Featured

ಮಂಗಳೂರು : ದೈವಾರಾಧನೆಯು ಯಾವುದೇ ನಾಟಕ, ಸಿನಿಮಾ, ಧಾರವಾಹಿ, ಯಕ್ಷಗಾನದಲ್ಲೂ ಪ್ರದರ್ಶನ ಆಗಬಾರದು : ಶರಣ ಪಂಪ್ವೆಲ್ ಎಚ್ಚರಿಕೆ

ಮಂಗಳೂರು: ಸಿನಿಮಾ  ಮತ್ತು ನಾಟಕಗಳಲ್ಲಿ ದೈವಾರಾಧನೆಗೆ ಅಪಮಾನ ..

ಇದಕ್ಕೆ ಕಡಿವಾಣ ಹಾಕುವಂತೆ ಜಿಲ್ಲಾಧಿಕಾರಿಗೆ ದೈವಾರಾಧಕರ ಮನವಿ

ಕಾಂತಾರ-2ನಲ್ಲಿ ದೈವಾರಾಧನೆ ಪ್ರದರ್ಶನವಾದ್ರೆ ಉಗ್ರ ಹೋರಾಟ ..

ದೈವಾರಾಧಕರ ಹೋರಾಟಕ್ಕೆ ಸಾಥ್ ನೀಡಿದ ವಿಶ್ವ ಹಿಂದೂ ಪರಿಷತ , ಬಜರಂಗದಳ  ..

ರಿಷಬ್ ಶೆಟ್ಟಿಗೂ ಎಚ್ಚರಿಕೆ ನೀಡಿದ ಬಜರಂಗದಳದ ಮುಖಂಡ ಶರಣ ಪಂಪ್ವೆಲ್

ಮಂಗಳೂರು: ಸಿನಿಮಾ  ಮತ್ತು ನಾಟಕಗಳಲ್ಲಿ ದೈವಾರಾಧನೆಗೆ ಅಪಮಾನ ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕುವಂತೆ ಇಲ್ಲಿನ ದೈವಾರಾಧಕರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ  ಮನವಿ ಸಲ್ಲಿಸಿದ್ದಾರೆ.

`ಕಾಂತಾರ’ ಸಿನಿಮಾದಲ್ಲಿ ದೈವದ ಅಣುಕು ವೇಷ ಹಾಕಿರುವ ರಿಷಬ್ ಶೆಟ್ಟಿ, `ಶಿವದೂತೆ ಗುಳಿಗೆ’ ನಾಟಕದಲ್ಲಿ ದೈವದ ಅಣುಕು ವೇಷ ಧರಿಸಿದ ಸ್ವರಾಜ್ ಹಾಗೂ `ಕಾವೇರಿ’ ಧಾರಾವಾಹಿಯ ಸಿ.ಕೆ ಪ್ರಶಾಂತ್ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಆಖಲಿಸಿ ತನಿಖೆ ನಡೆಸುವಂತೆ ತುಳುನಾಡ ದೈವಾರಾಧನಾ ಸಂರಕ್ಷಣಾ ವೇದಿಕೆ ಮನವಿ ಮಾಡಿದೆ.

ದೈವಾರಾಧಕರ ಹೋರಾಟಕ್ಕೆ ವಿಶ್ವ ಹಿಂದೂ ಪರಿಷತ , ಬಜರಂಗದಳ ಸಾಥ್ ನೀಡಿದೆ. ಮುಂದೆ ಟಿವಿ, ಸಿನೆಮಾ ನಾಟಕಗಳಲ್ಲಿ ದೈವಾರಾಧನೆಯ ಪ್ರದರ್ಶನವಾಗಬಾರದು. ಮುಂದೆ ಕಂಡ ಕಂಡಲ್ಲಿ ದೈವಾರಾಧನೆ ಪ್ರದರ್ಶನವಾದ್ರೆ ಮುತ್ತಿಗೆ ಹಾಕುತ್ತೇವೆ. ಈ ಬಗ್ಗೆ ರಿಷಬ್ ಶೆಟ್ಟಿಗೂ ಎಚ್ಚರಿಕೆ ನೀಡುತ್ತೇವೆ ಎಂದು ಬಜರಂಗದಳದ ಮುಖಂಡ ಶರಣ ಪಂಪ್ವೆಲ್ ಎಚ್ಚರಿಕೆ ನೀಡಿದ್ದಾರೆ.

ಮುಂದೆ ಸಿನಿಮಾಗಳಲ್ಲಿ ದೈವಾರಾಧನೆ ಪ್ರದರ್ಶನ ಆದ್ರೆ ನಮ್ಮ ಹೋರಾಟದ ಸ್ವರೂಪ ತೀವ್ರಗೊಳ್ಳುತ್ತದೆ. ದೈವಾರಾಧನೆಯು ಯಾವುದೇ ನಾಟಕ, ಸಿನಿಮಾ, ಧಾರವಾಹಿ, ಯಕ್ಷಗಾನದಲ್ಲೂ ಪ್ರದರ್ಶನ ಆಗಬಾರದು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಬೆಳ್ತಂಗಡಿ ನಳಿಕೆ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಾಭಾಕರ್ ಮಾತನಾಡಿ, ತುಳುನಾಡಿನಲ್ಲಿ ಹುಟ್ಟಿ ತುಳುನಾಡು ದೈವಕ್ಕೆ ಅಪಮಾನ ಮಾಡುತ್ತಿದ್ದಾರೆ ಅಂದ್ರೆ ನಾವು ಸುಮ್ಮನೆ ಕೂರಲು ಸಾಧ್ಯವಿಲ್ಲ. ಮೂಲ ಪರಂಪರೆಯಿಂದ ನಾವು ಮಾಡಿಕೊಂಡು ಬಂದ ಚಾಕರಿ ಅದರೂ ದೈವದ ಚಾಕರಿಯನ್ನು ಮಾಡಿದವರೇ ಮಾಡಬೇಕು. ಆದ್ರೆ ದೈವದ ಬಣ್ಣ, ಹಚ್ಚಿ, ಗಗ್ಗರ ಕಟ್ಟಿಕೊಂಡು ಇಷ್ಟಬಂದಂತೆ ಮಾಡುತ್ತಿದ್ದಾರೆ. ಕಾಂತಾರ ಸಿನಿಮಾದಲ್ಲಿ ಮಾಡಿದ್ದಾರೆ. ಅವರಿಗೆ ಏನು ನೈತಿಕತೆ ಇದೆ? ನಮ್ಮ ದೈವವನ್ನು ಬೀದಿಬದಿಗೆಲ್ಲ ಕೊಂಡೊಯ್ದು ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಗುಳಿಗ ದೈವ ನಂಬಿಕೆ ಇರುವ ಸ್ಥಳ. ಇನ್ನೂ ಕಾಂತಾರ-2 ಬರುತ್ತಿದೆ. ಯಾವ ಕಾಂತಾರ ಸಿನಿಮಾ ಬಂದರೂ ನಾವು ಹೋರಾಟಕ್ಕೆ ಇಳಿಯೋದೆ. ಇವರು ದುಡ್ಡು ಮಾಡುವುದಿದ್ದರೆ, ದೇಶದಲ್ಲಿ ಎಷ್ಟೊಂದು ಸಮಸ್ಯೆಗಳಿವೆ, ಅವುಗಳನ್ನಿಟ್ಟುಕೊಂಡು ಮಾಡಲಿ. ವಿಷ್ಣುವರ್ಧನ್ ಅವರು ಸಿನಿಮಾ ಮಾಡಿದ್ದರು. ಆದ್ರೆ ಯಾವೊಂದು ಸಮಾಜಕ್ಕೆ ಅನ್ಯಾಯ ಆಗುವ ರೀತಿಯಲ್ಲಿ ಮಾಡಲಿಲ್ಲ. ಇದು ಮುಂದುವರಿದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

3 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

3 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

4 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

4 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

4 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

4 hours ago