ಮಂಗಳೂರು: ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ, ಮೂವರು ಯುವಕರ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಅಹಿತಕರ ಘಟನೆ ನಿಯಂತ್ರಿಸುವ ಸಲುವಾಗಿ ದ್ವಿಚಕ್ರ ವಾಹನದಲ್ಲಿ ಇಬ್ಬರು ಯುವಕರು ಸಂಚರಿಸಿಲು ನಿರ್ಬಂಧ ವಿಧಿಸಿ ಕಾನೂನು ಹಾಗೂ ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಆದೇಶಿಸಿದ್ದಾರೆ.
ಮಂಗಳೂರಿನ ಕಮಿಷನರ್ ಕಚೇರಿಯಲ್ಲಿ ದ.ಕ, ಉಡುಪಿ ಜಿಲ್ಲಾ ಪೊಲೀಸ್ ಹಾಗೂ ನಗರ ಕಮಿಷನರ್ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳ ಜೊತೆ ಗುರುವಾರ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಅವರು ಸಂಜೆ 6 ರಿಂದ ಬೆಳಗ್ಗೆ 6ರ ವರೆಗೆ ಹಾಕಿರುವ ನಿರ್ಬಂಧಗಳನ್ನು ಹಂತಹಂತವಾಗಿ ತೆರವು ಮಾಡಲಾಗುವುದು . ಇದರೊಂದಿಗೆ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರು ಸಂಚರಿಸುವಂತಿಲ್ಲ ಎಂದು ಹೇಳಿದ್ದಾರೆ .
ಹಿರಿಯ ನಾಗರಿಕರು ಮತ್ತು ಮಕ್ಕಳನ್ನು, ಮಹಿಳೆಯರನ್ನು ಹೊರತುಪಡಿಸಿ ಉಳಿದವರು ದ್ವಿಚಕ್ರ ವಾಹನದಲ್ಲಿ ಸಂಚರಿಸುವಂತಿಲ್ಲ. ಸಹಸವಾರರು ಅನೇಕ ಬಾರಿ ಅಪರಾಧಗಳಲ್ಲಿ ಭಾಗಿಯಾಗುವುದು ಜಾಸ್ತಿ ಕಂಡುಬಂದ ಹಿನ್ನಲೆ ಈ ಕ್ರಮ ಜಾರಿಗೊಳಿಸಿದ್ದು ಮುಖ್ಯವಾಗಿ ಯುವಕರ ಮೇಲೆ ನಿಗಾ ಇರಿಸಲಾಗುವುದು ಎಂದು ಹೇಳಿದ್ದಾರೆ.
ಇದಲ್ಲದೆ 2015ರ ಬಳಿಕದ ಕೋಮುಗಲಭೆ ಪ್ರಕರಣಗಳನ್ನು ಪರಿಶೀಲಿಸಿ, ಅದರ ಆರೋಪಿಗಳ ಬಗ್ಗೆ ನಿಗಾ ಇರಿಸುವಂತೆ ಸೂಚಿಸಲಾಗಿದೆ. ಇದರೊಂದಿಗೆ ಜಿಲ್ಲಾ ಪೊಲೀಸ್ ವತಿಯಿಂದ ಗಡಿಪ್ರದೇಶಗಳಲ್ಲಿ 12 ಕಡೆ ಹಾಗೂ ನಗರ ಪೊಲೀಸ್ ವ್ಯಾಪ್ತಿ ಯಲ್ಲಿ 6 ಕಡೆಗಳಲ್ಲಿ ಚೆಕ್‌ಪೋಸ್ಟ್ ಹಾಕಲಾಗಿದೆ. ಸಿಎಂ ಸೂಚನೆ ಮೇರೆಗೆ ಹಾಗೂ ಅಹಿತಕರ ಘಟನೆಗಳನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಮುಂದಿನ ಒಂದು ವರ್ಷ ಕಾಲ ಚೆಕ್‌ಪೋಸ್ಟ್‌ಗಳು ಕಾರ್ಯವಹಿಸಲಿವೆ ಎಂದು ಮಾಹಿತಿ ನೀಡಿದರು
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…