ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಗುರುವಾರವೂ ಧಾರಾಕಾರ ಮಳೆ ಮುಂದುವರಿದಿದ್ದು, ಜಿಲ್ಲೆಯ ವಿವಿಧೆಡೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನಜೀವನಕ್ಕೆ ಸಮಸ್ಯೆ ತಂದೊಡ್ಡಿದೆ. ಕೃಷಿ ತೋಟಗಳಿಗೆ ನೀರು ನುಗ್ಗಿದ ಪರಿಣಾಮ ಕೃಷಿಗೆ ಹಾನಿಯಾಗಿದೆ.
ಮಂಗಳೂರು ನಗರದಲ್ಲಿ ಬೆಳಗ್ಗೆ ಸ್ವಲ್ಪ ಬಿಡುವು ಪಡೆದಿದ್ದ ಮಳೆ ಬಳಿಕ ಬಿರುಸು ಪಡೆದಿದೆ. ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಗೆ ಜನ ಹೈರಾಣಾಗಿದ್ದು, ಮಳೆಯಲ್ಲಿ ನೆನೆದುಕೊಂಡೇ ಕಚೇರಿ, ದೈನಂದಿನ ಕೆಲಸಗಳಿಗೆ ತೆರಳುವಂತಾಗಿದೆ. ಕೆಲವೆಡೆ ರಸ್ತೆಯಲ್ಲಿ ನೀರು ನಿಂತು ನಗರದ ವಿವಿಧೆಡೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಸಮಸ್ಯೆ ತಂದೊಡ್ಡಿದೆ. ಕೆಲವು ಮನೆ ಅಂಗಳಕ್ಕೂ ನೀರು ನುಗ್ಗಿದೆ. ಬಿರುಸಿನ ಮಳೆಗೆ ಸಂಚಾರವೂ ಅಸ್ತವ್ಯಸ್ಥಗೊಂಡಿದ್ದು, ನಗರದ ಪಿವಿಎಸ್, ಹಂಪನಕಟ್ಟೆ, ಲಾಲ್‌ಬಾಗ್ ಮುಂತಾದೆಡೆ ಸಂಚಾರದಟ್ಟಣೆ ಉಂಟಾಗಿದೆ.
ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಇಂದು ರೆಡ್ ಎಲರ್ಟ್ ಘೋಷಿಸಲಾಗಿದೆ. ತಗ್ಗು ಪ್ರದೇಶ, ಸಮುದ್ರ, ನದಿ ಬದಿಗಳಲ್ಲಿ ವಾಸಿಸುವವರು ಎಚ್ಚರಿಕೆ ವಹಿಸಲು ಈಗಾಗಲೇ ಜಿಲ್ಲಾಡಳಿತ ಸೂಚನೆ ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…