Featured

ಮಂಗಳೂರು : ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ  ; ಸಹಸವಾರೆ ಸಾವು – vishwanews24

ಮಂಗಳೂರು : ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ  ; ಸವಾರ ಗಾಯ ಸಹಸವಾರೆ ಸಾವು

ಮಂಗಳೂರು : ನಗರದ ನಂತೂರು ಪ್ರದೇಶದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನದ ಸಹಸವಾರೆಯೊಬ್ಬರು ಮೃತಪಟ್ಟಿದ್ದಾರೆ. ಬಲ್ಲಾಳ್‌ಬಾಗ್ ನಿವಾಸಿ ದೀಪ್ತಿ (26) ಮೃತ ದುರ್ದೈವಿ. ದ್ವಿಚಕ್ರ ವಾಹನ ಸವಾರ ಕಿಶೋರ್ (32) ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ದ್ವಿಚಕ್ರ ವಾಹನವು ಬಲ್ಲಾಳ್‌ಬಾಗ್ ಕಡೆಯಿಂದ ವಾಮಂಜೂರು ಕಡೆಗೆ ತೆರಳುತ್ತಿದ್ದ ವೇಳೆ ನಂತೂರು ಬಸ್ ನಿಲ್ದಾಣದ ಸಮೀಪ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸಹಸವಾರೆ ದೀಪ್ತಿ ಬಸ್‌ನ ಮುಂಭಾಗದ ಚಕ್ರಕ್ಕೆ ಸಿಲುಕಿ ಮುಂದೆ ತಳ್ಳಲ್ಪಟ್ಟಿದ್ದು, ಬಸ್‌ನ ಟಯರ್ ಅವರ ಮೇಲೆ ಹರಿದಿದೆ ಎನ್ನಲಾಗಿದೆ. ಕೂಡಲೇ ಎಜೆ ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಆಕೆ ಅಸುನೀಗಿದ್ದಾರೆ.

ನಂತೂರು ಬಳಿಯ ಬಸ್ ನಿಲ್ದಾಣ ಎದುರಲ್ಲೇ ಘಟನೆ ನಡೆದಿದ್ದು ಕುಡುಪು ಭಾಗಕ್ಕೆ ತೆರಳುತ್ತಿದ್ದ 22 ನಂಬರಿನ ಖಾಸಗಿ ಬಸ್ ಡಿಕ್ಕಿಯಾಗಿದೆ. ಬಸ್ ವೇಗವಾಗಿತ್ತೇ, ಸ್ಕೂಟರ್ ಬಲ ಭಾಗದಿಂದ ಎದುರಿಗೆ ಬಂದಿತ್ತೇ ಎನ್ನುವುದು ಗೊತ್ತಾಗಿಲ್ಲ ಎಂದು ಕದ್ರಿ ಪೊಲೀಸರು ತಿಳಿಸಿದ್ದಾರೆ. ‌ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‌ಯುವತಿ ಮತ್ತು ಯುವಕ ವಾಮಂಜೂರಿನಲ್ಲಿ ಬರ್ತ್ ಡೇ ಪಾರ್ಟಿಗೆಂದು ತೆರಳುತ್ತಿದ್ದರೆಂದು ತಿಳಿದುಬಂದಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago