Featured

ಮಂಗಳೂರು: ದ.ಕ., ಉಡುಪಿ ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ನೀಡುವಂತೆ ಹರೀಶ್ ಪೂಂಜಾ ಆಗ್ರಹ – vishwanews24

ಮಂಗಳೂರು: ದ.ಕ., ಉಡುಪಿ ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ನೀಡುವಂತೆ ಹರೀಶ್ ಪೂಂಜಾ ಆಗ್ರಹ

ಮಂಗಳೂರು : ಈ ಬಾರಿ ಸುರಿದ ಭಾರಿ ಮಳೆಗೆ ಘಟ್ಟಪ್ರದೇಶ ವಿಶೇಷವಾಗಿ ಕರಾವಳಿ ಭಾಗಗಳ ಹಲವೆಡೆ ಭಾರೀ ಹಾನಿ ಸಂಭವಿಸಿದ್ದು, ಸರ್ಕಾರ ದಕ್ಷಿಣ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕೆಂದು ಶಾಸಕ ಹರೀಶ್ ಪೂಂಜಾ ಸೇರಿ ಬಿಜೆಪಿ ಸದಸ್ಯರು ಆಗ್ರಹಿಸಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರ ವೇಳೆ ಈ ಬಗ್ಗೆ ಮಾತನಾಡಿದ ಹರೀಶ್‌ ಪೂಂಜ ಅವರು, ಮಳೆ ಅವಾಂತರದಿಂದ ಹಲವೆಡೆ ರಸ್ತೆ ಸಂಪರ್ಕವೇ ಕಡಿತಗೊಂಡಿದೆ. ಅತ್ಯಂತ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ, ನೆರೆಹಾವಳಿಗೆ ತುತ್ತಾದ ಕೊಡಗಿಗೆ, ಉತ್ತರ ಕರ್ನಾಟಕಕ್ಕೆ ಹಲವು ಸಂದರ್ಭಗಳಲ್ಲಿ ಬೇರೆ ಬೇರೆ ಪ್ರದೇಶಗಳಿಗೆ ವಿಶೇಷ ಪ್ಯಾಕೇಜ್‌ ಘೋಷಿಸಲಾಗಿದೆ. ಅದೇ ರೀತಿ ಈ ಬಾರಿಯೂ ಕರಾವಳಿಗೂ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದು ಒತ್ತಾಯಿಸಿದರು.

ಈ ಹಿಂದೆ ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಅನಾಹುತ ಸಂಭವಿಸಿದಾಗ ಅಂದಿನ ಬಿಜೆಪಿ ಸರ್ಕಾರ ವಿಶೇಷ ಪ್ಯಾಕೇಜ್‌ ಘೋಷಿಸಿತ್ತು ಎಂದು ತಿಳಿಸಿದರು. ಇನ್ನು ಶಾಸಕ ಹರೀಶ್ ಪೂಂಜಾ ಅವರ ಮಾತಿಗೆ ಸುನಿಲ್‌ ಕುಮಾರ್‌, ವಿಪಕ್ಷ ನಾಯಕ ಆರ್ ಅಶೋಕ್ ದನಿಗೂಡಿಸಿದರು.

ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಶಾಸಕ ಹರೀಶ್ ಪೂಂಜಾ ಅವರ ಹೇಳಿಕೆಯನ್ನು ಹಂಚಿಕೊಂಡಿರುವ ಬಿಜೆಪಿ, ‘ನಮ್ಮ ಸರ್ಕಾರವಿದ್ದಾಗ ಪ್ರವಾಹ ಸಂಭವಿಸಿದರೆ ಆಯಾ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್ ನೀಡುತ್ತು. ಮಾನ್ಯ ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ ವಿಪಕ್ಷದ ಶಾಸಕರಿಗೂ ಅನುದಾನ ನೀಡಿದ್ದರು. ಆದರೆ ಈ ಸರ್ಕಾರದಲ್ಲಿ ವಿಪಕ್ಷವಿರಲಿ, ಆಡಳಿತ ಪಕ್ಷದ ಶಾಸಕರಿಗೂ ಅನುದಾನ ನೀಡುತ್ತಿಲ್ಲ’ ಎಂದು ಪೋಸ್ಟ್ ಮಾಡಿದೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

21 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

22 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

22 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

22 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

23 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

23 hours ago