ಮಂಗಳೂರು : ಧಾರ್ಮಿಕ ಕ್ಷೇತ್ರಗಳಿಗೆ ಮುಂದಿನ ಎರಡು ವಾರಗಳ ಕಾಲ ಅವಕಾಶ ನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಹೇಳಿದ್ದಾರೆ.
ಈ ಕುರಿತು ಮುಖ್ಯಮಂತ್ರಿಯೊಂದಿಗಿನ ವೀಡಿಯೋ ಸಂವಾದದಲ್ಲಿ ಭಾಗವಹಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅನ್‌ಲಾಕ್ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚೆ ನಡೆದಿಲ್ಲ. ಮಳೆ, ಪ್ರಕೃತಿ ವಿಕೋಪ ಕುರಿತು ಇಂದು ಜನಪ್ರತಿನಿಧಿಗಳ ಚರ್ಚೆ ಆಗಿದೆ. ಅಧಿಕೃತವಾಗಿ ಸರ್ಕಾರದ ಆದೇಶ ಬಂದ ಬಳಿಕವೇ ಅನ್‌ಲಾಕ್ ಮಾಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದರು.
“ಧಾರ್ಮಿಕ ಕ್ಷೇತ್ರಗಳಿಗೆ ಮುಂದಿನ ಎರಡು ವಾರಗಳ ಕಾಲ ಅವಕಾಶ ನೀಡಲಾಗುವುದಿಲ್ಲ, ಧರ್ಮಸ್ಥಳ, ಸುಬ್ರಹ್ಮಣ್ಯ ಈಗಾಗಲೇ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಹೊರ ಜಿಲ್ಲೆಯ ಭಕ್ತಾಧಿಗಳಿಗೆ ದೇಗುಲಗಳಿಗೆ ಬರಲು ಅವಕಾಶ ಇಲ್ಲ ಹಾಗೂ ಹೊರಗಿನಿಂದ ಬರುವ ವಾಹನ ಸೀಝ್ ಮಾಡಲು ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ಇನ್ನು “ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6,931 ಪ್ರಸ್ತುತ ಪ್ರಕರಣಗಳಿದ್ದು, 836 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 5645 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ. ಜಿಲ್ಲೆಯಲ್ಲಿ ಶೇ.16ರಿಂದ ಶೇ.8ಕ್ಕೆ ಪಾಸಿಟಿವಿಟಿ ರೇಟ್ ಇಳಿದಿದ್ದು, ಬೆಳ್ತಂಗಡಿ ತಾಲೂಕಿನಲ್ಲಿ 12 ಶೇಕಡ ಪಾಸಿಟಿವಿಟಿ ರೇಟ್ ಹಾಗೂ ಇತರೆ ತಾಲೂಕಿನಲ್ಲಿ 6 ಶೇಕಡ ಪಾಸಿಟಿವಿಟಿ ರೇಟ್ ಇದೆ” ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…