Featured

ಮಂಗಳೂರು: ದ.ಕ ಜಿಲ್ಲೆಯ ನಾಲ್ಕು ಮಂದಿಗೆ ಒಲಿದು ಬಂದ ರಾಷ್ಟ್ರಪತಿ ಭೇಟಿ ಅವಕಾಶ – Vishwanews24

ಮಂಗಳೂರು: ದ.ಕ ಜಿಲ್ಲೆಯ ನಾಲ್ಕು ಮಂದಿಗೆ ಒಲಿದು ಬಂದ ರಾಷ್ಟ್ರಪತಿ ಭೇಟಿ ಅವಕಾಶ

ಮಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಡಕಟ್ಟು ಜನಾಂಗದ ಸದಸ್ಯರನ್ನು ಭೇಟಿ ಮಾಡಲು ಅವಕಾಶ ಕಲ್ಪಿಸಿದ್ದು, ಈ ಸಲುವಾಗಿ ದಿಲ್ಲಿಯ ರಾಷ್ಟ್ರಪತಿ ಭವನದ ಅಮೃತ ಉದ್ಯಾನಕ್ಕೆ ದೇಶದ ಎಲ್ಲೆಡೆಯಿಂದ ಬುಡಕಟ್ಟು ಜನಾಂಗದ ವಿವಿಧ ವರ್ಗಗಳ ಪುರುಷರು ಹಾಗೂ ಮಹಿಳೆಯರನ್ನು ಆಯ್ಕೆ ಮಾಡಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದಿಂದಲೂ ಹಲವು ಸಾಧಕರನ್ನು ಆಯ್ಕೆ ಮಾಡಲಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಮಂದಿ ಆಯ್ಕೆಯಾಗಿದ್ದಾರೆ.

ದ.ಕ. ಕೊರಗರ ಜಿಲ್ಲಾ ಸಂಘದ ಅಧ್ಯಕ್ಷ ಮಂಗಳೂರಿನ ಮರಕಡದ ಎಂ. ಸುಂದರ, ಸಂಘಟನೆಯ ಸದಸ್ಯರಾದ ಕಂಕನಾಡಿಯ ರತ್ನಾ, ಕಿನ್ನಿಗೋಳಿಯ ಸುಪ್ರಿಯಾ ಮತ್ತು ಸಂಘಟನೆಯ ಖಜಾಂಚಿ ಸುಳ್ಯ ತಾಲೂಕಿನ ನೆಲ್ಲೂರು ಕೇಮ್ರಾಜೆ ಗ್ರಾಮದ ನಾರ್ಣಕಜೆಯ ರಾಮಚಂದ್ರ ಆಯ್ಕೆಯಾಗಿದ್ದಾರೆ.

ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಬುಡಕಟ್ಟು ಪ್ರತಿನಿಧಿಗಳಿಗೆ ಈ ಅವಕಾಶವಿದ್ದು, ದ.ಕ. ಕೊರಗರ ಜಿಲ್ಲಾ ಸಂಘದಿಂದ ಈ ಹೆಸರು ಸೂಚಿಸಲಾಗಿದೆ.

ಜೂನ್‌ 11ರಿಂದ 13ರ ವರೆಗೆ ದಿಲ್ಲಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು 11ರಂದು ರಾಷ್ಟ್ರಪತಿ ಭೇಟಿ ಮತ್ತು ಎರಡು ದಿನಗಳ ಕಾಲ ಹೊಸದಿಲ್ಲಿ ದರ್ಶನ ಇರಲಿದೆ.

Vishwa News 24

Recent Posts

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

5 minutes ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

10 minutes ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago