ ಕರೆದುಕೊಂಡು ಹೋಗುತ್ತಿದ್ದ. ಆತ ಮಂತ್ರವಾದಿ ಎಂಬಂತೆ ತನ್ನನ್ನು ತಾನೂ ಬಿಂಬಿಸಿಕೊಂಡಿದ್ದ. ಅವನೊಂದಿಗೆ ಕೃತ್ಯ ನಡೆಸುತ್ತಿದ್ದೆವು. ಆದರೆ ಕೃತ್ಯವೆಸಗಿದ ಬಳಿಕ ಅನಾರೋಗ್ಯಕ್ಕೆ ತುತ್ತಾಗಿದ್ದ ನವಾಝ್, ರಕ್ತವಾಂತಿ ಮಾಡಿ ಸಾವನ್ನಪ್ಪಿದ್ದ.

ಆದರೆ ಸಾವಿಗಿಂತ ಮೊದಲು ಕೊರಗಜ್ಜನ ಶಾಪವಿದೆ ಎನ್ನುವಂತೆ ನವಾಝ್ ಅನಿಸಿಕೆ ಹಂಚಿಕೊಂಡಿದ್ದ. ಸ್ನೇಹಿತ ನವಾಝ್ ಸಾವಿನ ಬಳಿಕ ತೌಫೀಕ್ ಗೂ ಅನಾರೋಗ್ಯ ಸಮಸ್ಯೆ ಕಾಡಿತ್ತು. ಇದರಿಂದ ಭೀತಿಗೊಳಗಾಗಿದ್ದ ಆರೋಪಿಗಳು ಎಮ್ಮೆಕೆರೆ ಕೊರಗಜ್ಜ ದೈವಸ್ಥಾನಕ್ಕೆ ತಪ್ಪು ಕಾಣಿಕೆ ಹಾಕಲು ಬಂದಿದ್ದರು. ಈ ವೇಳೆ ಸೆರೆ ಹಿಡಿಯಲಾಗಿದೆ. ತನಿಖೆಯಲ್ಲಿ ಮಾಡಿರುವ ಕೃತ್ಯಗಳ ಬಗ್ಗೆ ಆರೋಪಿಗಳು ಹೇಳಿಕೊಂಡಿದ್ದಾರೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

10 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

19 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

19 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

19 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

19 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago