Featured

ಮಂಗಳೂರು : ನಕಲಿ‌ ಆಧಾರ್, ಪಹಣಿ ಪತ್ರ ಸೃಷ್ಟಿಸಿ ವಂಚನೆ ಪ್ರಕರಣ ; ಮತ್ತೋರ್ವನ ಬಂಧನ – vishwanews24

ಮಂಗಳೂರು : ನಕಲಿ‌ ಆಧಾರ್, ಪಹಣಿ ಪತ್ರ ಸೃಷ್ಟಿಸಿ ವಂಚನೆ ಪ್ರಕರಣ ; ಮತ್ತೋರ್ವಬಂಧನ

ಮಂಗಳೂರು: ನಕಲಿ‌ ಆಧಾರ್ ಕಾರ್ಡ್, ಪಹಣಿ ಪತ್ರ ಸೃಷ್ಟಿಸಿ ವಂಚಿಸುತ್ತಿದ್ದ ಪ್ರಕರಣ ಸಂಬಂಧ ಸುರತ್ಕಲ್ ಪೊಲೀಸರು ಮತ್ತೋರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಗುರುಪುರ ಉಳಾಯಿಬೆಟ್ಟು ನಿವಾಸಿ ಮುಹಮ್ಮದ್ ಅಲಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಲಿ ಬಂಧನದೊಂದಿಗೆ ನಕಲಿ‌ ಆಧಾರ್ ಕಾರ್ಡ್, ಪಹಣಿ ಪತ್ರ ಸೃಷ್ಟಿಸಿ ವಂಚಿಸಿ ಬಂಧನಕ್ಕೊಳಗಾದವರ ಸಂಖ್ಯೆ 6ಕ್ಕೆ ಏರಿದಂತಾಗಿದೆ. ಆರೋಪಿಯನ್ನು ಗುರುಪುರದಲ್ಲಿ ಬಂಧಿಸಿದ್ದ ಪೊಲೀಸರು, ಗುರುವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಸಾಧ್ಯತೆ ಇದ್ದು, ಸದ್ಯ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಕಸ್ಟಡಿಗೆ ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ನಗರದ ದಡ್ಡಲ್ ಕಾಡ್ ಎಂಬಲ್ಲಿ ಆಧಾರ್ ಕಾರ್ಡ್ ಮತ್ತು ಪಹಣಿ ಪತ್ರಗಳನ್ನು ನಕಲಿಯಾಗಿ ಸೃಷ್ಟಿಸಿ ಸರಕಾರದ ಬೇರೆ ಬೇರೆ ಇಲಾಖೆಯ ಕಚೇರಿ ಮತ್ತು ನ್ಯಾಯಾಲಯಕ್ಕೆ ವಂಚಿಸುತ್ತಿರುವ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು.

ಈ ಹಿನ್ನೆಲೆಯಲ್ಲಿ ನಗರದ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಎಚ್ಚೆತ್ತುಕೊಂಡ‌ ಪೊಲೀಸರು ಮುಲ್ಕಿ ನಿವಾಸಿ ಅಬ್ದುಲ್ ರೆಹಮಾನ್ ಎಂಬಾತನನ್ನು ಸೆ.9 ರಂದು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಆತ ನೀಡಿ ಮಾಹಿತಿಯಂತೆ ತೊಕ್ಕೊಟ್ಟು ಅಂಬಿಕಾ ರಸ್ತೆ ನಿವಾಸಿ ನಿಶಾಂತ್ ನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು.

ಇದೇ ಪ್ರಕರಣಕ್ಕೆ‌ ಸಂಬಂಧಿಸಿ ಮಂಗಳೂರು ಸಿಸಿಬಿ ಪೊಲೀಸರು ದಾಳಿ ಮಾಡಿ ಬಂಟ್ವಾಳ ತಾಲೂಕಿನ ಪುದು ಸಜೀರ್ ರಸ್ತೆ ನಿವಾಸಿ ನಿತಿನ್ ಕುಮಾರ್, ಇಂದಿರಾನಗರ ಹಾಲಾಡಿ ಸಜಿಪ‌ಮುನ್ನೂರು ನಿವಾಸಿ ಹಸನ್ ರಿಯಾಝ್, ಕಾವೂರು ಫಳ್ನೀರ್ ನಿವಾಸಿ ಹನೀಫ್ ಎಂಬವರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲೂ ಒಂದು ಪ್ರಕರಣ ದಾಖಲಾಗಿತ್ತು‌. ಈ ಸಂಬಂಧ ಸುರತ್ಕಲ್ ಪೊಲೀಸರು ಗುರುಪುರ ಉಳಾಯಿಬೆಟ್ಟು ನಿವಾಸಿ ಮುಹಮ್ಮದ್ ಅಲಿಯನ್ನು ಬುಧವಾರ ಬಂಧಿಸಿ ನ್ಯಾಯಾಲಯಲಕ್ಕೆ ಹಾಜರು ಪಡಿಸಿದ್ದಾರೆ. ಸದ್ಯ ಈತನ ಬಂಧನದೊಂದಿಗೆ ನಕಲಿ‌ ಆಧಾರ್ ಕಾರ್ಡ್, ಪಹಣಿ ಪತ್ರ ಸೃಷ್ಟಿಸಿ ವಂಚಿಸುತ್ತಿದ್ದ ಪ್ರಕರಣದಲ್ಲಿ ಒಟ್ಟು 6ಮಂದಿ ಬಂಧನಕ್ಕೊಳಗಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

2 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

3 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

3 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

4 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

4 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

5 hours ago