ಮಂಗಳೂರು: ನಗರದ ನಾಗುರಿ ಮತ್ತು ಜಪ್ಪಿನಮೊಗರು ದೇವಸ್ಥಾನದ ಬಳಿ ಪಾರ್ಕ್ ಮಾಡಲಾಗಿದ್ದ ದ್ವಿಚಕ್ರ ವಾಹನವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತಾರಾಜ್ಯ ಆರೋಪಿಗಳನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕೇರಳದ ವೆಲ್ಲಾಡ್ ಒಟ್ಟತ್ತಾಯಿ ನಿವಾಸಿ ಅಲೆಕ್ಸ್ ಡೊಮಿನಿಕ್ (25) ಮತ್ತು ಕಲ್ಲಿಕೋಟೆಯ ಕುರಚೂರು ನಿವಾಸಿ ಅಮಲ್ ಕೃಷ್ಣ (25) ಎಂದು ಗುರುತಿಸಲಾಗಿದೆ.
ನವೆಂಬರ್ 14ರಂದು ಆರೋಪಿಗಳು ಸ್ನೇಹಿತರನ್ನು ಭೇಟಿ ಮಾಡಲು ಮಂಗಳೂರಿಗೆ ಬಂದಿದ್ದ ಆರೋಪಿಗಳು ಮಂಗಳೂರು ರೈಲ್ವೇ ಜಂಕ್ಷನ್ ಪ್ರದೇಶದ ಸುತ್ತಮುತ್ತ ಓಡಾಡುತ್ತಿದ್ದರು. ನಂತರ ಅವರು ನಾಗುರಿ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಒಂದು ಸ್ಕೂಟರ್ ಮತ್ತು ಜಪ್ಪಿನಮೊಗರುವಿನಲ್ಲಿರುವ ಆದಿಮಾಯ ದೇವಸ್ಥಾನದ ಬಳಿ ನಿಲ್ಲಿಸಿದ್ದ ಮತ್ತೊಂದು ಸ್ಕೂಟರ್ ಅನ್ನು ಕಳವು ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ವಿಚಾರಣೆ ವೇಳೆ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ. ಆರೋಪಿಗಳು ನವೆಂಬರ್ ೩೦ರಂದು ಮತ್ತೆ ಮಂಗಳೂರಿಗೆ ಬರುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಆರೋಪಿಗಳಿಂದ ಎರಡು ಸ್ಕೂಟರ್‌ಗಳು ಮತ್ತು ಕೃತ್ಯಕ್ಕೆ ಬಳಸಿದ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಆಸ್ತಿಯ ಒಟ್ಟು ಮೌಲ್ಯ ಸುಮಾರು 1,23,000 ರೂ. ಎಂದು ಅಂದಾಜಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…