ಮಂಗಳೂರು: ನಗರದ ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಅಪಚಾರ ಮಾಡಿದ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಈ ಮಾಹಿತಿ ನೀಡಿದರು. ಮಂಗಳೂರಿನ ಜೋಕಟ್ಟೆ ನಿವಾಸಿಗಳಾದ ಅಬ್ದುಲ್ ರಹೀಂ, ಅಬ್ದುಲ್ ತೌಫೀಕ್ ಬಂಧಿತ ಆರೋಪಿಗಳು.
ಮೂರು ತಿಂಗಳಲ್ಲಿ ಕಾಣಿಕೆ ಹುಂಡಿಗಳಿಗೆ ಕಾಂಡೋಮ್, ಅಶ್ಲೀಲ ಬರಹಗಳ ಚೀಟಿ ಹಾಕಿ ದುಷ್ಕೃತ್ಯ ಎಸಗುತ್ತಿದ್ದ ನಾಲ್ಕೈದು ಪ್ರಕರಣ ಬೆಳಕಿಗೆ ಬಂದಿತ್ತು. ಪಾಂಡೇಶ್ವರ, ಕದ್ರಿ, ಉಳ್ಳಾಲ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಹಲವು ತನಿಖೆ ನಡೆಸಿದ್ದರೂ ಆರೋಪಿಗಳ ಸುಳಿವು ಸಿಕ್ಕಿರಲಿಲ್ಲ. ಆದರೆ ಬುಧವಾರ ಎಮ್ಮೆಕೆರೆ ಕೊರಗಜ್ಜ ದೈವಸ್ಥಾನಕ್ಕೆ ಇಬ್ಬರು ಆರೋಪಿಗಳು ಬಂದಿದ್ದರು. ಈ ಸಂಬಂಧ ಮಾಹಿತಿ ಪಡೆದು ಇಬ್ಬರನ್ನು ಬಂಧಿಸಿದ್ದೇವೆ ಎಂದು ಮಾಹಿತಿ ನೀಡಿದರು.
ಅಬ್ದುಲ್ ರಹೀಂ ಮತ್ತು ಅಬ್ದುಲ್ ತೌಫೀಕ್ ರ ಸ್ನೇಹಿತ ನವಾಝ್ ಎಂಬಾತ ದೈವಸ್ಥಾನಕ್ಕೆ ಕರೆದುಕೊಂಡು ಹೋಗುತ್ತಿದ್ದ. ಆತ ಮಂತ್ರವಾದಿ ಎಂಬಂತೆ ತನ್ನನ್ನು ತಾನೂ ಬಿಂಬಿಸಿಕೊಂಡಿದ್ದ. ಅವನೊಂದಿಗೆ ಕೃತ್ಯ ನಡೆಸುತ್ತಿದ್ದೆವು. ಆದರೆ ಕೃತ್ಯವೆಸಗಿದ ಬಳಿಕ ಅನಾರೋಗ್ಯಕ್ಕೆ ತುತ್ತಾಗಿದ್ದ ನವಾಝ್, ರಕ್ತವಾಂತಿ ಮಾಡಿ ಸಾವನ್ನಪ್ಪಿದ್ದ.
ಆದರೆ ಸಾವಿಗಿಂತ ಮೊದಲು ಕೊರಗಜ್ಜನ ಶಾಪವಿದೆ ಎನ್ನುವಂತೆ ನವಾಝ್ ಅನಿಸಿಕೆ ಹಂಚಿಕೊಂಡಿದ್ದ. ಸ್ನೇಹಿತ ನವಾಝ್ ಸಾವಿನ ಬಳಿಕ ತೌಫೀಕ್ ಗೂ ಅನಾರೋಗ್ಯ ಸಮಸ್ಯೆ ಕಾಡಿತ್ತು. ಇದರಿಂದ ಭೀತಿಗೊಳಗಾಗಿದ್ದ ಆರೋಪಿಗಳು ಎಮ್ಮೆಕೆರೆ ಕೊರಗಜ್ಜ ದೈವಸ್ಥಾನಕ್ಕೆ ತಪ್ಪು ಕಾಣಿಕೆ ಹಾಕಲು ಬಂದಿದ್ದರು. ಈ ವೇಳೆ ಸೆರೆ ಹಿಡಿಯಲಾಗಿದೆ. ತನಿಖೆಯಲ್ಲಿ ಮಾಡಿರುವ ಕೃತ್ಯಗಳ ಬಗ್ಗೆ ಆರೋಪಿಗಳು ಹೇಳಿಕೊಂಡಿದ್ದಾರೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…