ಮಂಗಳೂರು :ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಅವಹೇಳನಕಾರಿ ಬರಹ :ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ದಕ್ಷಿಣ ಬಿಜೆಪಿ ಎಸ್.ಸಿ ಮೋರ್ಚಾ ಆಗ್ರಹ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು :ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಅವಹೇಳನಕಾರಿ ಬರಹ :ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ದಕ್ಷಿಣ ಬಿಜೆಪಿ ಎಸ್.ಸಿ ಮೋರ್ಚಾ ಆಗ್ರಹ –Vishwanews24

ಮಂಗಳೂರು : ಮಂಗಳೂರಿನ ಅತ್ತಾವರ ಬಾಬುಗುಡ್ಡೆಯಲ್ಲಿ ಭಗವಾನ್ ಶ್ರೀ ಬಬ್ಬುಸ್ವಾಮಿ ಕ್ಷೇತ್ರ ಹಾಗೂ ಭಗವಾನ್ ಶ್ರೀ ದೇವರಾಜ ಕೋರ್ದಬ್ಬು ಕ್ಷೇತ್ರದ ಕಾಣಿಕೆ ಡಬ್ಬಿಯಲ್ಲಿ ಹಿಂದೂ ದೇವತೆಗಳ ಕುರಿತು ಅವಹೇಳನಕಾರಿ ಬರಹ ಬೆರೆದು ಕೋಮು ಭಾವನೆ ಕೆರಳಿಸುವವರ ಬಂಧನಕ್ಕೆ ಮಂಗಳೂರು ನಗರ ದಕ್ಷಿಣ ಬಿಜೆಪಿ ಎಸ್.ಸಿ ಮೋರ್ಚಾ ಆಗ್ರಹಿಸಿದೆ.

ಪರಿಶಿಷ್ಟ ಜಾತಿ ಹಾಗೂ ಮುಂಡಾಲ‌ ಸಮಾಜವು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆರಾಧಿಸಿಕೊಂಡು ಬಂದಿರುವ‌ ಕ್ಷೇತ್ರವನ್ನು ಅಪವಿತ್ರಗೊಳಿಸುವ ಉದ್ಧೇಶದಿಂದ ಇಂತಹ ಕೃತ್ಯ ಮಾಡಲಾಗಿದೆ. ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಜರಗಿಸಬೇಕೆಂದು ಎಸ್.ಸಿ ಮೋರ್ಚಾ ಅದ್ಯಕ್ಷರಾದ ರಘವೀರ್ ಬಾಬುಗುಡ್ಡೆ ಆಗ್ರಹಿಸಿದ್ದಾರೆ.

ಈಗಾಗಲೇ ಈ ಘಟನೆಯ ಕುರಿತು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇವೆ. ಸಮಾಜದ ಧಾರ್ಮಿಕ ಭಾವನೆಗಳ ಚೆಲ್ಲಾಟವಾಡುವ ಕಿಡಿಗೇಡಿಗಳಿಗೆ ಕಾನೂನಿನಡಿ ಕ್ರಮ ಜರಗಿಸಲು ಸಿದ್ಧರಿದ್ದೇವೆ ಎಂದು ತಿಳಿಸಿದ್ದಾರೆ.

http://ದೇಶಾದ್ಯಂತ ಜನವರಿಗೆ ಕೊರೊನಾ ಲಸಿಕೆ ನೀಡಲಾಗುವುದು : ಪ್ರಧಾನಿ -Vishwanews24