Featured

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಜೂ. 19, 20ರಂದು ವೀಕೆಂಡ್ ಕರ್ಫ್ಯೂ ಇಲ್ಲ ; ಲಾಕ್ ಡೌನ್ ಜಾರಿಯಲ್ಲಿ -Vishwanews24

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಜೂ. 19, 20ರಂದು ವೀಕೆಂಡ್ ಕರ್ಫ್ಯೂ ಇಲ್ಲ ; ಲಾಕ್ ಡೌನ್ ಜಾರಿಯಲ್ಲಿ -Vishwanews24

ಮಂಗಳೂರು, : ರಾಜ್ಯದಲ್ಲಿ ಸೋಂಕು ನಿಯಂತ್ರಿಸುವ ಹಿನ್ನೆಲೆಯಲ್ಲಿ ಈ ಹಿಂದೆ ಸರಕಾರ ಘೋಷಣೆ ಮಾಡಿರುವ ಹನ್ನೊಂದು ಜಿಲ್ಲೆಗಳಲ್ಲಿ ಜೂನ್ 19 ಹಾಗೂ 20ರಂದು ವೀಕೆಂಡ್ ಕರ್ಫ್ಯೂ ಜಾರಿಯಲ್ಲಿಲ್ಲ. ಬದಲಾಗಿ, ಪ್ರಸ್ತುತ ಇರುವ ಲಾಕ್ ಡೌನ್ ಸೋಮವಾರದ ತನಕ ಮುಂದುವರೆಯಲಿದೆ. ಸೋಮವಾರದ ನಂತರ ಸೋಂಕಿನ ಪ್ರಮಾಣದ ಬಗ್ಗೆ ಚರ್ಚೆ ನಡೆಸಿ ಜಿಲ್ಲಾಡಳಿತ ಮುಂದಿನ ನಿರ್ಧಾರ ಕೈಗೊಳ್ಳಲಿದೆ.

ಉಡುಪಿ ಸೇರಿದಂತೆ ಸೋಂಕಿತರ ಸಂಖ್ಯೆ ಕಡಿಮೆ ಇರುವ ಜಿಲ್ಲೆಗಳಲ್ಲಿ ಸರಕಾರ ಲಾಕ್ ಡೌನ್ ಸಡಿಲಿಕೆಗೊಳಿಸಿ ಈ ಹಿಂದೆ ಆದೇಶ ನೀಡಿತ್ತು. ಆ ಜಿಲ್ಲೆಗಳಲ್ಲಿ ಇಂದು ರಾತ್ರಿಯಿಂದ ಸೋಮವಾರ ಬೆಳಿಗ್ಗಿನ ತನಕ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಉಳಿದ ಜಿಲ್ಲೆಗಳಲ್ಲಿ ಮುಂದಿನ ಆದೇಶದ ತನಕ ಸದ್ಯದ ಲಾಕ್ ಡೌನ್ ಮುಂದುವರೆಯಲಿದೆ.

ಇನ್ನು ದ.ಕ. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಇದೆ ಎನ್ನುವ ಬಗ್ಗೆ ಸಾಕಷ್ಟು ಸಾರ್ವಜನಿಕರಲ್ಲಿ ಗೊಂದಲಗಳಿವೆ. ಆದರೆ, ಸದ್ಯ ಯಾವುದೇ ನಿರ್ಧಾರಗಳಿಲ್ಲ. ಶನಿವಾರ ಹಾಗೂ ರವಿವಾರ ಇಲ್ಲಿಯ ತನಕ ಇರುವ ಆದೇಶದ ಪ್ರಕಾರ ಬೆಳಿಗ್ಗೆ 6 ಗಂಟೆಯಿಂದ ಬೆಳಿಗ್ಗೆ 10 ಗಂಟೆಯ ತನಕ ಅಗತ್ಯ ಸೇವೆಗಳು ಲಭ್ಯವಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago