Featured

ಮಂಗಳೂರು: ದ್ವಿಚಕ್ರ ವಾಹನ ಹಿಂಬದಿ ಸವಾರರಿಗೆ ನಿರ್ಬಂಧ ಆದೇಶ ವಾಪಾಸ್ : ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ -Vishwanews24

ಮಂಗಳೂರು: ದ್ವಿಚಕ್ರ ವಾಹನ ಹಿಂಬದಿ ಸವಾರರಿಗೆ ನಿರ್ಬಂಧ ಆದೇಶ ವಾಪಾಸ್ : ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ -Vishwanews24

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳನ್ನು ನಿಯಂತ್ರಿಸುವ ಸಲುವಾಗಿ ದ್ವಿಚಕ್ರ ವಾಹನಗಳಲ್ಲಿ ಇಬ್ಬರು ಯುವಕರು/ಪುರುಷರು ಸಂಚರಿಸಲು ಹೇರಿದ್ದ ನಿರ್ಬಂಧವನ್ನು ದ.ಕ. ಜಿಲ್ಲಾ ಪೊಲೀಸರು ಕೆಲವೇ ಗಂಟೆಗಳಲ್ಲಿ ಹಿಂಪಡೆದಿದ್ದಾರೆ. ಆದೇಶ ಹಿಂಪಡೆದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಹಿರಿಯ ನಾಗರಿಕರು, ಮಕ್ಕಳು, ಮಹಿಳೆಯರು ಹೊರತುಪಡಿಸಿ 18 ವರ್ಷ ಮೇಲ್ಪಟ್ಟ ಯುವಕರು ಯಾರೂ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಾಗಿ ಸಂಚರಿಸುವಂತಿಲ್ಲ. ಮುಂದಿನ ಆದೇಶದವರೆಗೆ ಇದು ಜಾರಿಯಲ್ಲಿರುತ್ತದೆ. ಸಹಸವಾರರು ಅನೇಕ ಬಾರಿ ಅಪರಾಧಗಳಲ್ಲಿ ಭಾಗಿಯಾಗುವುದು ಜಾಸ್ತಿ ಕಂಡುಬಂದ ಹಿನ್ನಲೆ ಈ ಕ್ರಮ ಜಾರಿಗೊಳಿಸಿದ್ದು ಮುಖ್ಯವಾಗಿ ಯುವಕರ ಮೇಲೆ ನಿಗಾ ಇರಿಸಲಾಗುವುದು ಎಂದು ಎಡಿಜಿಪಿ ಅಲೋಕ್ ಕುಮಾರ್ ಗುರುವಾರ ಮಧ್ಯಾಹ್ನ ಆದೇಶಿಸಿದ್ದರು. ಆದರೆ ಸಂಜೆ ವೇಳೆಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಈ ಆದೇಶವನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಹೊಸ ನಿಯಮಕ್ಕೆ ಸಾಕಷ್ಟು ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಆದೇಶ ಹಿಂಪಡೆಯಲಾಗಿದೆ ಎನ್ನಲಾಗಿದೆ. ಉಳಿದ ನಿಬಂಧನೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆಯುಕ್ತರು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

2 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

2 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

3 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

4 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

7 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

7 hours ago