Featured

ಮಂಗಳೂರು : ದೈವಸ್ಥಾನ ಅಪವಿತ್ರಗೊಳಿಸಿದ ಪ್ರಕರಣ : ಪೂರಕ ಸಾಕ್ಷ್ಯ ಗಳು ದೊರೆತ ಕೂಡಲೇ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ : ಶಶಿಕುಮಾರ್ -Vishwanews24

ಮಂಗಳೂರು : ದೈವಸ್ಥಾನ ಅಪವಿತ್ರಗೊಳಿಸಿದ ಪ್ರಕರಣ : ಶಂಕಿತ ಆರೋಪಿಗಳ ವಿರುದ್ದ ಲಭಿಸದ ಪೂರಕ ಸಾಕ್ಷ್ಯ..

ಆರೋಪಿಗಳು ನೇರವಾಗಿ ಕೃತ್ಯದಲ್ಲಿ ಪಾಲ್ಗೊಂಡಿದ್ದರು ಎಂಬುದಕ್ಕೆ ಪೂರಕ ಸಾಕ್ಷೃಗಳ ಅಗತ್ಯವಿದೆ ..

ಆರೋಪಿಗಳ ವಿರುದ್ದ ಪೂರಕ ಸಾಕ್ಷ್ಯ ಗಳು ದೊರೆತ ಕೂಡಲೇ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ : ಶಶಿಕುಮಾರ್ -Vishwanews24

ಮಂಗಳೂರು: ದೈವಸ್ಥಾನಗಳ ಹುಂಡಿಗೆ ಕಾಂಡೋಮ್ ಮತ್ತು ಧರ್ಮ ನಿಂದನೆಯ ಬರಹಗಳನ್ನು ಹಾಕಿ ಅಪವಿತ್ರ ಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಶಕ್ಕೆ ಪಡೆದಿರುವ ಇಬ್ಬರು ಸಂಶಯಾಸ್ಪದ ವ್ಯಕ್ತಿಗಳನ್ನು ಪೂರಕ ಸಾಕ್ಷಿಗಳಿಲ್ಲದ ಕಾರಣ ಪೊಲೀಸರು ಬಿಟ್ಟು ಕಳುಹಿಸಿದ್ದಾರೆ.

ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಪೊಲೀಸ್ ಆಯುಕ್ತ ಶಶಿಕುಮಾರ್ ಪೊರ್ಕೋಡಿಯ ಅಬ್ದುಲ್ ರಹೀಂ ಮತ್ತು ಅಬ್ದುಲ್ ತೌಫೀಕ್ ಎಂಬುವರನ್ನು ಠಾಣೆಗೆ ಕರೆಯಿಸಿ 4 ದಿನಗಳ ಕಾಲ ವಿಚಾರಣೆ ನಡೆಸಲಾಗಿತ್ತು. ಅವರ ವಿರುದ್ಧ ಐಪಿಸಿ ಸೆಕ್ಷನ್ 169ರನ್ವಯ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಲಾಗಿದೆ. ಇನ್ನೂ ಪೂರಕ ಸಾಕ್ಷ್ಯ ಗಳು ದೊರೆತಿಲ್ಲ.ಸಾಕ್ಷ್ಯ ಗಳು ದೊರೆತ ಕೂಡಲೇ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಆರೋಪಿಗಳು ಈಗಲೂ ಸಂಶಯಾಸ್ಪದ ಆರೋಪಿಗಳೇ ಆಗಿದ್ದಾರೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ಬಂಟ್ವಾಳ : ಗಾಂಜಾ ಸಾಗಾಟಕ್ಕೆ ಯತ್ನ ; ಓರ್ವ ಆರೋಪಿಯ ಬಂಧನ -Vishwanews24

ತಮ್ಮ ಸ್ನೇಹಿತನಾಗಿದ್ದ ನವಾಜ್ ಕೆಲವು ದೈವಸ್ಥಾನಗಳನ್ನು ಅಪವಿತ್ರಗೊಳಿಸಿದ ಕೃತ್ಯ ಎಸಗಿದ್ದು ಆತ ಅನಾರೋಗ್ಯಕ್ಕೆ ಒಳಗಾಗಿ ಮೃತಪಟ್ಟಿದ್ದಾನೆ. ನಾವು ಈ ಕೃತ್ಯದಲ್ಲಿ ಭಾಗಿಯಾಗಿಲ್ಲ. ಆದರೆ ವಿಷಯ ಗೊತ್ತಿದ್ದ ಕಾರಣ ನಮಗೂ ಭಯವಾಗುತ್ತಿದ್ದು ಅದಕ್ಕಾಗಿ ಎಮ್ಮೆಕೆರೆ ಬಬ್ಬುಸ್ವಾಮಿ-ಕೊರಗಜ್ಜನ ಕ್ಷೇತ್ರದಲ್ಲಿ ತಪ್ಪು ಕಾಣಿಕೆ ಹಾಕಲು ಬಂದಿದ್ದೇವೆ ಎಂದು ಇಬ್ಬರು ಸಂಶಯಾಸ್ಪದ ಆರೋಪಿಗಳು ಹೇಳಿದ್ದರು. ಆದರೆ ಅವರು ಕೂಡ ನೇರವಾಗಿ ಕೃತ್ಯದಲ್ಲಿ ಪಾಲ್ಗೊಂಡಿದ್ದರು ಎಂಬುದಕ್ಕೆ ಪೂರಕ ಸಾಕ್ಷೃಗಳ ಅಗತ್ಯವಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ಉಡುಪಿ : ಜಿಲ್ಲಾ ಧರ್ಮೋತ್ಥಾನ ಪ್ರಶಸ್ತಿ : ಅರ್ಜಿ ಆಹ್ವಾನ -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

8 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

17 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

17 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

17 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

17 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago