Featured

ಮಂಗಳೂರು : ಧಾರ್ಮಿಕ ಕ್ಷೇತ್ರಗಳಿಗೆ ಮುಂದಿನ ಎರಡು ವಾರಗಳ ಕಾಲ ಅವಕಾಶ ನೀಡಲಾಗುವುದಿಲ್ಲ : ಜಿಲ್ಲಾಧಿಕಾರಿ -Vishwanews24

ಮಂಗಳೂರು : ಧಾರ್ಮಿಕ ಕ್ಷೇತ್ರಗಳಿಗೆ ಮುಂದಿನ ಎರಡು ವಾರಗಳ ಕಾಲ ಅವಕಾಶ ನೀಡಲಾಗುವುದಿಲ್ಲ : ಜಿಲ್ಲಾಧಿಕಾರಿ -Vishwanews24

ಮಂಗಳೂರು : ಧಾರ್ಮಿಕ ಕ್ಷೇತ್ರಗಳಿಗೆ ಮುಂದಿನ ಎರಡು ವಾರಗಳ ಕಾಲ ಅವಕಾಶ ನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಹೇಳಿದ್ದಾರೆ.

ಈ ಕುರಿತು ಮುಖ್ಯಮಂತ್ರಿಯೊಂದಿಗಿನ ವೀಡಿಯೋ ಸಂವಾದದಲ್ಲಿ ಭಾಗವಹಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅನ್‌ಲಾಕ್ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚೆ ನಡೆದಿಲ್ಲ. ಮಳೆ, ಪ್ರಕೃತಿ ವಿಕೋಪ ಕುರಿತು ಇಂದು ಜನಪ್ರತಿನಿಧಿಗಳ ಚರ್ಚೆ ಆಗಿದೆ. ಅಧಿಕೃತವಾಗಿ ಸರ್ಕಾರದ ಆದೇಶ ಬಂದ ಬಳಿಕವೇ ಅನ್‌ಲಾಕ್ ಮಾಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದರು.

“ಧಾರ್ಮಿಕ ಕ್ಷೇತ್ರಗಳಿಗೆ ಮುಂದಿನ ಎರಡು ವಾರಗಳ ಕಾಲ ಅವಕಾಶ ನೀಡಲಾಗುವುದಿಲ್ಲ, ಧರ್ಮಸ್ಥಳ, ಸುಬ್ರಹ್ಮಣ್ಯ ಈಗಾಗಲೇ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಹೊರ ಜಿಲ್ಲೆಯ ಭಕ್ತಾಧಿಗಳಿಗೆ ದೇಗುಲಗಳಿಗೆ ಬರಲು ಅವಕಾಶ ಇಲ್ಲ ಹಾಗೂ ಹೊರಗಿನಿಂದ ಬರುವ ವಾಹನ ಸೀಝ್ ಮಾಡಲು ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

ಇನ್ನು “ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6,931 ಪ್ರಸ್ತುತ ಪ್ರಕರಣಗಳಿದ್ದು, 836 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 5645 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ. ಜಿಲ್ಲೆಯಲ್ಲಿ ಶೇ.16ರಿಂದ ಶೇ.8ಕ್ಕೆ ಪಾಸಿಟಿವಿಟಿ ರೇಟ್ ಇಳಿದಿದ್ದು, ಬೆಳ್ತಂಗಡಿ ತಾಲೂಕಿನಲ್ಲಿ 12 ಶೇಕಡ ಪಾಸಿಟಿವಿಟಿ ರೇಟ್ ಹಾಗೂ ಇತರೆ ತಾಲೂಕಿನಲ್ಲಿ 6 ಶೇಕಡ ಪಾಸಿಟಿವಿಟಿ ರೇಟ್ ಇದೆ” ಎಂದು ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

9 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

10 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

10 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

10 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

11 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

11 hours ago